ಹೈದರಾಬಾದ್: ತೆಲಂಗಾಣದ ನಾಗರ್‌ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (Srisailam Left Bank Canal) ನಿರ್ಮಾಣ ಹಂತದಲ್ಲಿದ್ದ ಸುರಂಗದಲ್ಲಿ ಮೇಲ್ಛಾವಣಿ ಕುಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಇದೀಗ ಉತ್ತರಾಖಂಡದ ರ‍್ಯಾಟ್ ಮೈನರ್‌ಗಳ ಸ್ಥಳಕ್ಕೆ ಆಗಮಿಸಿವೆ.
ದೋಮಲಪೆಂಟಾ ಬಳಿಯ ಶ್ರೀಶೈಲಂ ಅಣೆಕಟ್ಟಿನ ಹಿಂಭಾಗದ ಸುರಂಗದಲ್ಲಿ ಸೋರಿಕೆ ಉಂಟಾಗಿದ್ದು, ಸೋರಿಕೆ ಸರಿಪಡಿಸಲು ಕಾರ್ಮಿಕರು ಒಳಗೆ ಹೋದಾಗ ಛಾವಣಿ ಕುಸಿದಿತ್ತು. ಈ ವೇಳೆ ಕುಸಿತದಲ್ಲಿ 8 ಮಂದಿ ಕಾರ್ಮಿಕರು ಸಿಲುಕಿದ್ದು, 48 ಕಾರ್ಮಿಕರನ್ನು ರಕ್ಷಿಸಲಾಗಿತ್ತು.ಇದನ್ನೂ ಓದಿ: ಪ್ರಾಣಿಗಳ ಮೇವು ತಿಂದವರು ರೈತರ ಕಲ್ಯಾಣದ ಬಗ್ಗೆ ಯೋಚಿಸಲ್ಲ: ಲಾಲು ವಿರುದ್ಧ ಮೋದಿ ವ್ಯಂಗ್ಯ
ಇದೀಗ 2023ರಲ್ಲಿ ಉತ್ತರಾಖಂಡದ ಸಿಲ್ಕ್ಯಾರಾ ಬೆಂಡ್-ಬಾರ್ಕೋಟ್ ಸುರಂಗದಲ್ಲಿ ಸಿಲುಕಿದ್ದ ನಿರ್ಮಾಣ ಕಾರ್ಮಿಕರನ್ನು ರಕ್ಷಿಸಿದ್ದ ಇಲಿ ಗಣಿಗಾರಿಕೆಗಾರರ ತಂಡವು ಸ್ಥಳಕ್ಕೆ ಆಗಮಿಸಿದ್ದು, ಶ್ರೀಶೈಲಂ ಎಡದಂಡೆ ಕಾಲುವೆ ಕುಸಿತದಲ್ಲಿ ಸಿಲುಕಿರುವ ಕಾರ್ಮಿಕರನ್ನು ಹೊರತೆಗೆಯಲು ಕಾರ್ಯನಿರ್ವಹಿಸಲಿದೆ. ಆದರೆ ಸುರಂಗದೊಳಗೆ ಸಿಲುಕಿರುವ ಕಾರ್ಮಿಕರನ್ನು ರಕ್ಷಿಸಲು ಕನಿಷ್ಠ ಮೂರರಿಂದ ನಾಲ್ಕು ದಿನಗಳು ಬೇಕಾಗಿದ್ದು, ಸುರಂಗವು ಕೆಸರು ಮತ್ತು ಅವಶೇಷಗಳಿಂದ ತುಂಬಿಕೊಂಡಿದೆ. ಹೀಗಾಗಿ ರಕ್ಷಣಾ ಕಾರ್ಯಾಚರಣೆಗೆ ತೊಂದರೆಯಾಗಿದೆ.
ಕಳೆದ 48 ಗಂಟೆಗಳಿಂದ ಭಾರತೀಯ ಸೇನೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ, ರಾಜ್ಯ ವಿಪತ್ತು ನಿರ್ವಹಣಾ ಪಡೆ ನಿರಂತರವಾಗಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದರೂ ಕೂಡ ಪ್ರಯೋಜನವಾಗಿಲ್ಲ. ರಕ್ಷಣಾ ತಂಡವು ಭಾನುವಾರ ರಾತ್ರಿ ಲೋಕೋಮೋಟಿವ್‌ನ ಸಹಾಯದಿಂದ 11 ಕಿ.ಮೀ ಹಾಗೂ ಕನ್ವೇಯರ್ ಬೆಲ್ಟ್ನ ನೆರವಿನಿಂದ 2 ಕಿ.ಮೀ ಕ್ರಮಿಸಿದ್ದರು. ಈ ವೇಳೆ ಕಾರ್ಮಿಕರ ಹೆಸರಿನಿಂದ ಕೂಗಿದ್ದು, ಯಾವುದೇ ರೀತಿಯ ಪ್ರತಿಕ್ರಿಯೆ ಬಂದಿರಲಿಲ್ಲ. ಇನ್ನೂ ಸುರಂಗದ ಕೊನೆಯ 2 ಕಿ.ಮೀ ಪ್ರದೇಶವು ನೀರಿನಿಂದ ತುಂಬಿದ್ದು, ಅದನ್ನು ಸ್ವಚ್ಛಗೊಳಿಸಿದ ಬಳಿಕ ಮುಂದೆ ಸಾಗಲು ಸಾಧ್ಯವಾಗುತ್ತದೆ ಎಂದು ಮಾಹಿತಿ ನೀಡಿದ್ದರು.
ಕುಸಿದಿದ್ದು ಹೇಗೆ?
ತೆಲಂಗಾಣದ ನಾಗರ್‌ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ ನಿರ್ಮಾಣ ಹಂತದಲ್ಲಿದ್ದ ಸುರಂಗದಲ್ಲಿ ಮೇಲ್ಛಾವಣಿ ಕುಸಿದು 8 ಮಂದಿ ಕಾರ್ಮಿಕರು ಸಿಲುಕಿದ್ದು, ಘಟನೆಯಲ್ಲಿ 48 ಕಾರ್ಮಿಕರನ್ನು ರಕ್ಷಿಸಲಾಗಿದೆ. ಸುರಂಗ ನಿರ್ಮಾಣ ಕಂಪನಿ ನೀಡಿದ ಮಾಹಿತಿಯ ಪ್ರಕಾರ, ಸುರಂಗದಲ್ಲಿ 12-13 ಕಿಮೀ ಒಳಗೆ ಸೋರಿಕೆ ಉಂಟಾಗಿತ್ತು. ಅದನ್ನು ಸರಿಪಡಿಸಲು ಕಾರ್ಮಿಕರು ಒಳಗೆ ಹೋದಾಗ ಎಡಭಾಗದಲ್ಲಿರುವ ಸುರಂಗದ ಮೇಲ್ಛಾವಣಿ ಮೂರು ಮೀಟರ್‌ಗಳಷ್ಟು ಕುಸಿದಿದ್ದರಿಂದ ಅವಘಢ ಸಂಭವಿಸಿದೆ.ಇದನ್ನೂ ಓದಿ: ಮಾಣಿ-ಸಂಪಾಜೆ ಹೈವೇ ಚತುಷ್ಪಥಕ್ಕೆ ಡಿಪಿಆರ್ ತಯಾರಿಸಲು ಸರ್ಕಾರ ಅನುಮೋದನೆ