ಅಮರಾವತಿ: ತೆಲುಗು ಚಿತ್ರರಂಗದ ಹಿರಿಯ ನಟ ಹಾಗೂ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಸದಸ್ಯ ಪೋಸಾನಿ ಕೃಷ್ಣ ಮುರಳಿ (Posani Krishna Murali) ಅವರನ್ನು ಫೆ.26ರ ರಾತ್ರಿ 8:45ರ ಸುಮಾರಿಗೆ ಆಂಧ್ರ ಪ್ರದೇಶದ ಪೊಲೀಸರು (Andhra Pradesh police) ಬಂಧಿಸಿದ್ದಾರೆ.
ನಟನ ವಿರುದ್ಧ ಓಬುಲವಾರಿಪಲ್ಲಿ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 196, 353(2), ಮತ್ತು 111 ಹಾಗೂ ಎಸ್‌ಸಿ/ಎಸ್‌ಟಿ ಕಾಯ್ದೆಯ ಸೆಕ್ಷನ್ 3(5) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ನಟನನ್ನು ಬಂಧಿಸಿರುವ ಪೊಲೀಸರು ರಾಜಂಪೇಟೆಯ ಹೆಚ್ಚುವರಿ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲು ಮುಂದಾಗಿದ್ದಾರೆ. ಇದನ್ನೂ ಓದಿ: ಹೈವೇಯಲ್ಲಿ ಸರಣಿ ಅಪಘಾತ – ಈಶಾಗೆ ಬಂದಿದ್ದ ವಾಹನ ಸವಾರರ ಪರದಾಟ
ಸಮುದಾಯವೊಂದರ ವಿರುದ್ಧ ನಟ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ಹೇಳಿಕೆಯು ಎರಡು ಗುಂಪುಗಳ ನಡುವೆ ವೈಷಮ್ಯಕ್ಕೂ ಕಾರಣವಾಯಿತು. ಈ ಹಿನ್ನೆಲೆ ಪೋಸಾನಿ ಕೃಷ್ಣ ವಿರುದ್ಧ ಕೇಸ್ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಇಶಾ ಫೌಂಡೇಶನ್ ಶಿವರಾತ್ರಿ ಕಾರ್ಯಕ್ರಮ – ಅಮಿತ್ ಶಾ, ಡಿಕೆ ಶಿವಕುಮಾರ್ ಭಾಗಿ
ಪೋಸಾನಿ ಕೃಷ್ಣ ಅವರು ಕಾನೂನು ಸಂಕಷ್ಟ ಎದುರಿಸುತ್ತಿರುವುದು ಇದೇ ಮೊದಲೇನಲ್ಲ. 2024ರ ನವೆಂಬರ್‌ನಲ್ಲಿ ಸಿಎಂ ಚಂದ್ರಬಾಬು ನಾಯ್ಡು ವಿರದ್ಧವೂ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಆಗಲೂ ತಮ್ಮ ವಿರುದ್ಧ ಕೇಸ್ ದಾಖಲಾಗಿತ್ತು. ಇದನ್ನೂ ಓದಿ: ಅಫ್ಘಾನಿಸ್ತಾನಕ್ಕೆ ರೋಚಕ 8 ರನ್‌ಗಳ ಜಯ – ಚಾಂಪಿಯನ್ಸ್ ಟ್ರೋಫಿಯಿಂದ ಇಂಗ್ಲೆಂಡ್ ಔಟ್