ಹೈದರಾಬಾದ್: ಲಾರಿ ಹಾಗೂ ಆಟೋ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ ಘಟನೆ ಬುಧವಾರ ಬೆಳಗ್ಗೆ ತೆಲಂಗಾಣದ (Telangana) ವಾರಂಗಲ್‍ನ (Warangal) ಯೆಲ್ಲಂಡ ಎಂಬಲ್ಲಿ ನಡೆದಿದೆ. ಅಪಘಾತದಲ್ಲಿ (Accident) ಐವರು ಗಾಯಗೊಂಡಿದ್ದಾರೆ ಎಂದು ಪೊಲೀಸರು (Police) ತಿಳಿಸಿದ್ದಾರೆ.
ಅಪಘಾತಕ್ಕೀಡಾದ ಆಟೋದಲ್ಲಿದ್ದವರು ಜೇನು ಸಂಗ್ರಹಿಸಲು ಕಾಡಿಗೆ ತೆರಳುತ್ತಿದ್ದರು. ಈ ವೇಳೆ ಎದುರಿನಿಂದ ಬಂದ ಲಾರಿ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ. ಈ ವೇಳೆ ಸ್ಥಳದಲ್ಲೇ ಐವರು ಸಾವನ್ನಪ್ಪಿದ್ದಾರೆ. ಗಾಯಗೊಂಡ ಐವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಪತ್ನಿಗೆ ಗುಂಡು ಹಾರಿಸಿ ಹತ್ಯೆ ಮಾಡಿದ ಜಡ್ಜ್
ಬೆಳಗ್ಗೆ 8.30ರ ಸುಮಾರಿಗೆ ಈ ಘಟನೆ ನಡೆದಿದೆ. ಘಟನೆಯಲ್ಲಿ ಆಟೋ ರಿಕ್ಷಾ ಚಾಲಕ ಸೇರಿದಂತೆ ಮೃತರ ಶವಗಳು ಛಿದ್ರಗೊಂಡಿದ್ದು, ಯಾರ ಗುರುತು ಪತ್ತಿಯಾಗಿಲ್ಲ ಎಂದು ವರ್ಧನ್ನಪೇಟೆ ಪೊಲೀಸರು ತಿಳಿಸಿದ್ದಾರೆ.
ಲಾರಿ ಚಾಲಕನನ್ನು ವಶಕ್ಕೆ ಪಡೆಯಲಾಗಿದ್ದು, ಲಾರಿ ಚಾಲಕ ಮದ್ಯ ಸೇವಿಸಿರುವ ಸಾಧ್ಯತೆಗಳಿವೆ ಎಂದು ಪೊಲೀಸರು ಶಂಕಿಸಿದ್ದಾರೆ. ಇದನ್ನೂ ಓದಿ: ಕರ್ನಾಟಕ ನೆರೆ ರಾಜ್ಯ ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ 3.4 ತೀವ್ರತೆ ಭೂಕಂಪ
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]