ಹೈದರಾಬಾದ್: ತೆಲಂಗಾಣ (Telangana) ವಿಧಾನಸಭಾ ಚುನಾವಣೆಯ (Election) ಮತ ಎಣಿಕೆ ನಡೆಯುತ್ತಿದ್ದ ವೇಳೆ ತೆಲಂಗಾಣ ಕಾಂಗ್ರೆಸ್ (Congress) ಮುಖ್ಯಸ್ಥ ರೇವಂತ್ ರೆಡ್ಡಿ (Revanth Reddy) ಅವರನ್ನು ಭೇಟಿ ಮಾಡಿದ್ದಕ್ಕಾಗಿ ತೆಲಂಗಾಣದ ಪೊಲೀಸ್ ಮಹಾನಿರ್ದೇಶಕ ಅಂಜನಿ ಕುಮಾರ್ ಅವನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ.
ಅಂಜನಿ ಕುಮಾರ್ ಮತ್ತು ಇತರ ಇಬ್ಬರು ಹಿರಿಯ ಪೊಲೀಸ್ ಅಧಿಕಾರಿಗಳನ್ನು ಮಾದರಿ ನೀತಿ ಸಂಹಿತೆ ಉಲ್ಲಂಘನೆಗೆ ವಿವರಣೆಯನ್ನು ಸಲ್ಲಿಸುವಂತೆ ಕೇಳಲಾಗಿದೆ.
Advertisement
Advertisement
ಅಂಜನಿ ಕುಮಾರ್ ಮತ್ತು ಇತರ ಪೊಲೀಸ್ ಅಧಿಕಾರಿಗಳು ಇಂದು (ಭಾನುವಾರ) ಮುಂಜಾನೆ ಹೈದರಾಬಾದ್‌ನಲ್ಲಿರುವ ರೇವಂತ್ ರೆಡ್ಡಿ ಅವರನ್ನು ಭೇಟಿಯಾಗಲು ಅವರ ನಿವಾಸಕ್ಕೆ ತೆರಳಿದ್ದರು. ಕಾಂಗ್ರೆಸ್ ಮುಖ್ಯಸ್ಥರಿಗೆ ಉನ್ನತ ಪೊಲೀಸ್ ಪುಷ್ಪಗುಚ್ಛ ನೀಡಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಡಿಜಿಪಿ ಅಭ್ಯರ್ಥಿಯೊಬ್ಬರನ್ನು ಭೇಟಿಯಾಗಿರುವುದು ಒಂದು ಪಕ್ಷಕ್ಕೆ ತೋರಿದ ಒಲವು ಎಂಬ ಸ್ಪಷ್ಟ ಸೂಚನೆಯಾಗಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಕಾಂಗ್ರೆಸ್‌ಗೆ ಸ್ವೀಟೆಸ್ಟ್ ವಿಕ್ಟರಿ – ರೇವಂತ್ ರೆಡ್ಡಿಗೆ ಅಭಿನಂದನೆ ಸಲ್ಲಿಸಿದ ನಟಿ ರಮ್ಯಾ
Advertisement
ಸತತ 2 ಬಾರಿ ಗೆದ್ದು 10 ವರ್ಷಳಿಂದ ತೆಲಂಗಾಣದಲ್ಲಿ ಅಧಿಕಾರದಲ್ಲಿದ್ದ ಭಾರತ ರಾಷ್ಟ್ರ ಸಮಿತಿಯನ್ನು ಈ ಬಾರಿ ಸೋಲಿಸಿದ ಕಾಂಗ್ರೆಸ್ 3ನೇ ಬಾರಿ ಅಧಿಕಾರ ಹಿಡಿಯುವುದನ್ನು ತಡೆದಿದೆ. ಇದನ್ನೂ ಓದಿ: RSS, ABVP ಕಾರ್ಯಕರ್ತ ರೇವಂತ್ ರೆಡ್ಡಿ ಈಗ ಕಾಂಗ್ರೆಸ್ ಸಿಎಂ ರೇಸ್‌ನಲ್ಲಿ – ತೆಲಂಗಾಣಕ್ಕೆ ಸಿಎಂ ಯಾರು?