ನವದೆಹಲಿ: ಪ್ರತಿ ಜಿಲ್ಲೆಯಿಂದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಪ್ರವೀಣ್ ಕುಟುಂಬಕ್ಕೆ ಸಹಾಯ ಮಾಡಲಿದೆ ಎಂದು ಸಂಸದ ತೇಜಸ್ವಿ ಸೂರ್ಯ ಭರವಸೆ ನೀಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ಬಿಜೆಪಿ ಯುವ ಮೋರ್ಚಾದ ಸದಸ್ಯ ಪ್ರವೀಣ್ ಹತ್ಯೆಯಾಗಿದೆ. ಇಡೀ ರಾಜ್ಯದಲ್ಲಿ ಬೇಸರ, ದುಃಖ, ಅಸಹಾಯಕತೆ, ಆಕ್ರೋಶದ ಭಾವನೆ ಮೂಡಿಸಿದೆ. ಪ್ರವೀಣ್ ಒಂಬತ್ತು ತಿಂಗಳ ಮಗುವಿನ ತಂದೆಯಾಗಿದ್ದರು. ಯಾವುದೇ ತಪ್ಪಿಲ್ಲದಿದ್ದರೂ ದುಷ್ಕರ್ಮಿಗಳು ಹತ್ಯೆಯನ್ನು ಮಾಡಿದ್ದಾರೆ. ಬಿಜೆಪಿ ಕಾರ್ಯಕರ್ತ ಎನ್ನುವ ಕಾರಣಕ್ಕೆ ಹತ್ಯೆ ಮಾಡಲಾಗಿದೆ. ಈ ಆಘಾತ ಸಹಿಸಲು ಕುಟುಂಬಕ್ಕೆ ಶಕ್ತಿ ಕೊಡಲಿ. ನಮ್ಮ ಪ್ರತಿಯೊಬ್ಬ ಕಾರ್ಯಕರ್ತ ಅವರ ಜೊತೆಗಿದ್ದಾರೆ ಎಂದರು.
Advertisement
Advertisement
ಪ್ರತಿ ಜಿಲ್ಲೆಯಿಂದ ಯುವ ಮೋರ್ಚಾ ಕಾರ್ಯಕರ್ತರು ಪ್ರವೀಣ್ ಕುಟುಂಬಕ್ಕೆ ಸಹಾಯ ಮಾಡಲಿದೆ. ಮಂಗಳೂರಿಗೆ ತೆರಳಿ ಆರ್ಥಿಕ ಸಹಾಯ ಮಾಡಲಿದ್ದೇವೆ. ಜೊತೆಗೆ ಹಿರಿಯ ನಾಯಕರ ಜೊತೆಗೆ ಮಾತನಾಡಿದ್ದೇವೆ. ಈ ಸರಣಿ ಹತ್ಯೆ ಹಿಂದಿರುವ ಗುಂಪು ಪತ್ತೆ ಹಚ್ಚಲು ಸರ್ಕಾರದ ಮೇಲೆ ಒತ್ತಡ ಹಾಕುತ್ತಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಪ್ರವೀಣ್ ಹತ್ಯೆ ಪ್ರಕರಣ- NIA ತನಿಖೆಗೆ ವಹಿಸುವಂತೆ ಅಮಿತ್ ಶಾಗೆ ಪತ್ರ ಬರೆದ ಶೋಭಾ ಕರಂದ್ಲಾಜೆ
Advertisement
ಘಟನೆ ಸಂಬಂಧಿಸಿ ಬಿಜೆಪಿ ಕಾರ್ಯಕರ್ತರು ರಾಜೀನಾಮೆ ನೀಡುತ್ತಿರುವುದಕ್ಕೆ ಪ್ರತಿಕ್ರಿಯಿಸಿ, ಸಿದ್ದರಾಮಯ್ಯ, ಜಮೀರ್‌ರಂತಹ ರಾಜಕಾರಣಿಗಳು ಯಾವ ರೀತಿ ಕುಮ್ಮಕ್ಕು ನೀಡಲಾಗುತ್ತಿದೆ ಹಿಂದೂಗಳು ಗಮನಿಸಬೇಕು. ಯಾರ ಮೇಲೆ ಹಿಂದೆ ಹತ್ಯೆಯ ಕೇಸಿತ್ತೋ ಅವರ ಮೇಲಿನ ಎಫ್‍ಐಆರ್ ರದ್ದು ಮಾಡಲಾಗಿತ್ತು. ರಾಜಸ್ಥಾನದಲ್ಲೂ ಕನ್ಹಯ್ಯ ಲಾಲ್ ಹತ್ಯೆ ಮಾಡಲಾಯಿತು. ಈ ರೀತಿ ಆಗುತ್ತಾ ಹೋದರೆ ಸಾಮಾನ್ಯ ಜನರಿಗೂ ಭದ್ರತೆ ನೀಡಲು ಸಾಧ್ಯವಾ. ಇದು ಮತಾಂಧತೆ ಮತ್ತು ಸಿದ್ಧಾಂತದ ಸಮಸ್ಯೆ ಎಂದು ಕಿಡಿಕಾರಿದರು.
Advertisement
ಹಿಂದೂಗಳ ಹತ್ಯೆಯನ್ನು ಕಾಂಗ್ರೆಸ್ ರಾಜಕೀಯ ಪ್ರಯೋಗ ಮಾಡುತ್ತಿದೆ. ವ್ಯಕ್ತಿಯ ಹತ್ಯೆ ಎನ್ನುವುದು ರಾಜಕೀಯ ಪ್ರಯೋಗನಾ ಎಂದು ಪ್ರಶ್ನಿಸಿದ ಅವರು, ಬಿಜೆಪಿ ಈ ರೀತಿಯ ಪ್ರಯೋಗ ಮಾಡಲ್ಲ. ಕಾರ್ಯಕರ್ತರ ಆಕ್ರೋಶ ಪಕ್ಷದ ಮೇಲೆ ಅಲ್ಲ. ಹಿಂದೂ ಸಮಾಜ ಹೋಗುತ್ತಿರುವ ದಿಕ್ಕು ನೋಡಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ನಾನು ಎಲ್ಲರಿಗೂ ಮನವಿ ಮಾಡುತ್ತೇನೆ, ಯಾರು ರಾಜೀನಾಮೆ ನೀಡಬಾರದು ಎಂದರು. ಇದನ್ನೂ ಓದಿ: ಪ್ರವೀಣ್ ಹತ್ಯೆ ಪ್ರಕರಣ – ತನಿಖೆಗೆ 6 ತಂಡ ರಚನೆ, 15 ಜನ ವಶಕ್ಕೆ: ಎಡಿಜಿಪಿ