ನವದೆಹಲಿ: ನರೇಂದ್ರ ಮೋದಿ ಅವರು ಭಾರತ ಕಂಡ ಅತ್ಯಂತ ದುರ್ಬಲ ಪ್ರಧಾನಿಯಾಗಿದ್ದಾರೆ ಎಂದು ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ವಾಗ್ದಾಳಿ ನಡೆಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಇಂಧನ ಬೆಲೆಗಳಲ್ಲಿನ ನಿಯಮಿತ ಏರಿಕೆಯಿಂದ ನಿರುದ್ಯೋಗ, ಬಹು ಹಗರಣಗಳು ಮತ್ತು ದ್ವೇಷದ ಅಪರಾಧಗಳವರೆಗೆ, ಪ್ರಧಾನ ಮಂತ್ರಿಯು ಉತ್ತರದಾಯಿ ಎಂದು ಗುಡುಗಿದರು.
ಭಾರತದಲ್ಲಿ ಅಘೋಷಿತ ತುರ್ತು ಪರಿಸ್ಥಿತಿಯಿದೆ. ಇಂದಿರಾ ಗಾಂಧಿ ಅವರು ತುರ್ತು ಪರಿಸ್ಥಿತಿಯನ್ನು ಘೋಷಿಸುವಷ್ಟು ಧೈರ್ಯಶಾಲಿಯಾಗಿದ್ದರು. ಅದು ನೇರ ಘೋಷಿತ ತುರ್ತು ಪರಿಸ್ಥಿತಿ ಆಗಿತ್ತು. ಆದರೆ ಇಂದು ಭಾರತದಲ್ಲಿ ಅಘೋಷಿತ ತುರ್ತು ಪರಿಸ್ಥಿತಿಯಿದೆ. ಇಂತಹ ನರೇಂದ್ರ ಮೋದಿ ಸರ್ಕಾರ ಕೊನೆಗೊಂಡು ಬಿಜೆಪಿಯೇತರ ಸರ್ಕಾರ ಬರಬೇಕು ಎಂದರು.
ಬಿಜೆಪಿ ವಾಶಿಂಗ್ ಪೌಡರ್ ನಿರ್ಮಾ ಆಗಿದೆ ಎಂದ ಅವರು, ಈಟಾಲ ರಾಜೇಂದರ್, ಸುಜನಾ ಚೌಧರಿ, ಸಿಎಂ ರಮೇಶ್, ಹಿಮಂತ್ ಬಿಸ್ವಾ ಶರ್ಮಾ ಮತ್ತು ಮುಕುಲ್ ರಾಯ್ ಸೇರಿದಂತೆ ಇತರರು ಬಿಜೆಪಿ ಸೇರಿದ ನಂತರ ನಾಯಕರ ಮೇಲೆ ದಾಳಿಗಳನ್ನು ನಿಲ್ಲಿಸಲಾಯಿತು ಎಂದು ಆರೋಪಿಸಿದರು. ಇದನ್ನೂ ಓದಿ: ದೇವೇಗೌಡರನ್ನು ಭೇಟಿಯಾದ ದ್ರೌಪದಿ ಮುರ್ಮು- ಎನ್‍ಡಿಎ ಅಭ್ಯರ್ಥಿಗೆ ಜೆಡಿಎಸ್ ಬೆಂಬಲ
ಪ್ರವಾದಿ ವಿರುದ್ಧ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದ ಮಾಜಿ ಬಿಜೆಪಿ ನಾಯಕಿ ನೂಪುರ್ ಶರ್ಮಾ ಅವರ ಮೇಲೆ ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಇಬ್ಬರು ನ್ಯಾಯಾಧೀಶರನ್ನು ಶ್ಲಾಘಿಸಿದರು.
ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ಜಸ್ಟಿಸ್ ಪಾರ್ದಿವಾಲಾ, ನಾನು ನಿಮಗೆ ನಮಸ್ಕರಿಸುತ್ತೇನೆ. ಭಾರತವನ್ನು ಉಳಿಸಲು ದಯವಿಟ್ಟು ಅದೇ ಮನೋಭಾವವನ್ನು ಇಟ್ಟುಕೊಳ್ಳಿ. ನ್ಯಾಯಾಂಗವು ದೇಶವನ್ನು ಈ ದೇಶದ್ರೋಹಿಗಳು, ರಾಕ್ಷಸರು ಮತ್ತು ಸರ್ವಾಧಿಕಾರಿಗಳಿಂದ ರಕ್ಷಿಸಬೇಕಾಗಿದೆ ಎಂದರು. ಇದನ್ನೂ ಓದಿ: ಪ್ರಧಾನಿ ಮೋದಿ – ಟಿಎಂಸಿ ನಡುವೆ `ಕಾಳಿ’ ಕದನ