Connect with us

Latest

ಪ್ರಾಮಾಣಿಕ ನಾಯಕ ಸಿಎಂ ಆಗಲೆಂದು ನಾಲಿಗೆ ಕತ್ತರಿಸಿ ದೇವರ ಹುಂಡಿಗೆ ಹಾಕಿದ ಮತದಾರ

Published

on

ಹೈದರಾಬಾದ್: ಪ್ರಾಮಾಣಿಕ ನಾಯಕ ಮುಖ್ಯಮಂತ್ರಿಯಾಗಲಿ ಅಂತಾ ಮತದಾರನೊಬ್ಬ ತನ್ನ ನಾಲಿಗೆ ಕತ್ತರಿಸಿಕೊಂಡು, ದೇವರ ಹುಂಡಿಗೆ ಹಾಕಿದ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.

ಪಶ್ಚಿಮ ಗೋದಾವರಿ ಜಿಲ್ಲೆಯ ಮಹೇಶ್ (35) ಬುಧವಾರ ನಾಲಿಗೆ ಕತ್ತರಿಸಿಕೊಂಡಿದ್ದಾರೆ. ಮಹೇಶ್ ಹೈದ್ರಾಬಾದ್‍ನ ಶ್ರೀನಗರ ಕಾಲೊನಿಯ ವೆಂಕಟೇಶ್ವರ ದೇವಾಲಯದ ಹುಂಡಿಗೆ ನಾಲಿಗೆ ಹಾಕಿದ್ದಾರೆ. ಅವರನ್ನು ಸ್ಥಳೀಯ ಓಸ್ಮಾನಿಯಾ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ತೆಲಂಗಾಣ ವಿಧಾನಸಭೆ ಚುನಾವಣೆಯ ಮತದಾನ ಪೂರ್ಣಗೊಂಡಿದ್ದು, ಮತ ಎಣಿಕೆಯು ಡಿಸೆಂಬರ್ 11ರಂದು ನಡೆಯಲಿದೆ. ಈ ನಿಟ್ಟಿನಲ್ಲಿ ನಾಯಕರ ಗೆಲುವಿಗಾಗಿ ಅಭಿಮಾನಿಗಳು ಪೂಜೆ, ದಾನದ ಮೂಲಕ ದೇವರಿಗೆ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.

ತೆಲಂಗಾಣ ಹಾಗೂ ಆಂಧ್ರ ಪ್ರದೇಶಗಳಲ್ಲಿ ಪ್ರಾಮಾಣಿಕ ರಾಜಕಾರಣಿಗಳು ಮುಖ್ಯಮಂತ್ರಿಗಳಾಗಬೇಕು ಎಂದು ಮಹೇಶ್ ಪತ್ರ ಬರೆದಿಟ್ಟಿದ್ದಾರೆ ಎಂದು ಬಂಜಾರ ಹಿಲ್ಸ್ ಇನ್ಸ್‍ಪೆಕ್ಟರ್ ಗೋವಿಂದ ರೆಡ್ಡಿ ತಿಳಿಸಿದ್ದಾರೆ.

ಮಹೇಶ್ ಅವರು ಕಳೆದ 2004 ಹಾಗೂ 2009ರ ಚುನಾವಣೆ ವೇಳೆ ಮಹೇಶ್ ನಾಲಿಗೆಯನ್ನು ಕತ್ತರಿಸಿಕೊಂಡಿದ್ದ ಎನ್ನಲಾಗಿದೆ. ಮಹೇಶ್ ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ವೈ.ಎಸ್.ರಾಜಶೇಖರ ರೆಡ್ಡಿ ಅವರು ಗೆಲುವು ಸಾಧಿಸಲಿ ಎನ್ನುವ ಉದ್ದೇಶದಿಂದ ನಾಲಿಗೆ ಕತ್ತರಿಸಿಕೊಂಡಿದ್ದ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv