ಹೈದರಾಬಾದ್: ತೆಲಂಗಾಣದ ಮುಖ್ಯಮಂತ್ರಿ (Telangana CM) ಕೆ ಚಂದ್ರಶೇಖರ್ ರಾವ್ (K Chandrashekar Rao) ಅವರು ಭಾನುವಾರ ಹೊಟ್ಟೆನೋವಿನ (Abdominal Pain) ಹಿನ್ನೆಲೆ ಹೈದರಾಬಾದ್‌ನ (Hyderabad) ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಭಾರತ್ ರಾಷ್ಟ್ರ ಸಮಿತಿ (BRS) ಪಕ್ಷದ ಮುಖ್ಯಸ್ಥ ಕೆಸಿಆರ್ ಅವರು ಹೊಟ್ಟೆನೋವಿನ ಹಿನ್ನೆಲೆ ನಗರದ ಎಐಜಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಹೊಟ್ಟೆಯಲ್ಲಿ ಸಣ್ಣ ಹುಣ್ಣು ಕಾಣಿಸಿಕೊಂಡಿದ್ದು, ಚಿಕಿತ್ಸೆ ಆರಂಭಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
- Advertisement
ಹೊಟ್ಟೆಯಲ್ಲಿ ಕಂಡುಬಂದಿರುವ ಹುಣ್ಣಿಗೆ ಚಿಕಿತ್ಸೆ ಆರಂಭಿಸಲಾಗಿದೆ. ಇದನ್ನು ಹೊರತುಪಡಿಸಿ ಅವರು ಆರೋಗ್ಯವಾಗಿದ್ದಾರೆ. ಅವರಿಗೆ ಸೂಕ್ತವಾದ ಔಷಧಿ ನೀಡಲಾಗುತ್ತಿದೆ ಎಂದಿದ್ದಾರೆ. ಇದನ್ನೂ ಓದಿ: ಉದ್ಯಮಿ ಪ್ರದೀಪ್ ಶೂಟೌಟ್ ಕೇಸ್- A3 ಆರೋಪಿ ಲಿಂಬಾವಳಿ ಹೇಳಿಕೆ ಕೂಡ ದಾಖಲು
- Advertisement
Wish honb Chief Minister #KCR garu @TelanganaCMO speedy recovery & get well soon
— Dr Tamilisai Soundararajan (@DrTamilisaiGuv) March 12, 2023
ಕೆಸಿಆರ್ (KCR) ಆಸ್ಪತ್ರೆ ದಾಖಲಾಗಿರುವ ಹಿನ್ನೆಲೆ ಟ್ವೀಟ್ ಮಾಡಿರುವ ತೆಲಂಗಾಣದ ರಾಜ್ಯಪಾಲೆ ತಮಿಳಿಸೈ ಸೌಂದರರಾಜನ್, ಕೆ ಚಂದ್ರಶೇಖರ್ ರಾವ್ ಅವರು ಶೀಘ್ರವೇ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ. ಇದನ್ನೂ ಓದಿ: RRR-ನಾಟು ನಾಟು ಹಾಡಿಗೆ ಆಸ್ಕರ್ : ಸಂತಸ ವ್ಯಕ್ತ ಪಡಿಸಿದ ಲಹರಿ ವೇಲು