ಹೈದರಾಬಾದ್: ಕಾಂಗ್ರೆಸ್ ಪಕ್ಷವು ತೆಲಂಗಾಣದಲ್ಲಿ ನಿರುದ್ಯೋಗ ತುರ್ತು ಪರಿಸ್ಥಿತಿಗೆ ಕರೆ ನೀಡಿದ್ದು, ರಾಜ್ಯದ ನಿರುದ್ಯೋಗ ಪರಿಸ್ಥಿತಿಯಿಂದ 40 ಲಕ್ಷ ಜನರು ಬಳಲುತ್ತಿದ್ದಾರೆ ಎಂದು ತಿಳಿಸಿದೆ.
ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ವಕ್ತಾರ ಹಾಗೂ ತೆಲಂಗಾಣ ಕಾಂಗ್ರೆಸ್ ಹಿರಿಯ ನಾಯಕ ಡಾ.ದಾಸೋಜು ಶ್ರವಣ್ ಕುಮಾರ್ ಮಾತನಾಡಿ, ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು ನಿರುದ್ಯೋಗ ಪರಿಸ್ಥಿತಿಯನ್ನು ಪರಿಹರಿಸಲು ಮತ್ತು ನಿವಾರಿಸಲು ಸ್ಪಷ್ಟವಾದ ಉಪಕ್ರಮಗಳನ್ನು ಅನ್ವೇಷಿಸಬೇಕು ಎಂದಿದ್ದಾರೆ.
ರಾಜ್ಯದ ನಿರುದ್ಯೋಗ ಸಮಸ್ಯೆಯನ್ನು ಪರಿಹರಿಸಲು ನಿರ್ದಿಷ್ಟ ಕಾರ್ಯ ನೀತಿಗಳೊಂದಿಗೆ ಕಾರ್ಯತಂತ್ರವನ್ನು ಅಭಿವೃದ್ಧಿಪಡಿಸಲು ರಾಷ್ಟ್ರೀಯ ಮಟ್ಟದ ಕೈಗಾರಿಕೋದ್ಯಮಿಗಳು, ಶಿಕ್ಷಣ ತಜ್ಞರು, ಬುದ್ಧಿಜೀವಿಗಳು, ತಂತ್ರಜ್ಞರು ಮತ್ತು ನೀತಿ ನಿರೂಪಕರನ್ನು ಒಳಗೊಂಡ ಉನ್ನತ ಮಟ್ಟದ ಕಾರ್ಯಪಡೆಯನ್ನು ಸಂಘಟಿಸಬೇಕು ಎಂದು ತಿಳಿಸಿದ್ದಾರೆ. ಇದನ್ನೂ ಓದಿ : ಪಠಾಣ್ ಚಿತ್ರಕ್ಕಾಗಿ ಬಿಕಿನಿ ತೊಟ್ಟ ದೀಪಿಕಾ ಪಡುಕೋಣೆ: ಫೋಟೋ ಲೀಕ್
ಖಾಸಗಿ ವಲಯದಲ್ಲೂ ಶೇ.95ರಷ್ಟು ಉದ್ಯೋಗಗಳನ್ನು ಸ್ಥಳೀಯರಿಗೆ ಮೀಸಲಿಡುವಂತೆ ಶಾಸನಬದ್ಧ ಕಾಯಿದೆಯನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ. ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆಯಿಂದ 40 ಲಕ್ಷ ಜನರು ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ : ಸೂಟ್‍ಕೇಸ್‍ನಲ್ಲಿ 40 ಕೆಜಿ ಹಸಿರು ಬಟಾಣಿ ತುಂಬಿ ಸಾಗಿಸಿದ ಐಪಿಎಸ್ ಅಧಿಕಾರಿ