ನವದೆಹಲಿ: ಗೋವಾದಲ್ಲಿ (Goa) ನಡೆದ ಐರನ್‌ಮ್ಯಾನ್ 70.3 ಓಟವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಸಂಸದ ತೇಜಸ್ವಿ ಸೂರ್ಯ (Tejasvi Surya) ಹಾಗೂ ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ (K Annamalai) ಅವರಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಶ್ಲಾಘಿಸಿದ್ದಾರೆ.
ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಮೋದಿ, ಇಂದು ಗೋವಾದಲ್ಲಿ ನಡೆದ ಐರನ್‌ಮ್ಯಾನ್ 70.3 ನಂತಹ ಕಾರ್ಯಕ್ರಮಗಳಲ್ಲಿ ನಮ್ಮ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದನ್ನು ನೋಡಿ ಸಂತೋಷವಾಯಿತು. ಇಂತಹ ಕಾರ್ಯಕ್ರಮಗಳು ಫಿಟ್ ಇಂಡಿಯಾ ಆಂದೋಲನಕ್ಕೆ ಕೊಡುಗೆ ನೀಡುತ್ತವೆ ಎಂದಿದ್ದಾರೆ. ಇದನ್ನೂ ಓದಿ: ತೇಜಸ್ವಿ ಸೂರ್ಯ & ಅಣ್ಣಾಮಲೈರಿಂದ ಗೋವಾದಲ್ಲಿ ಐರನ್‌ಮ್ಯಾನ್ 70.3 ಪೂರ್ಣ
Glad to see increased participation by our youth in events like Ironman 70.3 which was held in Goa today. Such events contribute towards #FitIndia movement. Congratulations to everyone who took part. Delighted that two of our young Party colleagues, Annamalai and Tejasvi Surya… pic.twitter.com/L2fn6Tf6W9
— Narendra Modi (@narendramodi) November 9, 2025
ಭಾಗವಹಿಸಿದ ಎಲ್ಲರಿಗೂ ಅಭಿನಂದನೆಗಳು. ಐರನ್‌ಮ್ಯಾನ್ ಟ್ರಯಥ್ಲಾನ್ ಅನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದವರ ಪೈಕಿ ನಮ್ಮ ಯುವ ಪಕ್ಷದ ಸಹೋದ್ಯೋಗಿಗಳಾದ ಅಣ್ಣಾಮಲೈ ಮತ್ತು ತೇಜಸ್ವಿ ಸೂರ್ಯ ಸೇರಿದ್ದಾರೆ ಎಂಬುದನ್ನು ತಿಳಿದು ಸಂತೋಷವಾಯಿತು ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಐಸಿಸ್ ಉಗ್ರ, ವಿಕೃತ ಕಾಮಿಗೆ ಸೆಂಟ್ರಲ್ ಜೈಲಲ್ಲಿ ರಾಜಾತಿಥ್ಯ – ತಪ್ಪು ಮಾಡಿದವರ ಮೇಲೆ ಕಠಿಣ ಕ್ರಮಕ್ಕೆ ಸಿಎಂ ಸೂಚನೆ!
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು ಸತತ ಎರಡನೇ ವರ್ಷವೂ ಗೋವಾದಲ್ಲಿ ನಡೆದ ಐರನ್‌ಮ್ಯಾನ್ 70.3 ಓಟವನ್ನು ಯಶಸ್ವಿಯಾಗಿ ಪೂರ್ಣಗೊಳಿಸುವ ಮೂಲಕ ತಮ್ಮ ದೈಹಿಕ ಸಾಮರ್ಥ್ಯ ಮತ್ತು ಶಿಸ್ತಿಗೆ ಮಾದರಿಯಾಗಿದ್ದಾರೆ. ಈ ವರ್ಷದ ಐರನ್‌ಮ್ಯಾನ್‌ನಲ್ಲಿ ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಸಹ ಭಾಗವಹಿಸಿದ್ದು ವಿಶೇಷ. ಸಂಸದ ಸೂರ್ಯ ಅವರು ಸ್ಪರ್ಧೆಯ ಮೂರು ಕಠಿಣ ಹಂತಗಳಾದ – 1.9 ಕಿ.ಮೀ ಈಜು, 90 ಕಿ.ಮೀ ಸೈಕ್ಲಿಂಗ್, ಮತ್ತು 21.1 ಕಿ.ಮೀ ಓಟವನ್ನು 7 ಗಂಟೆ 49 ನಿಮಿಷಗಳಲ್ಲಿ ಪೂರ್ಣಗೊಳಿಸಿದ್ದಾರೆ. ಈಜಲು ಸುಮಾರು 44 ನಿಮಿಷ, ಸೈಕ್ಲಿಂಗ್‌ಗೆ 3 ಗಂಟೆ 47 ನಿಮಿಷ ಮತ್ತು ಓಟಕ್ಕೆ 2 ಗಂಟೆ 54 ನಿಮಿಷಗಳನ್ನು ತೆಗೆದುಕೊಂಡರು. ಮತ್ತೊಂದೆಡೆ, ಅಣ್ಣಾಮಲೈ ಅವರು ಈ ಓಟವನ್ನು 8 ಗಂಟೆ 13 ನಿಮಿಷಗಳಲ್ಲಿ ಪೂರ್ಣಗೊಳಿಸಿದರು. ಇದನ್ನೂ ಓದಿ: ಪಹಲ್ಗಾಮ್ ನರಹಂತಕರಿಗೆ ತರಬೇತಿ ನೀಡಿದ್ದು ಐಎಸ್‌ಐನ `S1′ ಘಟಕ – ಸ್ಫೋಟಕ ರಹಸ್ಯ ಬಯಲು

