ಹೈದರಾಬಾದ್: ತೆಲಂಗಾಣದ ಮಾಜಿ ಶಾಸಕನ ಪುತ್ರಿ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಟಿ. ಮಹಾಲಕ್ಷ್ಮಿ(25) ಮೃತ ಯುವತಿ. ತೆಲಂಗಾಣದ ಅಶ್ವರಾವ್‍ಪೇಟೆ ಮಾಜಿ ಶಾಸಕ ತಾಟಿ ವೆಂಕಟೇಶ್ವರಲು ಅವರ ಪುತ್ರಿ. ಜಿಲ್ಲೆಯ ಸಾರಪಾಕದಲ್ಲಿರುವ ತಮ್ಮ ನಿವಾಸದಲ್ಲಿ ಮಹಾಲಕ್ಷ್ಮಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇತ್ತೀಚೆಗಷ್ಟೇ ಮಹಾಲಕ್ಷ್ಮಿ ಎಂಬಿಬಿಎಸ್‍ನ್ನು ಪೂರ್ಣಗೊಳಿಸಿ ಸ್ನಾತಕೋತ್ತರ ಪದವಿಯ ಪ್ರವೇಶ ಪರೀಕ್ಷೆಗೆ ತಯಾರಿಯನ್ನು ನಡೆಸುತ್ತಿದ್ದರು.
ಗುರುವಾರ ಬೆಳಗ್ಗೆ ಕುಟುಂಬದ ಸದಸ್ಯರು ಕೋಣೆಯ ಬಾಗಿಲು ಬಡಿದು ಹೊರಗೆ ಬರುವಂತೆ ಮಹಾಲಕ್ಷ್ಮಿಯನ್ನು ಕೇಳಿದ್ದಾರೆ. ಆದರೆ, ತುಂಬಾ ಹೊತ್ತಾದರೂ ಆಕೆ ಬರದಿದ್ದಾಗ ಅನುಮಾನಗೊಂಡ ಕುಟುಂಬಸ್ಥರು ಕೋಣೆಯ ಬಾಗಿಲನ್ನು ಮುರಿದಿದ್ದಾರೆ. ಆಗ ಮಹಾಲಕ್ಷ್ಮಿ ಅವರ ಮೃತದೇಹ ಗುರುವಾರ ಮುಂಜಾನೆ ಸೀಲಿಂಗ್ ಫ್ಯಾನ್‍ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇದನ್ನೂ ಓದಿ: ನನ್ನ ಸಿಡಿ ಕೇಸ್, ಸಂತೋಷ್ ಪ್ರಕರಣ ಸಿಬಿಐ ತನಿಖೆಗೆ ವಹಿಸಲಿ: ರಮೇಶ್ ಜಾರಕಿಹೊಳಿ
ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಮೃತದೇಹವನ್ನು ಭದ್ರಾಚಲಂ ಏರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಮೃತರ ಕುಟುಂಬಕ್ಕೆ ಸಾರಿಗೆ ಸಚಿವ ಪುವ್ವಾಡ ಅಜಯ್ ಕುಮಾರ್ ಮತ್ತಿತರರು ಸಾಂತ್ವನ ಹೇಳಿದರು. ಇದನ್ನೂ ಓದಿ: ಎಣ್ಣೆ ಬಾಟಲ್ ಜೊತೆಗೆ ಸಿಸಿ ಕ್ಯಾಮೆರಾದ ಹಾರ್ಡ್‍ಡಿಸ್ಕ್ ಕದ್ದೊಯ್ದ ಕಳ್ಳರು