ಹೈದರಾಬಾದ್: ತೆಲಂಗಾಣದಲ್ಲಿ 119 ವಿಧಾನಸಭಾ ಕ್ಷೇತ್ರಗಳಿಗೆ (Telangana Vidhanasabha Election) ಇಂದು ಮತದಾನ ನಡೆಯುತ್ತಿದೆ. ಈ ನಡುವೆ ಮತಗಟ್ಟೆಯೊಂದರಲ್ಲಿ ಮೂರು ಪಕ್ಷದ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ.
#WATCH | Telangana Elections | A scuffle broke out between groups of workers of Congress, BJP and BRS at a polling station in Jangaon. The situation was brought under control with Police intervention. pic.twitter.com/TjT8hgqMhc
— ANI (@ANI) November 30, 2023
Advertisement
ಜನಗಾಂವ್‍ನ ಮತಗಟ್ಟೆಯಲ್ಲಿ ಕಾಂಗ್ರೆಸ್ (Congress), ಬಿಜೆಪಿ (BJP) ಹಾಗೂ ಬಿಆರ್ ಎಸ್ ಕಾರ್ಯಕರ್ತರ (BRS Activist) ನಡುವೆ ಮಾರಾಮಾರಿ ನಡೆದಿದೆ. ಇದರ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಘಟನೆ ನಡೆಯುತ್ತಿದ್ದಂತೆಯೇ ಮತಗಟ್ಟೆಯಲ್ಲಿದ್ದ ಪೊಲೀಸರು ಕೂಡಲೇ ಮಧ್ಯಪ್ರವೇಶ ಮಾಡಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ.
Advertisement
Advertisement
ವೀಡಿಯೊದಲ್ಲಿ, ರಾಜಕೀಯ ಪಕ್ಷಗಳ ಕಾರ್ಯಕರ್ತರು ಜನಾಂವ್‍ನ ಮತಗಟ್ಟೆಯ (Jangaon Polling Booth) ಹೊರಗೆ ಪರಸ್ಪರ ತಳ್ಳಿಕೊಳ್ಳುತ್ತಿರುವುದನ್ನು ಕಾಣಬಹುದು. ಆದರೆ ಕಾರ್ಯಕರ್ತರ ನಡುವಿನ ಗಲಾಟೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಇದನ್ನೂ ಓದಿ: Telangana Poll: ಜಿದ್ದಾಜಿದ್ದಿ ಕಣ ತೆಲಂಗಾಣದಲ್ಲಿಂದು ಮತದಾನ – ದಾಖಲೆಯ ಮತದಾನಕ್ಕೆ ಮೋದಿ ಕರೆ
Advertisement
ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‍ಗಢ, ಮಿಜೋರಾಂಗಳಲ್ಲಿ ನ.7 ರಿಂದ ನವೆಂಬರ್ 25ರ ಒಳಗೆ ಮತದಾನ ಮುಕ್ತಾಯವಾಗಿದೆ. ತೆಲಂಗಾಣದಲ್ಲಿ ಇಂದು ಮತದಾನ ನಡೆಯುತ್ತಿದೆ. ಈ ಮೂಲಕ ಪಂಚರಾಜ್ಯ ಚುನಾವಣೆಗೆ ತೆರೆ ಬೀಳಲಿದೆ. ಡಿಸೆಂಬರ್ 3 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.