ಭೋಪಾಲ್: ಉಜ್ಜಯಿನಿಯ ಮಹಾಕಾಳೇಶ್ವರ ಮಂದಿರದಲ್ಲಿ ಸಂಸದ, ಬಿಜೆಪಿ ಯುವ ಮೊರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಬೆಂಬಲಿಗರು, ಮತ್ತು ಕಾರ್ಯಕರ್ತರು ಗಲಾಟೆ ಮಾಡಿದ್ದಾರೆ.
Advertisement
ದೇವಸ್ಥಾನದ ಭೇಟಿಗೆ ತೇಜಸ್ವಿ ಸೂರ್ಯ ತೆರಳಿದ ವೇಳೆ ಈ ಗಲಭೆ ನಡೆದಿದೆ. ಉಜ್ಜಯಿನಿಗೆ ತೆರಳಿದ್ದ ತೇಜಸ್ವಿ ಸೂರ್ಯ ನಿನ್ನೆ ಬೆಳಗ್ಗೆ ದೇವರ ದರ್ಶನಕ್ಕೆ ತೆರಳಿದ್ದರು. ಪೂಜೆಗಾಗಿ ಸೂರ್ಯ ಗರ್ಭಗುಡಿಯ ಕಡೆಗೆ ಹೋದರು. ಅವರನ್ನೇ ಅನುಸರಿಸಿದ ಬೆಂಬಲಿಗರು, ಕಾರ್ಯಕರ್ತರು ಗರ್ಭಗುಡಿ ಪ್ರವೇಶಿಸಲು ಪ್ರಯತ್ನಿಸಿದರು. ಈ ವೇಳೆ ಗರ್ಭಗುಡಿ ಪ್ರವೇಶ ಮಾಡದಂತೆ ಮಂದಿರದ ಭದ್ರತಾ ಸಿಬ್ಬಂದಿ ಹೇಳಿದ್ದಾರೆ. ಇದನ್ನೂ ಓದಿ: ಮೋದಿಗೆ ರಾಖಿ ಕಟ್ಟಿದ ಮಕ್ಕಳು
Advertisement
कलेक्टर @collectorUJN ने सख्ती दिखाते हुए कर्मचारियों से बदसलूकी और धक्का मुक्की करने वालों के खिलाफ FIR के निर्देश दिए ????
जरूरी है… ???? https://t.co/3Y5mz2l1TD
— Makarand Kale (@makarandkale) August 10, 2022
Advertisement
ಗರ್ಭಗುಡಿ ಪ್ರವೇಶಕ್ಕೆ ನಿರಾಕರಿಸುತ್ತಿದ್ದಂತೆ ಸಿಟ್ಟಿಗೆದ್ದ ಕಾರ್ಯಕರ್ತರು, ಮಂದಿರದ ಸಿಬ್ಬಂದಿ ಜೊತೆಗೆ ಗಲಾಟೆ ನಡೆಸಿದರು. ಬ್ಯಾರಿಕೇಡ್‍ಗಳನ್ನು ತೆಗೆದುಹಾಕಿ ಒಳಗೆ ಪ್ರವೇಶಿಸಿದರು. ಈ ವೇಳೆ ದೇವಸ್ಥಾನದ ಸಿಬ್ಬಂದಿ ಮೇಲೆ ಹಲ್ಲೆ ನಡೆಸಲಾಗಿದೆ ಎನ್ನುವ ಆರೋಪಗಳು ಕೇಳಿ ಬಂದಿದೆ. ಇದನ್ನೂ ಓದಿ: ಕಾಸರಗೋಡು ಮಸೀದಿಗೆ ಹೋಗಿದ್ದ ಹಂತಕರು – SDPI, PFI ಲಿಂಕ್, ವಾರಂಟ್ ಜಾರಿ ಮಾಡಿ ಆಸ್ತಿ ಸೀಜ್