ಬೆಂಗಳೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ರಾಧಾ ರಮಣ ಧಾರಾವಾಹಿಯ ನಟ ಸ್ಕಂದ ಆಶೋಕ್ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಬಹುದಿನದ ಗೆಳತಿ ಜೊತೆ ಸ್ಕಂದ ಮದುವೆಯಾಗಲಿದ್ದಾರೆ.
ನಟ ಸ್ಕಂದ ಆಶೋಕ್ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದು, ನಾಲ್ಕು ವರ್ಷಗಳಿಂದ ಪ್ರೀತಿಸುತ್ತಿದ್ದ ತನ್ನ ಪ್ರೇಯಸಿ ಶಿಖಾ ಪ್ರಸಾದ್ ಜೊತೆ ತಮ್ಮ ಪೂರ್ತಿ ಜೀವನವನ್ನು ಕಳೆಯಲು ಸಿದ್ಧರಾಗಿದ್ದಾರೆ.
- Advertisement 2
- Advertisement 3
ಶಿಖಾ ಪ್ರಸಾದ್ ವೃತ್ತಿಯಲ್ಲಿ ಫ್ಯಾಷನ್ ಡಿಸೈನರ್ ಆಗಿದ್ದಾರೆ. ಇವರಿಬ್ಬರು ನಾಲ್ಕು ವರ್ಷದಿಂದ ಪ್ರೀತಿಸುತ್ತಿದ್ದು, ಇತ್ತೀಚಿಗಷ್ಟೇ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಈಗ ಇದೇ ತಿಂಗಳು ಮೇ 30ರಂದು ಗುರು-ಹಿರಿಯರ ಸಮ್ಮುಖದಲ್ಲಿ ಮದುವೆ ಆಗಲಿದ್ದಾರೆ.
- Advertisement 4
ನಟ ಸ್ಕಂದ ಆಶೋಕ್ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಕನ್ನಡ ಸೇರಿದಂತೆ ಹಿಂದಿ, ಮಲೆಯಾಳಂ, ತೆಲುಗು, ತಮಿಳು ಚಿತ್ರಗಳಲ್ಲೂ ನಟಿಸಿದ್ದಾರೆ. ಸದ್ಯ ಸ್ಕಂದ ಧಾರಾವಾಹಿಯಲ್ಲಿ ನಾಯಕನಾಗಿ ಅಭಿನಯಿಸುತ್ತಿದ್ದಾರೆ.