-ಮೃತರ ಕುಟುಂಬಸ್ಥರಿಗೆ ತೆಲಂಗಾಣ ಸರ್ಕಾರದಿಂದ 25 ಲಕ್ಷ ರೂ. ಪರಿಹಾರ
ಹೈದರಬಾದ್: ತೆಲಂಗಾಣದ ನಾಗರ್‌ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (Srisailam Left Bank Canal) ನಿರ್ಮಾಣ ಹಂತದಲ್ಲಿದ್ದ ಸುರಂಗದ ಮೇಲ್ಛಾವಣಿ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ 16 ದಿನಗಳ ಬಳಿಕ ಓರ್ವ ಕಾರ್ಮಿಕನ ಶವ ಪತ್ತೆಯಾಗಿದ್ದು, ಇನ್ನೂ 7 ಕಾರ್ಮಿಕರನ್ನು ಪತ್ತೆಹಚ್ಚಬೇಕಿದೆ.
ಮೃತ ಕಾರ್ಮಿಕನನ್ನು ಗುರುಪ್ರೀತ್ ಸಿಂಗ್ ಎಂದು ಗುರುತಿಸಲಾಗಿದ್ದು, ಮೃತದೇಹ ಯಂತ್ರದೊಳಗೆ ಸಿಲುಕಿಕೊಂಡಾಗ ಪತ್ತೆಯಾಗಿದೆ. ತೆಲಂಗಾಣ ಸಿಎಂ ಎ.ರೇವಂತ್ ರೆಡ್ಡಿ ಹಾಗೂ ನೀರಾವರಿ ಸಚಿವ ಎನ್ ಉತ್ತಮ್ ಕುಮಾರ್ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಸ್ಥರಿಗೆ 25 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.ಇದನ್ನೂ ಓದಿ: ಚಾಂಪಿಯನ್ಸ್ ಟ್ರೋಫಿ ಗೆದ್ದ ಬಳಿಕ ಮೊಹಮ್ಮದ್ ಶಮಿ ತಾಯಿಯ ಕಾಲು ಮುಟ್ಟಿ ಆಶೀರ್ವಾದ ಪಡೆದ ಕೊಹ್ಲಿ
ದೋಮಲಪೆಂಟಾ ಬಳಿಯ ಶ್ರೀಶೈಲಂ ಆಣೆಕಟ್ಟಿನ ಹಿಂಭಾಗದ ಸುರಂಗದಲ್ಲಿ ಸೋರಿಕೆ ಉಂಟಾಗಿದ್ದು, ಸೋರಿಕೆ ಸರಿಪಡಿಸಲು ಕಾರ್ಮಿಕರು ಒಳಗೆ ಹೋದಾಗ ಛಾವಣಿ ಕುಸಿದಿತ್ತು. ಈ ವೇಳೆ 56 ಕಾರ್ಮಿಕರು ಒಳಗೆ ಸಿಲುಕಿದ್ದರು. ಈ ಪೈಕಿ 48 ಜನರನ್ನು ಆರಂಭದಲ್ಲಿಯೇ ರಕ್ಷಿಸಲಾಗಿದ್ದು, 8 ಕಾರ್ಮಿಕರು ಸಿಲುಕಿಕೊಂಡಿದ್ದರು. ಕಾರ್ಮಿಕರನ್ನು ಪತ್ತೆಹಚ್ಚಲು ಕಳೆದ 17 ದಿನಗಳಿಂದ ರಕ್ಷಣಾ ಕಾರ್ಯ ನಡೆಯುತ್ತಿದ್ದು, ಭಾನುವಾರ ಓರ್ವ ಕಾರ್ಮಿಕನ ಶವ ಪತ್ತೆಯಾಗಿದೆ.
ಫೆ.22 ರಂದು ಸುರಂಗ ಕುಸಿತದ ಬಳಿಕ ಸ್ಥಳದಲ್ಲಿ ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್, ಉತ್ತರಾಖಂಡದ ರ‍್ಯಾಟ್ ಮೈನರ್, ಸ್ನಿಫರ್ ನಾಯಿ ಸೇರಿದಂತೆ 300ಕ್ಕೂ ಅಧಿಕ ಸಿಬ್ಬಂದಿ ಜೊತೆಗೂಡಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಕಳೆದ 17 ದಿನಗಳಿಂದ ಹಗಲು, ರಾತ್ರಿ ಕಾರ್ಯಾಚರಣೆ ನಡೆಯುತ್ತಿದೆ.
ಕಾರ್ಯಾಚರಣೆ ಭರದಿಂದ ಸಾಗುತ್ತಿದ್ದು, ರಾಜ್ಯ ಮತ್ತು ಕೇಂದ್ರ ಸರ್ಕಾರ ಎರಡೂ ಅತ್ಯುತ್ತಮ ಪ್ರಯತ್ನ ಮಾಡುತ್ತಿದೆ. ಓರ್ವನ ಮೃತದೇಹ ಪತ್ತೆಯಾದ ಬಳಿಕ ಇನ್ನುಳಿದವರ ರಕ್ಷಣೆಗಾಗಿ ರೋಬೋಟ್ ಬಳಸಲು ರಾಜ್ಯ ಸರ್ಕಾರ ಯೋಜಿಸಿದ್ದು, 4 ಕೋಟಿ ರೂ. ಖರ್ಚು ಮಾಡಲಿದೆ.
ಇನ್ನೂ ಘಟನಾ ಸ್ಥಳಕ್ಕೆ ತೆಲಂಗಾಣ ಸಿಎಂ ಎ.ರೇವಂತ್ ರೆಡ್ಡಿ ಮಾ.2 ರಂದು ಭೇಟಿ ನೀಡಿದ್ದರು. ಇದೀಗ ಮಾ.11 ರಂದು ಘಟನಾ ಸ್ಥಳಕ್ಕೆ ಇನ್ನೊಮ್ಮೆ ಭೇಟಿ ನೀಡುವ ಮೂಲಕ ರಕ್ಷಣಾ ಕಾರ್ಯಾಚರಣೆಯನ್ನು ಪರಿಶೀಲಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಘಟನೆ ಏನು?
ತೆಲಂಗಾಣದ ನಾಗರ್‌ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ ನಿರ್ಮಾಣ ಹಂತದಲ್ಲಿದ್ದ ಸುರಂಗದಲ್ಲಿ ಮೇಲ್ಛಾವಣಿ ಕುಸಿದು 8 ಮಂದಿ ಕಾರ್ಮಿಕರು ಸಿಲುಕಿದ್ದು, ಸುರಂಗ ನಿರ್ಮಾಣ ಕಂಪನಿ ನೀಡಿದ ಮಾಹಿತಿಯ ಪ್ರಕಾರ, ಸುರಂಗದಲ್ಲಿ 12-13 ಕಿ.ಮೀ ಒಳಗೆ ಸೋರಿಕೆ ಉಂಟಾಗಿತ್ತು. ಅದನ್ನು ಸರಿಪಡಿಸಲು ಕಾರ್ಮಿಕರು ಒಳಗೆ ಹೋದಾಗ ಎಡಭಾಗದಲ್ಲಿರುವ ಸುರಂಗದ ಮೇಲ್ಛಾವಣಿ ಮೂರು ಮೀಟರ್‌ಗಳಷ್ಟು ಕುಸಿದಿತ್ತು.ಇದನ್ನೂ ಓದಿ: ಮಹಿಳೆಯರನ್ನು ಬಲವಂತವಾಗಿ ಮತಾಂತರ ಮಾಡಿದ್ರೆ ನೇಣು ಶಿಕ್ಷೆ ಕಾಯ್ದೆ ತರ್ತೀವಿ: ಮ.ಪ್ರದೇಶ ಸಿಎಂ