ಹೈದರಾಬಾದ್: 7ನೇ ತರಗತಿ ವಿದ್ಯಾರ್ಥಿನಿ (Student) ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿದ ಘಟನೆ ತೆಲಂಗಾಣದ (Telangana) ಸಿದ್ದಿಪೇಟ್ ( Siddipet) ಜಿಲ್ಲೆಯಲ್ಲಿ ನಡೆದಿದೆ.
ಘಟನೆ ಬಗ್ಗೆ ತಿಳಿದ ಸಂತ್ರಸ್ತೆ ಕುಟುಂಬಸ್ಥರು ಆರೋಪಿಯ ಮನೆ ಮತ್ತು ಕಾರಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆ ಬಗ್ಗೆ ಮಾಹಿತಿ ಪಡೆದ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಪೊಲೀಸರ ಉಪಸ್ಥಿತಿಯಲ್ಲೂ ಕುಟುಂಬಸ್ಥರು ತಮ್ಮ ಪ್ರತಿಭಟನೆಯನ್ನು ಮುಂದುವರಿಸಿದ್ದಲ್ಲದೇ ಆರೋಪಿಯ ಆಸ್ತಿಯನ್ನು ಸುಟ್ಟುಹಾಕಿದ್ದಾರೆ. ಪೊಲೀಸರು ಅಂತಿಮವಾಗಿ ಗುಂಪನ್ನು ಚದುರಿಸಿ ಸುವ್ಯವಸ್ಥೆಯನ್ನು ಪುನಃಸ್ಥಾಪಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ: ಲಾ ಕಾಲೇಜ್‌ಗೆ ಸೇರಿಸದಿದ್ದರೇ ಆಸ್ತಿಯಲ್ಲಿ ಭಾಗ ಕೊಡು ಅಂತ ನಮ್ಮಪ್ಪನನ್ನ ಕೇಳಿದ್ದೆ: ಸಿಎಂ
ಸಿದ್ದಿಪೇಟೆ ಪೊಲೀಸ್ ಕಮಿಷನರ್ ಕೂಡ ಸ್ಥಳಕ್ಕೆ ಧಾವಿಸಿ ಗ್ರಾಮಸ್ಥರೊಂದಿಗೆ ಮಾತುಕತೆ ನಡೆಸಿ ಉದ್ವಿಗ್ನತೆಯನ್ನು ಶಮನಗೊಳಿಸಿ ಶಾಂತಿ ಕಾಪಾಡಿದರು. ಇದೇ ವೇಳೆ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಸಂತ್ರಸ್ತೆಯ ಕುಟುಂಬಸ್ಥರು ಹಾಗೂ ಸ್ಥಳೀಯರು ಆಗ್ರಹಿಸಿದ್ದಾರೆ. ಘಟನೆ ಕುರಿತು ಹೆಚ್ಚಿನ ತನಿಖೆಗಳು ನಡೆಯುತ್ತಿವೆ. ಇದನ್ನೂ ಓದಿ: ಭಾಷಣ ಮಾಡುತ್ತಲೇ ಮಲ್ಲಿಕಾರ್ಜುನ ಖರ್ಗೆ ಅಸ್ವಸ್ಥ – ಮೋದಿಯನ್ನ ಅಧಿಕಾರದಿಂದ ಕೆಳಗಿಳಿಸುವವರೆಗೆ ಸಾಯಲ್ಲ ಎಂದ ʻಕೈʼನಾಯಕ