ನವದೆಹಲಿ: ಪಂಚರಾಜ್ಯ ಚುನಾವಣೆ ಇಂದಿಗೆ ಮುಕ್ತಾಯವಾಗಿದ್ದು, ಚುನಾವಣೋತ್ತರ ಸಮೀಕ್ಷೆಗಳು ಪ್ರಕಟಗೊಳ್ಳುತ್ತಿವೆ. ತೆಲಂಗಾಣದಲ್ಲಿ ಅಚ್ಚರಿಯ ಫಲಿತಾಂಶದ ಸುಳಿವು ಸಿಕ್ಕಿದೆ. ಈ ಬಾರಿ ರಾಜ್ಯದಲ್ಲಿ ಆಡಳಿತಾರೂಢ ಬಿಆರ್‌ಎಸ್‌ಗೆ ಕಾಂಗ್ರೆಸ್ ತೀವ್ರ ಪೈಪೋಟಿ ನೀಡಿರುವುದು ಕಂಡುಬಂದಿದೆ.
199 ವಿಧಾಸಭಾ ಕ್ಷೇತ್ರಗಳಲ್ಲಿರುವ 32.6 ದಶಲಕ್ಷ ಮತದಾರರು 2,290 ಅಭ್ಯರ್ಥಿಗಳ ಭವಿಷ್ಯ ಬರೆದಿದ್ದಾರೆ. ಈಗ ತೆಲಂಗಾಣ ಚುನಾವಣೋತ್ತರ ಸಮೀಕ್ಷೆಗಳು ಪ್ರಕಟವಾಗಿವೆ. ಇದನ್ನೂ ಓದಿ: ರಾಜಸ್ಥಾನದಲ್ಲಿ ಈ ಬಾರಿ ಬಿಜೆಪಿಗೆ ಸ್ಪಷ್ಟ ಬಹುಮತ
Advertisement
Advertisement
ಜನ್‌ಕೀಬಾತ್: ಕಾಂಗ್ರೆಸ್ 48-64, ಬಿಆರ್‌ಎಸ್ 40-55, ಬಿಜಪಿ 7-13
ಪೋಲ್ ಸ್ಟ್ರಾಟಜಿ ಗ್ರೂಪ್: ಕಾಂಗ್ರೆಸ್ 49-54, ಬಿಆರ್‌ಎಸ್ 53-58, ಬಿಜೆಪಿ 4-6
ರಿಪಬ್ಲಿಕ್ ಟಿವಿ-ಸಿ ವೋಟರ್: ಕಾಂಗ್ರೆಸ್ 47-59, ಬಿಆರ್‌ಎಸ್ 48-60, ಬಿಜೆಪಿ 5
Advertisement
ತೆಲಂಗಾಣದಲ್ಲಿ 2018 ರ ಚುನಾವಣೆಯಲ್ಲಿ ಬಿಆರ್‌ಎಸ್ 88 ಸೀಟ್‌ಗಳನ್ನು ಗೆದ್ದಿತ್ತು. ಕಾಂಗ್ರೆಸ್ 19, ಎಐಎಂಐಎಂ 7, ಟಿಡಿಪಿ 2 ಸ್ಥಾನಗಳನ್ನು ಗೆದ್ದಿದ್ದವು. ಬಿಜೆಪಿ ಒಂದು ಕ್ಷೇತ್ರದಲ್ಲಿ ಮಾತ್ರ ಜಯ ಸಾಧಿಸಿತ್ತು. ಇದನ್ನೂ ಓದಿ: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್‌ಗೆ ಮುನ್ನಡೆ – ಬಿಜೆಪಿಯಿಂದ ಟಫ್ ಸ್ಪರ್ಧೆ
Advertisement
ಆಂಧ್ರದಿಂದ ಬೇರ್ಪಟ್ಟು ಹೊಸ ರಾಜ್ಯವಾಗಿ ಉದಯವಾದ ನಂತರ ತೆಲಂಗಾಣದಲ್ಲಿ ಎರಡು ಬಾರಿ ಚುನಾವಣೆ ನಡೆದಿದೆ. ಎರಡು ಬಾರಿಯೂ ಕೆ.ಚಂದ್ರಶೇಖರ್ ರಾವ್ ನೇತೃತ್ವದ ಬಿಆರ್‌ಎಸ್ ಪಕ್ಷವು ಗೆಲುವು ಸಾಧಿಸಿ ಅಧಿಕಾರದ ಗದ್ದುಗೆ ಏರಿದೆ. ಈ ಬಾರಿ ಚುನಾವಣೆಯು ಕೆಸಿಆರ್‌ಗೆ ಸುಲಭದ ಹಾರಿಯಾಗಿ ಉಳಿದಿಲ್ಲವೆಂಬ ಸೂಚನೆಯನ್ನು ಸಮೀಕ್ಷೆಗಳು ಹೇಳುತ್ತಿವೆ.