ಹುಬ್ಬಳ್ಳಿ: ನಮ್ಮ ಮಾಜಿ ಸಿಎಂ ಸಿದ್ದರಾಮಯ್ಯ ಅವರ 75 ನೇ ಜನ್ಮದಿನಾಚರಣೆ ಇದೆ. ಆ ಕಾರ್ಯಕ್ರಮಕ್ಕೆ ನಾವೆಲ್ಲಾ ಹೋಗುತ್ತೇವೆ. ನಿಮ್ಮ ಬರ್ತ್ಡೇ ಇದ್ದರೆ ಹೇಳಿ, ಆ ಕಾರ್ಯಕ್ರಮಕ್ಕೂ ನಾವು ಬರ್ತೀವಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿಕೆ ನೀಡಿದರು.
ಹುಬ್ಬಳ್ಳಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ನೀವು ಸಿದ್ದರಾಮೋತ್ಸವದಲ್ಲಿ ಪಾಲ್ಗೊಳ್ಳುತ್ತೀರಾ ಎಂಬ ಪ್ರಶ್ನೆಯನ್ನು ಪತ್ರಕರ್ತರು ಡಿಕೆಶಿಗೆ ಕೇಳಿದ್ದು, ಅವರು ಎಲ್ಲೂ ಸಿದ್ದರಾಮೋತ್ಸವ ಪದವನ್ನು ಬಳಸದೇ, ನಮ್ಮ ಮಾಜಿ ಸಿಎಂ ಅವರ 75 ನೇ ವರ್ಷದ ಜನ್ಮದಿನ ಅಷ್ಟೇ. ಅದನ್ನು ನೀವೇನು ಬೇಕಾದರೂ ಬರೆದುಕೊಳ್ಳಿ ನಾನೇನೂ ಹೇಳಲ್ಲ ಎಂದರು.
Advertisement
Advertisement
ದಕ್ಷಿಣ ಕನ್ನಡ ಜಿಲ್ಲೆಯ ಪ್ರವೀಣ್ ಹತ್ಯೆ ವಿಚಾರವಾಗಿ ಮಾತನಾಡಿದ ಅವರು, ರಾಜ್ಯದಲ್ಲಿ ಪದೇ ಪದೆ ಇಂತಹ ಹತ್ಯೆಗಳು ನಡೆಯುತ್ತಿವೆ, ಇದಕ್ಕೆ ಖಂಡನೆಯಿದೆ. ಸಾವು ಯಾರದ್ದೇ ಆದರೂ ಅದು ಮನುಷ್ಯನ ಸಾವು. ಸರ್ಕಾರ ಅಂತಹ ಸಾವುಗಳಿಗೆ ನ್ಯಾಯ ಒದಗಿಸಿಕೊಡುವ ಕೆಲಸ ಮಾಡಬೇಕಿದೆ. ಬಿಜೆಪಿ ಕಾರ್ಯಕರ್ತರಿಗೆ ಅವರ ಸರ್ಕಾರದ ಮೇಲೆ ನಂಬಿಕೆ ಇತ್ತು. ಆದರೆ ಸರ್ಕಾರ ಅವರ ನಂಬಿಕೆಯನ್ನು ಕಳೆದುಕೊಂಡಿದೆ ಎಂದು ಹೇಳಿದರು. ಇದನ್ನೂ ಓದಿ: ದಕ್ಷಿಣ ಕನ್ನಡದಲ್ಲಿ ನಿರ್ಬಂಧ ಇನ್ನೆರಡು ದಿನ ವಿಸ್ತರಣೆ
Advertisement
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಕಾನೂನು ಸುವ್ಯವಸ್ಥೆ ಕಾಪಾಡಲು ಅವರ ಕೈಯಿಂದ ಆಗಲ್ಲ. ಬಿಜೆಪಿ ಕಾರ್ಯಕರ್ತರ ನೋವಿನಲ್ಲಿ ನಾನೂ ಇದ್ದೇನೆ. ಹತ್ಯೆಯಾದ ಮೂವರೂ ಅಮಾಯಕರ ಮನೆಗೆ ಒಂದು ದಿನ ಭೇಟಿ ನೀಡಲಿದ್ದೇನೆ ಎಂದು ತಿಳಿಸಿದರು.
Advertisement
ಬಿಜೆಪಿಯವರಿಗೆ ಸ್ವಾತಂತ್ರ್ಯದ ಬಗ್ಗೆ ಗೌರವ ಇಲ್ಲ. ರಾಷ್ಟ್ರಧ್ವಜದ ಬಗ್ಗೆ ಮಾತನಾಡುವವರಿಗೆ ಅದರ ಇತಿಹಾಸ ಗೊತ್ತಿಲ್ಲ. ಇತಿಹಾಸ ಗೊತ್ತಿಲ್ಲದೆಯೇ ರಾಷ್ಟ್ರಧ್ವಜದ ಬಗ್ಗೆ ಮಾತನಾಡುತ್ತಾರೆ ಎಂದು ತಮ್ಮ ಅಸಮಾಧಾನ ಹೊರಹಾಕಿದರು. ಇದನ್ನೂ ಓದಿ: ನಿವೃತ್ತಿ ಅಂಚಿನಲ್ಲಿರೋ ಸಿದ್ದು, ಯೋಗ್ಯತೆಯಿಲ್ಲದ ಡಿಕೆಶಿನ ಸಿಎಂ ಮಾಡಿ ಏನ್ ಮಾಡ್ಬೇಕು – ಅಶ್ವಥ್ ನಾರಾಯಣ