LatestMain PostNational

ಉಸ್ಮಾನಿಯಾ ವಿವಿಯಲ್ಲಿ ರಾಹುಲ್ ಸಂವಾದಕ್ಕೆ ಬ್ರೇಕ್ – ಹೈಕೋರ್ಟ್‍ನಿಂದ ಅರ್ಜಿ ವಜಾ

ಹೈದರಾಬಾದ್: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ವಿದ್ಯಾರ್ಥಿಗಳು ಮತ್ತು ನಿರುದ್ಯೋಗಿ ಯುವಕರೊಂದಿಗೆ ಮುಖಾಮುಖಿ ಸಂವಾದ ನಡೆಸಲು ಅವಕಾಶ ನೀಡುವಂತೆ ಉಪಕುಲಪತಿಗಳಿಗೆ ನಿರ್ದೇಶನ ನೀಡುವಂತೆ ಕೋರಿ ಉಸ್ಮಾನಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ತೆಲಂಗಾಣ ಹೈಕೋರ್ಟ್ ವಜಾಗೊಳಿಸಿದೆ.

court order law

ಮೇ 6 ಮತ್ತು 7 ರಂದು ತೆಲಂಗಾಣಕ್ಕೆ ಭೇಟಿ ನೀಡಲಿರುವ ರಾಹುಲ್ ಗಾಂಧಿ ಅವರು ಇದೇ ವೇಳೆ ಉಸ್ಮಾನಿಯಾ ವಿಶ್ವವಿದ್ಯಾನಿಲಯದ ಕ್ಯಾಂಪಸ್‍ನಲ್ಲಿ ರಾಜಕೀಯೇತರ ಸಭೆಯನ್ನು ನಡೆಸುವ ಉದ್ದೇಶಹೊಂದಿದ್ದರು. ಇದನ್ನೂ ಓದಿ: ಕ್ಯಾಂಪಸ್‌ ಪ್ರವೇಶಕ್ಕೆ ರಾಹುಲ್‌ಗೆ ಅನುಮತಿ ನೀಡದ ವಿವಿ – ಉಸ್ಮಾನಿಯಾ ವಿದ್ಯಾರ್ಥಿಗಳಿಂದ ಪ್ರತಿಭಟನೆ

rahul gandi

ರಾಹುಲ್ ಗಾಂಧಿಯವರು ವಿದ್ಯಾರ್ಥಿಗಳೊಂದಿಗೆ ಮುಖಾಮುಖಿಯಾಗಿ ರಾಜಕೀಯೇತರ ಸಭೆಯನ್ನು ನಡೆಸಲು, ಕೆಲವು ಶೈಕ್ಷಣಿಕ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಸಂವಾದ ನಡೆಸುವ ಉದ್ದೇಶವನ್ನು ಹೊಂದಿದ್ದರು ಎಂದು ಅರ್ಜಿದಾರರು ವಾದಿಸಿದರು.

ರಾಜಕೀಯ ಸಮಾರಂಭಗಳಿಗೆ ಅನುಮತಿ ನೀಡುವುದು ವಿಶ್ವವಿದ್ಯಾನಿಲಯದ ಕಾರ್ಯಕಾರಿ ಮಂಡಳಿಯ 159ಎಚ್ ಸಭೆಯ ನಿರ್ಣಯ ಸಂಖ್ಯೆ 6ರ ಉಲ್ಲಂಘನೆಯಾಗುತ್ತದೆ. ವಿಶ್ವವಿದ್ಯಾನಿಲಯ ಕ್ಯಾಂಪಸ್ ಅನ್ನು ರಾಜಕೀಯ ವೇದಿಕೆಯಾಗಿ ಬಳಸಲು ಅನುಮತಿ ನೀಡುವುದಿಲ್ಲ ಎಂದು ಕೋರ್ಟ್ ಹೇಳಿದೆ. ಇದನ್ನೂ ಓದಿ: ದೆಹಲಿಯಲ್ಲಿ ಕೊರೊನಾ ಆರ್ಭಟ – GRPA ಆ್ಯಕ್ಷನ್ ಪ್ಲಾನ್‌ನಂತೆ ರೆಡ್‌ಅಲರ್ಟ್ ಘೋಷಣೆ

ತೆಲಂಗಾಣದ ಹೈದರಾಬಾದ್‍ನಲ್ಲಿರುವ ಉಸ್ಮಾನಿಯಾ ವಿಶ್ವವಿದ್ಯಾನಿಲಯ ಕ್ಯಾಂಪಸ್‍ಗೆ ರಾಹುಲ್ ಗಾಂಧಿ ಭೇಟಿ ನೀಡುವುದನ್ನು ತಡೆಯುವಂತೆ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ನೇತೃತ್ವದ ರಾಜ್ಯ ಸರ್ಕಾರವು ಸಂಸ್ಥೆಗೆ ಒತ್ತಾಯಿಸಿತ್ತು ಎಂದು ಕಾಂಗ್ರೆಸ್ ಆರೋಪಿಸಿತ್ತು. ಕೆಲವು ವಿದ್ಯಾರ್ಥಿಗಳು ಈ ಕುರಿತಂತೆ ತೆಲಂಗಾಣ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದರು. ರಾಹುಲ್ ಗಾಂಧಿ ಅವರ ಭೇಟಿಗೆ ಅವಕಾಶ ನೀಡುವಂತೆ ವಿಶ್ವವಿದ್ಯಾಲಯಕ್ಕೆ ನಿರ್ದೇಶನ ನೀಡಬೇಕೆಂದು ಒತ್ತಾಯಿಸಿದ್ದರು. ಮತ್ತೆ ಕೆಲವರು ಕ್ಯಾಂಪಸ್‍ನ ಹೊರಗೆ ಪ್ರತಿಭಟನೆ ನಡೆಸಿದ್ದರು.

Leave a Reply

Your email address will not be published.

Back to top button