ಹೈದರಾಬಾದ್: ಪ್ರವಾದಿ ಮೊಹಮ್ಮದ್ ವಿರುದ್ಧ ಅವಹೇಳಕಾರಿ ಹೇಳಿಕೆ ನೀಡಿದ್ದಕ್ಕೆ ತೆಲಂಗಾಣದ ಬಿಜೆಪಿ ಶಾಸಕ ಟಿ.ರಾಜಾ ಸಿಂಗ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರವಾದಿ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಬಿಜೆಪಿ ಶಾಸಕನ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ನಿನ್ನೆ ರಾತ್ರಿ ಹೈದರಾಬಾದ್‌ನಲ್ಲಿ ಭಾರಿ ಪ್ರತಿಭಟನೆ ನಡೆಸಲಾಯಿತು. ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವ ಕಾನೂನಿನ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಹೈದರಾಬಾದ್‌ನ ದಕ್ಷಿಣ ವಲಯದ ಉಪ ಪೊಲೀಸ್ ಆಯುಕ್ತ ಪಿ.ಸಾಯಿ ಚೈತನ್ಯ ತಿಳಿಸಿದ್ದಾರೆ. ಇದನ್ನೂ ಓದಿ: ನೂಪುರ್ ಶರ್ಮಾ ಹತ್ಯೆಗೈಯಲು ಟರ್ಕಿಯಲ್ಲಿ ಉಗ್ರನಿಗೆ ಐಸಿಸ್ ತರಬೇತಿ!
ಪ್ರವಾದಿ ಮೊಹಮ್ಮದ್ ಬಗ್ಗೆ ಅವಹೇಳನಕಾರಿ ಕಾಮೆಂಟ್‌ಗಳನ್ನು ಮಾಡುವ ವೀಡಿಯೋವನ್ನು ಸಿಂಗ್ ಬಿಡುಗಡೆ ಮಾಡಿದ್ದರು. ಅವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಸೋಮವಾರ ರಾತ್ರಿ ನಗರ ಪೊಲೀಸ್ ಕಮಿಷನರ್ ಸಿ.ವಿ.ಆನಂದ್ ಅವರ ಕಚೇರಿ ಮತ್ತು ಹೈದರಾಬಾದ್‌ನ ಇತರ ಭಾಗಗಳಲ್ಲಿ ಪ್ರತಿಭಟನೆಗಳು ನಡೆದವು.
ಸಿಂಗ್ ಅವರು ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ. ಅವರನ್ನು ತಕ್ಷಣ ಬಂಧಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದರು. ತಕ್ಷಣ ಅವರನ್ನು ವಶಕ್ಕೆ ಪಡೆದು ನಂತರ ವಿವಿಧ ಠಾಣೆಗಳಿಗೆ ರವಾನಿಸಲಾಗಿದೆ. ಇದನ್ನೂ ಓದಿ: 2 ವರ್ಷಗಳ ನಂತರ ಭಾರತದ ವಿದ್ಯಾರ್ಥಿಗಳಿಗೆ ವೀಸಾ ನೀಡಲು ಚೀನಾ ಅನುಮತಿ
ನಗರದ ಗೋಶಾಮಹಲ್‌ನ ಶಾಸಕ ಟಿ.ರಾಜಾ ಸಿಂಗ್ ಕಳೆದ ವಾರ ಹಾಸ್ಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿದ್ದರು. ಸ್ಟ್ಯಾಂಡ್-ಅಪ್ ಕಾಮಿಡಿಯನ್ ಮುನಾವ್ವರ್ ಫಾರೂಕಿ ಅವರ ಕಾರ್ಯಕ್ರಮವನ್ನು ರದ್ದುಗೊಳಿಸಲು ಸುಮಾರು 50 ಬೆಂಬಲಿಗರೊಂದಿಗೆ ಕಾರ್ಯಕ್ರಮದ ಸ್ಥಳಕ್ಕೆ ತಲುಪಲು ಪ್ರಯತ್ನಿಸಿದಾಗ ಅವರನ್ನು ಶುಕ್ರವಾರ ಪೊಲೀಸರು ತಡೆದು ಕಸ್ಟಡಿಗೆ ತೆಗೆದುಕೊಂಡರು.