ನವದೆಹಲಿ: ವಿಶ್ವದ ಅತ್ಯಂತ ಜನಪ್ರಿಯ ಮೆಸೇಜಿಂಗ್ ಅಪ್ಲಿಕೇಶನ್ ಟೆಲಿಗ್ರಾಮ್‌ನ (Telegram) ಬಿಲಿಯನೇರ್ ಸಂಸ್ಥಾಪಕ ಮತ್ತು ಸಿಇಒ ಪಾವೆಲ್ ಡುರೊವ್ ಅವರನ್ನು ಶನಿವಾರ ಪ್ಯಾರಿಸ್ ಬಳಿಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ಇದರ ನಡುವೆ ಪಾವೆಲ್ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಭಾರತದಲ್ಲಿ (India) ಟೆಲಿಗ್ರಾಮ್ ಬ್ಯಾನ್ (Telegram Ban) ಮಾಡಲು ಸರ್ಕಾರ ಯೋಚಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಸುಲಿಗೆ ಮತ್ತು ಜೂಜಾಟ ಹೀಗೆ ಇತ್ಯಾದಿಗಳನ್ನು ಒಳಗೊಂಡಿರುವ ಅಪರಾಧ ಚಟುವಟಿಕೆಗಳಲ್ಲಿ ಈ ಅಪ್ಲಿಕೇಶನ್‌ನ್ನು ಬಳಸಲಾಗುತ್ತಿದೆಯೇ ಎಂದು ತಿಳಿಯಲು ಸರ್ಕಾರ ಇದೀಗ ತನಿಖೆ ಪ್ರಾರಂಭಿಸಿದೆ. ಈ ಬಗ್ಗೆ ಕೆಲವು ಮಾಧ್ಯಮಗಳು ಸಹ ವರದಿ ಮಾಡಿದ್ದು, ತನಿಖೆಯಲ್ಲಿ ಸತ್ಯ ಬಯಲಾದ್ರೆ, ಟೆಲಿಗ್ರಾಮ್ ಅಪ್ಲಿಕೇಶನ್ ನಿಷೇಧಿಸುವ ಸಾಧ್ಯತೆಯಿದೆ ಎಂಬ ಸುದ್ದಿ ಹರಿದಾಡುತ್ತಿದೆ.
Advertisement
Advertisement
ಭಾರತದಲ್ಲಿ, ಗೃಹ ವ್ಯವಹಾರಗಳ ಸಚಿವಾಲಯ ಮತ್ತು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಸಂಸ್ಥೆಯಾದ ಇಂಡಿಯನ್ ಸೈಬರ್ ಕ್ರೈಮ್ ಕೋ ಆರ್ಡಿನೇಷನ್ ಸೆಂಟರ್ (I4C) ಮೂಲಕ ಈ ತನಿಖೆಯನ್ನು ಪ್ರಾರಂಭಿಸುವ ಸಾಧ್ಯತೆಯಿದೆ. ಡುರೊವ್ ತನ್ನ ಅಪ್ಲಿಕೇಷನ್ ಕ್ರಿಮಿನಲ್ ಬಳಕೆಯನ್ನು ತಡೆಗಟ್ಟಲು ಕ್ರಮ ತೆಗೆದುಕೊಳ್ಳಲು ವಿಫಲರಾಗಿದ್ದಾರೆ ಎನ್ನಲಾಗಿದೆ.
Advertisement
Advertisement
ರಷ್ಯಾದ ಮೂಲದ ಡುರೊವ್ ಅವರು ಈ ಸಂದೇಶ ಕಳುಹಿಸುವ ಅಪ್ಲಿಕೇಶನ್ ಟೆಲಿಗ್ರಾಮ್‌ನ್ನು ಪ್ರಾರಂಭಿಸಿದ್ದರು. ಟೆಲಿಗ್ರಾಮ್ ಭಾರತದಲ್ಲಿ ಸುಮಾರು 5 ಮಿಲಿಯನ್ಗೂ ಅಧಿಕ ಬಳಕೆದಾರರನ್ನು ಹೊಂದಿದೆ.