ಬೆಂಗಳೂರು: ಖಾತೆ ಹಂಚಿಕೆಯ ಬಳಿಕ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ಸಚಿವರು ಸೇರಿದಂತೆ ಕಾರ್ಯಕರ್ತರು ಪರೋಕ್ಷವಾಗಿ ಅಸಮಾಧಾನ ಹೊರ ಹಾಕುತ್ತಿದ್ದಾರೆ. ಎಲ್ಲ ಬೆಳವಣಿಗೆಗಳನ್ನು ಗಮನಿಸಿರುವ ಕರ್ನಾಟಕ ಬಿಜೆಪಿಯ ಉಪಾಧ್ಯಕ್ಷೆ, ಮಾಜಿ ಕೇಂದ್ರ ಸಚಿವ ಅನಂತಕುಮಾರ್ ಅವರ ಪತ್ನಿ ತೇಜಸ್ವಿನಿ ಅನಂತಕುಮಾರ್ ಟ್ವೀಟ್ ಮೂಲಕ ಕಾರ್ಯಕರ್ತರಿಗೆ ಸಲಹೆ ನೀಡಿದ್ದಾರೆ.
ಟ್ವೀಟ್‍ನಲ್ಲಿ ಏನಿದೆ?
370 ಮತ್ತು 35ಎ ತೆಗೆದುಹಾಕಿ ಅಖಂಡ ಭಾರತದ ಕನಸನ್ನು ನನಸು ಮಾಡುತ್ತಿರುವ ಮೋದಿ ನಾಯಕತ್ವವನ್ನು ಗಟ್ಟಿಗೊಳಿಸಲು ಕರ್ನಾಟಕ ಭಾಜಪದ ಎಲ್ಲಾ ಕಾರ್ಯಕರ್ತರು ನಿಸ್ವಾರ್ಥವಾಗಿ ಕೆಲಸ ಮಾಡೋಣ ಒಳಜಗಳ ಬದಿಗಿಟ್ಟು ಭಾರತವನ್ನು ವಿಶ್ವಗುರು ವಾಗಿಸಲು ಪ್ರತಿಜ್ಞೆ ಮಾಡೋಣ. ಇದನ್ನೂ ಓದಿ: ಖಾತೆ ಹಂಚಿಕೆ ಬೆನ್ನಲ್ಲೇ ಬಿಜೆಪಿ ಧಗಧಗ – ಬಯಸಿದ ಖಾತೆ ಸಿಗದಿದ್ದಕ್ಕೆ ಭುಗಿಲೆದ್ದ ಭಿನ್ನಮತ
Advertisement
370 ಮತ್ತು 35ಎ ತೆಗೆದುಹಾಕಿ ಅಖಂಡ ಭಾರತದ ಕನಸನ್ನು ನನಸು ಮಾಡುತ್ತಿರುವ ಮೋದಿ ನಾಯಕತ್ವವನ್ನು ಗಟ್ಟಿಗೊಳಿಸಲು ಕರ್ನಾಟಕ ಭಾಜಪಾದ ಎಲ್ಲಾ ಕಾರ್ಯಕರ್ತರು ನಿಸ್ವಾರ್ಥವಾಗಿ ಕೆಲಸ ಮಾಡೋಣ ಒಳಜಗಳ ಬದಿಗಿಟ್ಟು ಭಾರತವನ್ನು ವಿಶ್ವಗುರು ವಾಗಿಸಲು ಪ್ರತಿಜ್ಞೆ ಮಾಡೋಣ. @BJP4Karnataka
— Tejaswini AnanthKumar (@Tej_AnanthKumar) August 27, 2019
Advertisement
ಖಾತೆ ಹಂಚಿಕೆ: ಸೋಮವಾರ ಖಾತೆ ಹಂಚಿಕೆಯಾಗಿದ್ದು, ಅಶ್ವಥ್ ನಾರಾಯಣ, ಗೋವಿಂದ ಕಾರಜೋಳ ಮತ್ತು ಲಕ್ಷ್ಮಣ ಸವದಿ ಅವರಿಗೆ ಉಪ ಮುಖ್ಯಮಂತ್ರಿ ಪಟ್ಟ ಒಲಿದಿದೆ. ಕೆಲವರು ಸಚಿವರು ಬಯಸಿದ ಖಾತೆ ಸಿಗದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿದ್ದು, ಪರೋಕ್ಷವಾಗಿ ತಮ್ಮ ಬೇಸರವನ್ನು ಹೊರ ಹಾಕುತ್ತಿದ್ದಾರೆ. ಇತ್ತ ಸಚಿವ ಶ್ರೀರಾಮುಲು ಅವರಿಗೆ ಡಿಸಿಎಂ ಪಟ್ಟ ಸಿಗದ ಹಿನ್ನೆಲೆಯಲ್ಲಿ ಕೊಪ್ಪಳದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಸಚಿವ ಸ್ಥಾನ ವಂಚಿತ ಶಾಸಕರು ಸಹ ಅಸಮಾಧಾನಗೊಂಡಿದ್ದಾರೆ. ದಸಾರಾ ಕಾರ್ಯಕ್ರಮಕ್ಕೆ ಗೈರಾಗುವ ಮೂಲಕ ಶಾಸಕ ಎಸ್‍ಎ ರಾಮದಾಸ್ ಅಸಮಾಧಾನ ಹೊರಹಾಕಿದ್ದರು. ಇದನ್ನೂ ಓದಿ: ಮೂವರು ಡಿಸಿಎಂ, ಬೊಮ್ಮಾಯಿಗೆ ಗೃಹ, ಸವದಿಗೆ ಸಾರಿಗೆ – ಯಾರಿಗೆ ಯಾವ ಖಾತೆ?
Advertisement
Advertisement