ಅಷ್ಟು ದೂರದಿಂದ ವಿದ್ಯಾರ್ಥಿಗಳನ್ನು ಕರೆದುಕೊಂಡು ಬಂದರೂ ಸರ್ಕಾರ ಏನೂ ಮಾಡಿಲ್ಲ ಅಂತಿದ್ದಾರೆ: ಸೂರ್ಯ ಅಸಮಾಧಾನ

Public TV
2 Min Read
Tejasvi Surya

ಬೆಂಗಳೂರು: ಸರ್ಕಾರ ಏನೂ ಕೆಲಸ ಮಾಡದೇ ಹೋಗಿದ್ದರೆ ಇಂದು ವಿದ್ಯಾರ್ಥಿಗಳು ಉಕ್ರೇನ್‌ನಿಂದ ಬರಲು ಸಾಧ್ಯವಾಗುತ್ತಿರಲಿಲ್ಲ. ಯಾಕೆ ಕೆಲ ವಿದ್ಯಾರ್ಥಿಗಳು ಆಕ್ರೋಶದಲ್ಲಿ ಹೀಗೆ ಹೇಳಿದರು ಎಂಬುದು ತಿಳಿಯುತ್ತಿಲ್ಲ. ಉಕ್ರೇನ್ ಇಲ್ಲಿಂದ ಶ್ರೀನಿವಾಸಪುರ ಅಥವಾ ಬಸವನಗುಡಿಗೆ ಹೋದಷ್ಟು ಹತ್ತಿರವಿಲ್ಲ. ಅವರೆಲ್ಲರನ್ನೂ ಅಷ್ಟು ದೂರದಿಂದ ಕೆರೆದುಕೊಂಡು ಬಂದಿರುವ ಬಳಿಕವೂ ಸರ್ಕಾರ ಏನೂ ಮಾಡಿಲ್ಲ ಎನ್ನುತ್ತಿದ್ದಾರೆ ಎಂದು ಸಂಸದ ತೇಜಸ್ವಿ ಸೂರ್ಯ ಸರ್ಕಾರಿ ವಿರೋಧಿ ಹೇಳಿಕೆಗೆ ಅಸಮಾಧಾನ ವ್ಯಕ್ತಪಡಿಸಿದರು.

ಉಕ್ರೇನ್‌ನಲ್ಲಿ ಸಿಲುಕಿದ್ದ ವಿದ್ಯಾರ್ಥಿಗಳು ತಮ್ಮ ಮೊಬೈಲಿನಲ್ಲಿ ಟಿಕೆಟ್ ಬುಕ್ ಮಾಡಿಕೊಂಡು ಬಂದ್ರಾ ಅಥವಾ ನಮ್ಮ ದೇಶ ಕಳುಹಿಸಿದ ವಿಮಾನದಲ್ಲಿ ಬಂದ್ರಾ..? ಈ ರೀತಿಯಾಗಿ ಸರ್ಕಾರವನ್ನು ದೂರುವುದು ತಪ್ಪು ಎಂದು ಹೇಳಿದರು. ಇದನ್ನೂ ಓದಿ: ಕಂದಾಯ ದಾಖಲೆ ಮನೆ ಬಾಗಿಲಿಗೆ- ಯೋಜನೆಗೆ ಸಿಎಂ ಚಾಲನೆ

tejasvi surya

ನವೀನ್ ಮೃತದೇಹ ತರುವ ವಿಚಾರವಾಗಿ ಮಾತನಾಡಿದ ತೇಜಸ್ವಿ ಸೂರ್ಯ, ಅಲ್ಲಿನ ಇಂಡಿಯನ್ ಎಂಬಸಿ ಮೃತದೇಹ ಪತ್ತೆ ಮಾಡಿದೆ. ಭಾರತಕ್ಕೆ ಕರೆತರುವ ವ್ಯವಸ್ಥೆ ಮಾಡುತ್ತಿದೆ. ಜನರಲ್ ರಾವತ್ ಮರಣ ಸಂದರ್ಭದಲ್ಲೂ ದೇಹವನ್ನು ಗುರುತಿಸುವಲ್ಲಿ ತಡವಾಗಿತ್ತು. ಈ ಬಗ್ಗೆ ಎಲ್ಲಾ ರೀತಿಯ ಪ್ರಯತ್ನ ನಡೆಯುತ್ತಿದೆ. ಅಲ್ಲಿ ಯುದ್ಧದ ಪರಿಸ್ಥಿತಿ ಹೇಗೆ ಇರುತ್ತದೆ ಎಂಬುದು ಅಲ್ಲಿಯವರಿಗೆ ಮಾತ್ರ ತಿಳಿದಿರುತ್ತದೆ. ಹೀಗಾಗಿ ನವೀನ್ ಮೃತದೇಹ ಬರುತ್ತದೆ ಎಂಬ ಭರವಸೆ ಇಟ್ಟುಕೊಳ್ಳೋಣ ಎಂದು ಹೇಳಿದರು.

3 ವಾರಗಳಿಂದ ಆಪರೇಶನ್ ಗಂಗಾ ಯೋಜನೆ ಜಾರಿಯಲ್ಲಿತ್ತು. ಉಕ್ರೇನ್‌ನ ವಿವಿಧ ಭಾಗಗಳಲ್ಲಿ ಸಿಲುಕಿದ್ದ 19,448 ವಿದ್ಯಾರ್ಥಿಗಳನ್ನು ತಾಯ್ನಾಡಿಗೆ ಸುರಕ್ಷಿತವಾಗಿ ಕರೆದುಕೊಂಡು ಬರಲಾಗಿದೆ. ಅದರಲ್ಲಿ 633 ಕರ್ನಾಟಕದ ವಿದ್ಯಾರ್ಥಿಗಳು ಇದ್ದರು. ಆಪರೇಶನ್ ಗಂಗಾ ಕಾರ್ಯಾಚರಣೆ ಅತ್ಯಂತ ಜಟಿಲವಾಗಿದ್ದರೂ ಪ್ರಧಾನಿ ನರೇಂದ್ರ ಮೋದಿ ತಮ್ಮ ಸತತ ಪ್ರಯತ್ನದಿಂದ ಉಕ್ರೇನ್ ಹಾಗೂ ರಷ್ಯಾ ಅಧ್ಯಕ್ಷರ ಜೊತೆ ಸಂಪರ್ಕ ಮಾಡಿ ಅದನ್ನು ಯಶಸ್ವಿಯಾಗಿಸಿದ್ದಾರೆ. ಹೀಗಾಗಿ ವಿದ್ಯಾರ್ಥಿಗಳ ಪರವಾಗಿ ನಾನು ಪ್ರಧಾನಿಗೆ ಧನ್ಯವಾದ ತಿಳಿಸುತ್ತೇನೆ ಎಂದರು. ಇದನ್ನೂ ಓದಿ: ಸರ್ಕಾರ ತಾರತಮ್ಯ ಮಾಡುತ್ತಿದೆ, ಬಿಜೆಪಿ ಶಾಸಕರಿಗೆ ಹೆಚ್ಚು ನಮಗೆ ಕಡಿಮೆ ಅನುದಾನ ನೀಡಿದೆ: ರಾಮಲಿಂಗಾ ರೆಡ್ಡಿ

operation ganga

ಕೇವಲ ವಿದ್ಯಾರ್ಥಿಗಳು ಮಾತ್ರವಲ್ಲ, ಅವರ ಸಾಕು ಪ್ರಾಣಿಗಳನ್ನೂ ಆಪರೇಶನ್ ಗಂಗಾ ಮೂಲಕ ಸುರಕ್ಷಿತವಾಗಿ ಕರೆತರಲಾಗಿದೆ. ನನ್ನ ಕಚೇರಿಯಿಂದಲೂ ಸಾಕಷ್ಟು ಕೆಲಸ ಮಾಡಲಾಗಿದೆ. 400 ವಿದ್ಯಾರ್ಥಿಗಳ ಪಟ್ಟಿ ತಯಾರಿಸಿ ಕೇಂದ್ರಕ್ಕೆ ಸಲ್ಲಿಸಲಾಗಿತ್ತು. ಉಕ್ರೇನ್‌ನ ವಾಟ್ಸಪ್ ಗ್ರೂಪ್‌ಗಳಿಗೆ ಸೇರಿಸಿ ವಿದ್ಯಾರ್ಥಿಗಳ ಸಂಪರ್ಕ ಪಡೆಯಲಾಗಿತ್ತು. ಈ ವಿಚಾರವಾಗಿ ಕೆಲಸ ಮಾಡಿದ ವಿದೇಶಾಂಗ ಸಚಿವ ಜೈಶಂಕರ್, ವಿದ್ಯಾರ್ಥಿಗಳನ್ನು ಕರೆತರಲು ಹೋಗಿದ್ದ ಹರ್ದೀಪ್ ಸಿಂಗ್, ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ ಎಂದರು.

2014ರ ಮೊದಲು ಈ ದೇಶದಲ್ಲಿ ಮೆಡಿಕಲ್ ಕಾಲೇಜು ಸೀಟ್‌ಗಳ ಸಂಖ್ಯೆ 54 ಸಾವಿರ ಇತ್ತು. ಮೋದಿ ಪ್ರಧಾನಿಯಾದ ಬಳಿಕ 86,648 ರಷ್ಟು ಹೆಚ್ಚಳವಾಗಿದೆ. ಮೋದಿ 7 ವರ್ಷಗಳಲ್ಲಿ ಶೇ.55 ರಷ್ಟು ಮೆಡಿಕಲ್ ಸೀಟ್‌ಗಳನ್ನು ಹೆಚ್ಚಳ ಮಾಡಿದ್ದಾರೆ. ಪಿಜಿ ಸೀಟ್‌ಗಳು 24 ಸಾವಿರ ಇತ್ತು. 6 ವರ್ಷಗಳಲ್ಲಿ ಶೇ.73 ರಷ್ಟು ಹೆಚ್ಚಳ ಮಾಡಿದ್ದಾರೆ ಎಂದರು.

Share This Article
Leave a Comment

Leave a Reply

Your email address will not be published. Required fields are marked *