ಹೈದರಾಬಾದ್: ಮುಂಬರುವ ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ತೆಲಂಗಾಣ ರಾಷ್ಟ್ರ ಸಮಿತಿ(ಟಿಆರ್‌ಎಸ್) ಜೊತೆಗೆ ಕಾಂಗ್ರೆಸ್ ಸ್ಪರ್ಧಿಸಲಿದೆ ಎಂದು ಸಂಸದ ಹಾಗೂ ತೆಲಂಗಾಣ ಬಿಜೆಪಿ ಅಧ್ಯಕ್ಷ ಬಂಡಿ ಸಂಜಯ್ ಕುಮಾರ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಟಿಆರ್‌ಎಸ್ ಒಟ್ಟಿಗೆ ಸ್ಪರ್ಧಿಸುವುದು ಖಚಿತವಾಗಿದ್ದು, 31 ವಿಧಾನಸಭೆ ಮತ್ತು 4 ಸಂಸದ ಸ್ಥಾನಗಳಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಕಾಂಗ್ರೆಸ್ ಹೋರಾಡುತ್ತಿರುವುದು ಬಿಜೆಪಿಯೊಂದಿಗೆ ಅಲ್ಲ ಟಿಆರ್‌ಎಸ್‍ನೊಂದಿಗೆ ಎಂದರು.
Advertisement
Advertisement
ರಾಜ್ಯದಲ್ಲಿ ಬಿಜೆಪಿಯನ್ನು ಎದುರಿಸಲು ಸಾಧ್ಯವಾಗದ ಕಾರಣ ಕಾಂಗ್ರೆಸ್ ಮತ್ತು ಟಿಆರ್‌ಎಸ್, ಎಐಎಂಐಎಂ ಜೊತೆ ಮೈತ್ರಿ ಮಾಡಿಕೊಳ್ಳುತ್ತಿವೆ. ರಾಹುಲ್ ಗಾಂಧಿ ಅವರು ಪ್ರಗತಿ ಭವನದಲ್ಲಿ ಟಿಆರ್‌ಎಸ್ ಅವರು ತಯಾರಿಸಿದ ಸ್ಕ್ರೀಪ್ಟ್‌ನ್ನು ಓದುತ್ತಾರೆ ಎಂದು ಟೀಕಿಸಿದರು. ಇದನ್ನೂ ಓದಿ: ಟಿಆರ್‌ಎಸ್‌ನ ರಿಮೋಟ್ ಕಂಟ್ರೋಲ್ ಬಿಜೆಪಿಯಲ್ಲಿದೆ: ರಾಹುಲ್ ಗಾಂಧಿ
Advertisement
Advertisement
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೆಸಿಆರ್‌ಯನ್ನು ಅಧಿಕಾರದಿಂದ ಕಿತ್ತೊಗೆಯಬೇಕು. ಬಿಜೆಪಿ ಅಧಿಕಾರಕ್ಕೆ ಬರುವ ಮೂಲಕ ಕೆಸಿಆರ್ ಸರ್ವಾಧಿಕಾರವನ್ನು ಅಂತ್ಯ ಮಾಡಬೇಕು ಎಂದು ಮನವಿ ಮಾಡಿದರು. ಇದನ್ನೂ ಓದಿ: ಧ್ವನಿವರ್ಧಕ ಗಲಾಟೆ ಮುಗಿದಿದ್ದು, ರಾಜ್ಯದಲ್ಲಿ ಶಾಂತಿ ನೆಲೆಸಿದೆ: ಸಂಜಯ್ ರಾವತ್