ಹೈದರಾಬಾದ್: ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಜ್ಞಾನೇಂದ್ರ ಪ್ರಸಾದ್ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ನೋಡಿದಾಗ ಫ್ಯಾನ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪ್ರಸಾದ್ ಮೃತದೇಹ ಪತ್ತೆಯಾಗಿದೆ. ಇದನ್ನೂ ಓದಿ: ಸಿಬಲ್ ವಿರುದ್ದ ನ್ಯಾಯಾಂಗ ನಿಂದನೆ ಕೇಸ್: ಅಟಾರ್ನಿ ಜನರಲ್ಗೆ ಮನವಿ
Advertisement
Advertisement
ಮಿಯಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಸೋಮವಾರ ಬೆಳಗ್ಗೆ ಮಿಯಾಪುರ ಪೊಲೀಸರಿಗೆ ಮಾಹಿತಿ ಲಭಿಸಿತ್ತು. ನಂತರ ಘಟನೆ ಬೆಳಕಿಗೆ ಬಂದಿದೆ.
Advertisement
ತಕ್ಷಣವೇ ಒಂದು ತಂಡವನ್ನು ಸ್ಥಳಕ್ಕೆ ಕಳುಹಿಸಲಾಯಿತು. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ನೋಡಿದಾಗ ನೇಣು ಬಿಗಿದ ಸ್ಥಿತಿಯಲ್ಲಿ ಪ್ರಸಾದ್ ಮೃತದೇಹ ಕಂಡುಬಂದಿದೆ. ಇದನ್ನೂ ಓದಿ: ಮಹಿಳಾ ಬ್ಯಾಂಕ್ ಮ್ಯಾನೇಜರ್ ಮೇಲೆ ಆ್ಯಸಿಡ್ ದಾಳಿ
Advertisement
ಪ್ರಸಾದ್ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಪ್ರಸಾದ್ ಕಳೆದ ಕೆಲವು ದಿನಗಳಿಂದ ತಮ್ಮ ಪೆಂಟ್ಹೌಸ್ನಲ್ಲಿ ವಾಸಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಸಿಆರ್ಪಿಸಿ ಸೆಕ್ಷನ್ 174ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಸಂಬಂಧ ಹೆಚ್ಚಿನ ತನಿಖೆಗಳು ನಡೆಯುತ್ತಿವೆ.