ಹೈದರಾಬಾದ್: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದಡಿ ತೆಲಂಗಾಣದ 5 ಜನ ಹಿರಿಯ ನಾಯಕರಿಗೆ ಚುನಾವಣಾ ಆಯೋಗ ನೋಟಿಸ್ ಜಾರಿ ಮಾಡಿದೆ.
ತೆಲಂಗಾಣ ರಾಜ್ಯ ನೀರಾವರಿ ಸಚಿವ ಟಿ.ಹರೀಶ್ ರಾವ್, ಕಾಂಗ್ರೆಸ್ ನಾಯಕ ರೇವಂತ್ ರೆಡ್ಡಿ, ತೆಲಗು ದೇಶಂ ಪಕ್ಷದ (ಟಿಡಿಪಿ) ನಾಯಕ ವಂಟೇರು ಪ್ರತಾಪ್ ರೆಡ್ಡಿ, ರೇವೂರಿ ಪ್ರಕಾಶ್ ರೆಡ್ಡಿ ಅವರಿಗೆ ನೋಟಿಸ್ ನೀಡಲಾಗಿದೆ ಎಂದು ತೆಲಂಗಾಣ ರಾಜ್ಯ ಚುನಾವಣೆ ಆಯೋಗದ ಆಯುಕ್ತ ರಜತ್ ಕುಮಾರ್ ಹೇಳಿದ್ದಾರೆ.
Advertisement
ಅಷ್ಟೇ ಅಲ್ಲದೆ ತೆಲಂಗಾಣ ಪ್ರದೇಶ ಕಾಂಗ್ರೆಸ್ (ಟಿಪಿಸಿಸಿ) ಅಧ್ಯಕ್ಷ ಉತ್ತಮ್ ಕುಮಾರ್ ರೆಡ್ಡಿ ಅವರ ವಿರುದ್ಧವೂ ದೂರು ಕೇಳಿ ಬಂದಿದೆ. ಹೀಗಾಗಿ ಅವರಿಗೂ ನೋಟಿಸ್ ನೀಡಿದ್ದೇವೆ. ನೋಟಿಸ್ ತಕ್ಷಣವೇ ಪ್ರತಿಕ್ರಿಯೆ ನೀಡುವಂತೆ ಸೂಚಿಸಲಾಗಿದೆ ಎಂದು ರಜತ್ ಕುಮಾರ್ ತಿಳಿಸಿದರು.
Advertisement
ಬಿಜೆಪಿ ಮುಖಂಡರೊಬ್ಬರಿಗೆ ಟಿಆರ್‍ಎಸ್ ಅಭ್ಯರ್ಥಿ ಗಂಗುಲ ಕಮಲಾಕರ್ ಬೆದರಿಗೆ ಹಾಕಿದ್ದಾರೆ ಎನ್ನುವ ಆರೋಪ ಬಂದಿದೆ. ಈ ಕುರಿತು ತನಿಖೆ ಆರಂಭವಾಗಿದೆ. ಮತದಾನದ ದಿನದಂದು ಭದ್ರತಾ ದೃಷ್ಟಿಯಿಂದ 48 ಸಾವಿರ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಒಟ್ಟು 32,749 ಕೇಂದ್ರಗಳಲ್ಲಿ ಮತದಾನ ನಡೆಯಲಿದೆ ಎಂದು ಮಾಹಿತಿ ನೀಡಿದರು.
Advertisement
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv