ಹೈದರಾಬಾದ್: ಪ್ರಚಾರದ ವೇಳೆ ಭಾರತ್ ರಾಷ್ಟ್ರ ಸಮಿತಿ (BRS) ಸಂಸದ ಕೋಠಾ ಪ್ರಭಾಕರ ರೆಡ್ಡಿಗೆ (Kotha Prabhakar Reddy) ಅಪರಿಚಿತನೊಬ್ಬ ಚಾಕುವಿನಿಂದ ಇರಿದು ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಸೋಮವಾರ ಸಿದ್ದಿಪೇಟೆಯಲ್ಲಿ ಚುನಾವಣಾ ಪ್ರಚಾರದ ವೇಳೆ ಅಪರಿಚಿತನೊಬ್ಬ ಸಂಸದರ ಹೊಟ್ಟೆಗೆ ಇರಿದಿದ್ದಾರೆ ಎಂದು ಸಿದ್ದಿಪೇಟೆ ಪೊಲೀಸರು ತಿಳಿಸಿದ್ದಾರೆ. ದೌಲತಾಬಾದ್ ಮಂಡಲದ ಸೂರಂಪಲ್ಲಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ರೆಡ್ಡಿ ಅವರು ದುಬ್ಬಾಕ್ ವಿಧಾನಸಭಾ ಕ್ಷೇತ್ರದ ಬಿಆರ್‌ಎಸ್ ಅಭ್ಯರ್ಥಿ. ಇದನ್ನೂ ಓದಿ: ಮುಂದಿನ 15 ದಿನ ನಿತ್ಯ ತಮಿಳುನಾಡಿಗೆ 2,600 ಕ್ಯೂಸೆಕ್ ನೀರು ಬಿಡಿ – ಕರ್ನಾಟಕಕ್ಕೆ CWRC ನಿರ್ದೇಶನ
Advertisement
Advertisement
ಬಿಆರ್‌ಎಸ್ ಸಂಸದರನ್ನು ಗಜ್ವೇಲ್‌ಗೆ ಸ್ಥಳಾಂತರಿಸಲಾಗಿದ್ದು, ಈಗ ಸುರಕ್ಷಿತವಾಗಿದ್ದಾರೆ ಎಂದು ಸಿದ್ದಿಪೇಟೆ ಕಮಿಷನರ್ ಎನ್.ಶ್ವೇತಾ ತಿಳಿಸಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆಯಲಾಗಿದ್ದು, ಹೆಚ್ಚಿನ ತನಿಖೆಯನ್ನು ಆರಂಭಿಸಲಾಗಿದೆ ಎಂದು ಸಿದ್ದಿಪೇಟೆ ಕಮಿಷನರ್ ತಿಳಿಸಿದ್ದಾರೆ.
Advertisement
ಚೂರಿ ಇರಿತ ಘಟನೆ ಕುರಿತು ಪ್ರತಿಕ್ರಿಯಿಸಿರುವ ತೆಲಂಗಾಣ ರಾಜ್ಯಪಾಲ ತಮಿಳಿಸೈ ಸೌಂದರರಾಜನ್, ದೌಲತಾಬಾದ್ ಮಂಡಲದ ಸೂರಂಪಳ್ಳಿಯಲ್ಲಿ ಚುನಾವಣಾ ಪ್ರಚಾರದ ವೇಳೆ ಸಂಸದ ಕೋಠಾ ಪ್ರಭಾಕರ್ ರೆಡ್ಡಿ ಅವರ ಮೇಲೆ ನಡೆದ ಹಲ್ಲೆಯ ಬಗ್ಗೆ ತಿಳಿದು ಆಘಾತವಾಯಿತು. ಪ್ರಜಾಪ್ರಭುತ್ವದಲ್ಲಿ ಹಿಂಸಾಚಾರಕ್ಕೆ ಯಾವುದೇ ಸ್ಥಾನವಿಲ್ಲ. ಅಂತಹ ಘಟನೆಗಳು ಪ್ರಜಾಪ್ರಭುತ್ವ ಪ್ರಕ್ರಿಯೆಗೆ ಅಪಾಯವನ್ನುಂಟುಮಾಡುತ್ತವೆ ಎಂಬುದನ್ನು ಪ್ರತಿಬಿಂಬಿಸುವಂತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಭಾರತದ ನೆಲದಲ್ಲಿ ಹಮಾಸ್ ಕಾರ್ಯಕ್ರಮ ಬೇಕಿತ್ತಾ? – ಕೇರಳ ಸರ್ಕಾರದ ವಿರುದ್ಧ ವ್ಯಾಪಕ ಆಕ್ರೋಶ
Advertisement
ಚುನಾವಣಾ ಅವಧಿಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ಮತ್ತು ಪ್ರಚಾರಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವಂತೆ ನಾನು ಪೊಲೀಸ್ ಮಹಾನಿರ್ದೇಶಕರಿಗೆ ನಿರ್ದೇಶನ ನೀಡುತ್ತೇನೆ ಎಂದು ಸೌಂದರರಾಜನ್ ತಿಳಿಸಿದ್ದಾರೆ.
Web Stories