ಕಲಬುರಗಿ: ತೆಲಂಗಾಣದ (Telangana) ಪಿಲ್ಲಿಗುಂಡು ಗ್ರಾಮದ ಬಳಿಯಲ್ಲಿ ಶನಿವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಎಥೆನಾಲ್ ಸಾಗಿಸುತ್ತಿದ್ದ ಟ್ಯಾಂಕರ್ ಧಗಧಗನೆ ಹೊತ್ತಿ ಉರಿದು, ಚಾಲಕ ಸಜೀವ ದಹನಗೊಂಡ ಘಟನೆ ನಡೆದಿದೆ.
ಕಲಬುರಗಿ (Kalaburagi) ಜಿಲ್ಲೆಯ ಚಿಂಚೋಳಿ ತಾಲೂಕಿನ ಹೂಡದಳ್ಳಿ ಗ್ರಾಮದ ನಿವಾಸಿ ನಿರಂಜನ್ ಜಮಾದರ್ (30) ಮೃತಪಟ್ಟವರು. ಚಿಂಚೋಳಿ ಪಟ್ಟಣದ ಶ್ರೀ ಸಿದ್ದಶ್ರೀ ಎಥೆನಾಲ್ ಘಟಕದಿಂದ ತೆಲಂಗಾಣಕ್ಕೆ ಎಥೆನಾಲ್ ತುಂಬಿಕೊಂಡು ತೆರಳುತ್ತಿದ್ದ ಟ್ಯಾಂಕರ್, ಪಿಲ್ಲಿಗುಂಡು ಸಮೀಪ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಕಾಣಿಸಿಕೊಂಡಿದೆ. ಇದನ್ನೂ ಓದಿ: Kalaburagi | ಶಾಲಾ ಬಾಲಕಿ ಮೇಲೆ ಹರಿದ ಗೂಡ್ಸ್ ವಾಹನ – ಕಾಲು ಕಟ್
ಡಿಕ್ಕಿಯ ರಭಸಕ್ಕೆ ಟ್ಯಾಂಕರ್‌ಗೆ ಕಿಡಿ ಹೊತ್ತಿಕೊಂಡು ಕ್ಷಣಾರ್ಧದಲ್ಲಿ ಬೆಂಕಿ ವ್ಯಾಪಿಸಿತು. ಬೆಂಕಿ ಜ್ವಾಲೆಗಳು ಹತ್ತಿಕ್ಕುವಷ್ಟರಲ್ಲಿ ಚಾಲಕ ಹೊರಬರಲಾರದೆ ಸಜೀವ ದಹನವಾಗಿ ಸ್ಥಳದಲ್ಲೇ ಸಾವನ್ನಪ್ಪಿದಾನೆ.
ಘಟನೆ ಕುರಿತು ತೆಲಂಗಾಣದ ಅನವಾಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಟ್ಯಾಂಕರ್ ಚಿಂಚೋಳಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಒಡೆತನದ ಸಿದ್ದಶ್ರೀ ಎಥೆನಾಲ್ ಪ್ಲಾಂಟ್‌ಗೆ ಸೇರಿದ್ದುದಾಗಿ ತಿಳಿದುಬಂದಿದೆ. ಇದನ್ನೂ ಓದಿ: ಸಿಲಿಂಡರ್ ಸ್ಫೋಟ – 7 ವರ್ಷದ ಹಿಂದೆ ನಿರ್ಮಿಸಿದ್ದ ಮನೆಯ ಗೋಡೆ ಕುಸಿತ
ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಅಗ್ನಿಶಾಮಕ ದಳದ ಸಹಾಯದಿಂದ ಬೆಂಕಿ ನಿಯಂತ್ರಣಕ್ಕೆ ಕ್ರಮಕೈಗೊಂಡಿದ್ದಾರೆ.

