ಹೈದರಾಬಾದ್: ಗೋದಾವರಿ ಘಾಟ್ ಬಳಿ ಯುವಕನ ಶವ ಪತ್ತೆಯಾಗಿದ್ದು, ಯುವಕ ಗೋದಾವರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆಯಿದೆ ಎಂದು ತೆಲಂಗಾಣ ಪೊಲೀಸರು ಹೇಳಿದ್ದಾರೆ.
ಸಿಕಂದರಾಬಾದ್ ರೈಲ್ವೇ ನಿಲ್ದಾಣದಲ್ಲಿ ರೈಲುಗಳಿಗೆ ಬೆಂಕಿ ಹಚ್ಚಿ ನಾಶಪಡಿಸಿದ ಅಗ್ನಿಪಥ್ ಪ್ರತಿಭಟನೆಯಲ್ಲಿ ಮಗ ಭಾಗವಹಿಸಿದ್ದ. ನನ್ನನ್ನು ಪೊಲೀಸರು ಬಂಧಿಸುತ್ತಾರೆ ಮತ್ತು ಓದಿನ ಕಡೆಗೆ ಗಮನ ಹರಿಸಲು ಸಾಧ್ಯವಾಗುತ್ತಿಲ್ಲ ಎಂದು ಹೆದರಿ ಪುತ್ರ ಆತ್ಮಹತ್ಯೆ ಮಾಡಿರುವುದಾಗಿ ತಂದೆ ಪೊಲೀಸರಿಗೆ ತಿಳಿಸಿದ್ದಾರೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಇದನ್ನೂ ಓದಿ: ಪಬ್ಲಿಕ್ ಟಿವಿ ಬೆಳಕು ಇಂಪ್ಯಾಕ್ಟ್ – ವಿದ್ಯಾರ್ಥಿಗಳ ನೆರವಿಗೆ ಧಾವಿಸಿದ ನಾರಾಯಣಸ್ವಾಮಿ
Advertisement
Advertisement
ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆ ವಿರುದ್ಧ ದೇಶಾದ್ಯಂತ ಜೂನ್‍ನಲ್ಲಿ ಪ್ರತಿಭಟನೆಗಳು ನಡೆದಿದ್ದವು. ಕೇಂದ್ರವು ಅಗ್ನಿಪಥ್ ಯೋಜನೆಯನ್ನು ಅನಾವರಣಗೊಳಿಸಿದ್ದು 17.5 ರಿಂದ 21 ವರ್ಷ ವಯಸ್ಸಿನ ಯುವಕರನ್ನು ನಾಲ್ಕು ವರ್ಷಗಳ ಅವಧಿಗೆ ಸೇನೆಯ ಮೂರು ಸೇವೆಗಳಲ್ಲಿ ಯಾವುದಕ್ಕಾದರೂ “ಅಗ್ನಿವೀರ್” ಆಗಿ ನೇಮಿಸಿಕೊಳ್ಳಲು ನಿರ್ಧರಿಸಿತ್ತು.
Advertisement
Advertisement
ಈ ಹೊಸ ಸೇನಾ ನೇಮಕಾತಿ ಯೋಜನೆಯ ವಿರುದ್ಧ ಬಿಹಾರ, ಉತ್ತರ ಪ್ರದೇಶ ಮತ್ತು ತೆಲಂಗಾಣದಂತಹ ರಾಜ್ಯಗಳಲ್ಲಿ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ, ಉದ್ರಿಕ್ತ ಯುವಕರು ರೈಲ್ವೆ ಆಸ್ತಿಪಾಸ್ತಿಗಳನ್ನು ಧ್ವಂಸಗೊಳಿಸಿದ್ದರು ಮತ್ತು ರೈಲುಗಳಿಗೆ ಬೆಂಕಿ ಹಚ್ಚಿದರು. ಇದನ್ನೂ ಓದಿ: ಪ್ರಿಯಾಂಕ್ ಖರ್ಗೆಯಿಂದ ಇಡೀ ಮಹಿಳಾ ಕುಲಕ್ಕೆ ಅಪಮಾನ: ಪ್ರಹ್ಲಾದ್ ಜೋಶಿ