ಪಾಟ್ನಾ: ಬಿಹಾರ ಸಿಎಂ ನಿತೀಶ್ ಕುಮಾರ್ ಅವರನ್ನು ಭೇಟಿಯಾದ ಕೆಸಿ ಚಂದ್ರಶೇಖರ್ ರಾವ್ ಬಿಜೆಪಿ ಮುಕ್ತ ಭಾರತಕ್ಕೆ ಕರೆ ನೀಡಿದ್ದಾರೆ.
ಕಾಂಗ್ರೆಸ್ ಹೊರಗಿಟ್ಟು ಬಿಜೆಪಿ ವಿರುದ್ಧ ಮೈತ್ರಿಕೂಟ ರಚನೆಗೆ ಸಿದ್ಧತೆ ನಡೆಸುತ್ತಿರುವ ಕೆಸಿಆರ್ ಇಂದು ನಿತೀಶ್ ಕುಮಾರ್ ಮತ್ತು ಆರ್‌ಜೆಡಿ ಅಧ್ಯಕ್ಷ, ಡಿಸಿಎಂ ತೇಜಸ್ವಿ ಯಾದವ್ ಅವರನ್ನು ಭೇಟಿಯಾದರು.
Advertisement
ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ಅಭಿವೃದ್ಧಿಯಲ್ಲಿ ವಿಫಲವಾಗಿದೆ. ಮೋದಿ ಸರ್ಕಾರ ಬರುವ ಮೊದಲು ರೂಪಾಯಿ ಮೌಲ್ಯ ಇಷ್ಟೊಂದು ಕುಸಿದಿರಲಿಲ್ಲ. ರೈತರು ಒಂದು ವರ್ಷದಿಂದ ಪ್ರತಿಭಟನೆ ಯಾಕೆ ಮಾಡುತ್ತಿದ್ದಾರೆ? ಎಲ್ಲ ವಿಭಾಗದಲ್ಲಿ ದೇಶಕ್ಕೆ ಹಿನ್ನಡೆಯಾಗಿದೆ ಎಂದು ಕೇಂದ್ರದ ವಿರುದ್ಧ ಕಿಡಿ ಕಾರಿದರು.
Advertisement
Advertisement
ನಾವು ಎಲ್ಲ ವಿರೋಧ ಪಕ್ಷಗಳನ್ನು ಸೇರಿಸಿ ಒಂದಾಗಿ ಬಿಜೆಪಿ ವಿರುದ್ಧ ಹೋರಾಟ ಮಾಡುತ್ತೇವೆ ಎಂದು ಈ ಸಂದರ್ಭದಲ್ಲಿ ತಿಳಿಸಿದರು. ಇದನ್ನೂ ಓದಿ: ಏಪ್ರಿಲ್- ಜೂನ್ GDP ಬೆಳವಣಿಗೆ 13.5% ರಷ್ಟು ಏರಿಕೆ
Advertisement
ಈ ವೇಳೆ ಮಾತನಾಡಿದ ನಿತೀಶ್ ಕುಮಾರ್, ಕೆಲಸ ಮಾಡದೇ ಭಾರೀ ಪ್ರಚಾರ ಪಡೆಯುವುದು ಮೋದಿ ಸರ್ಕಾರದ ಸಾಧನೆ ಎಂದು ಟೀಕಿಸಿದರು.
ಇಬ್ಬರ ನಾಯಕರ ಭೇಟಿಯ ಬಗ್ಗೆ ಪ್ರತಿಕ್ರಿಯಿಸಿದ ಬಿಹಾರದ ಬಿಜೆಪಿ ನಾಯಕ ಸುಶೀಲ್ ಮೋದಿ, ನರೇಂದ್ರ ಮೋದಿ ಮುಂದೆ ನಿಲ್ಲಲು ಸಾಧ್ಯವಿಲ್ಲ ಇಬ್ಬರು ನಾಯಕರು ಹಗಲುಗನಸು ಕಾಣುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.