ಬೆಂಗಳೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಅಗ್ನಿಸಾಕ್ಷಿ’ಯ ಅಖಿಲ್ ಪಾತ್ರಧಾರಿಯ ರಾಜೇಶ್ ಧ್ರುವ ವಿರುದ್ಧ ಕಿರುಕುಳ ಆರೋಪ ಪ್ರಕರಣ ದಾಖಲಾಗಿದ್ದು, ಇಂದು 10.30ರ ಸುಮಾರಿಗೆ ರಾಜೇಶ್ ವಿಚಾರಣೆಗೆ ಹಾಜರಾಗಲಿದ್ದಾರೆ.
ರಾಜೇಶ್ ಇಂದು ಬಸವನಗುಡಿ ಮಹಿಳಾ ಠಾಣೆ ಅಧಿಕಾರಿ ಸತ್ಯವತಿ ಮುಂದೆ ಹಾಜರಾಗಿ ದೂರಿನ ಬಗ್ಗೆ ಉತ್ತರ ನೀಡಲಿದ್ದಾರೆ. ಇದನ್ನೂ ಓದಿ: ಅಗ್ನಿಸಾಕ್ಷಿ ಅಖಿಲ್ ವಿರುದ್ಧ ದೂರು ದಾಖಲು
ಏನಿದು ಪ್ರಕರಣ?
ರಾಜೇಶ್ ಧ್ರುವ 2017ರಲ್ಲಿ ಶೃತಿ ಅವರನ್ನು ಮದುವೆಯಾಗಿ ಬಳಿಕ ಅವರಿಗೆ ವರದಕ್ಷಿಣೆ ತರುವಂತೆ ಟಾರ್ಚರ್ ನೀಡಿದ್ದಾರೆ. ಅಲ್ಲದೆ ಮಾನಸಿಕ ಹಿಂಸೆ ನೀಡಿ ಮನೆಯಿಂದ ಹೊರ ಹಾಕಿದ್ದಾರೆ ಎಂದು ಪತ್ನಿ ಶೃತಿ ತಮ್ಮ ಪತಿ ರಾಜೇಶ್ ಮೇಲೆ ಆರೋಪ ಮಾಡಿದ್ದಾರೆ. ಶೃತಿ ಜೊತೆ ಲಿವಿಂಗ್ ಟುಗೆದರ್ ರಿಲೇಶನ್‍ಶಿಪ್‍ನಲ್ಲಿದ್ದ ಧ್ರುವ ಅವರು 2017ರಲ್ಲಿ ಶೃತಿ ಜೊತೆ ಮದುವೆಯಾಗಿದ್ದರು. ಮದುವೆ ಆದ ಬಳಿಕ ಮುಖ್ಯಮಂತ್ರಿ ಚಂದ್ರು ಅವರ ಮನೆಯಲ್ಲಿ ಬಾಡಿಗೆಗೆ ಇದ್ದರು. ಮದುವೆ ಆದರೂ ನನಗೆ ಮದುವೆಯಾಗಿಲ್ಲ ಎಂದು ಧ್ರುವ ಹೇಳಿಕೊಂಡು ತಿರುಗಾಡುತ್ತಿದ್ದರು. ಇದನ್ನೂ ಓದಿ: ಹೊರಗಡೆ ಮಾಂಸ ತಿಂದು ಮನೆಯಲ್ಲಿ ತಾಯಿಗೆ ಕಿರುಕುಳ: ಶ್ರುತಿ ಆರೋಪಕ್ಕೆ ರಾಜೇಶ್ ಧ್ರುವ ತಿರುಗೇಟು
ಮದುವೆಯಾದ ಬಳಿಕ ಧ್ರುವ ಬೇರೆ ಯುವತಿಯರ ಜೊತೆ ಅಫೈರ್ ಇಟ್ಟುಕೊಂಡಿದ್ದರು. ಯುವತಿ `ತಕಧಿಮಿತ’ ರಿಯಾಲಿಟಿ ಶೋನಲ್ಲಿ ಸ್ಪರ್ಧಿ ಆಗಿ ಭಾಗವಹಿಸುತ್ತಿದ್ದಾರೆ. ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ನಲ್ಲಿ ಈ ಘಟನೆ ನಡೆದಿದ್ದು, ಪ್ರಕರಣ ಸಂಬಂಧ ಕೆ.ಎಸ್ ಪೊಲೀಸ್ ಠಾಣೆಯಲ್ಲಿ ಶೃತಿ ಪ್ರಕರಣ ದಾಖಲಿಸಿದ್ದರು.
https://www.youtube.com/watch?v=z83AFF9LPEY
https://www.youtube.com/watch?v=fczBXKZKrN4
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv