ಗದಗ: ಟಂಟಂ ವಾಹನ ಪಲ್ಟಿಯಾದ ಪರಿಣಾಮ 10 ಮಂದಿಗೆ ಗಾಯಗಳಾಗಿರುವ ಘಟನೆ ಜಿಲ್ಲೆಯ ಮುಂಡರಗಿ ತಾಲೂಕಿನ ಕಪ್ಪತ್ತಗುಡ್ಡದಲ್ಲಿ ನಡೆದಿದೆ.
ಕಪ್ಪತ್ತಗುಡ್ಡದ ಕಪ್ಪತ್ತಮಲ್ಲಯ್ಯ ಜಾತ್ರೆ ಮುಗಿಸಿಕೊಂಡು ಬರುವ ವೇಳೆ ಈ ದುರ್ಘಟನೆ ಸಂಭವಿಸಿದೆ. ಗಾಯಾಳುಗಳು ಗದಗ ತಾಲೂಕಿನ ಬೆಳಧಡಿ ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ. ಈ ಟಂಟಂ ನಲ್ಲಿ 10 ಜನರು ಪ್ರಯಾಣ ಮಾಡುತ್ತಿದ್ದರು.
Advertisement
Advertisement
ಅಪಘಾತದಲ್ಲಿ ಓರ್ವ ಬಾಲಕ ಹಾಗೂ ಮತ್ತಿಬ್ಬರು ಮಹಿಳೆಯರಿಗೆ ಗಂಭೀರವಾಗಿ ಗಾಯಗಳಾಗಿವೆ. ಆದರೆ ಕಪ್ಪತ್ತಗುಡ್ಡದಲ್ಲಿ ಮೊಬೈಲ್ ನೆಟ್ ವರ್ಕ್ ಸಂಪರ್ಕ ಸಿಗದ ಕಾರಣ ಅಂಬ್ಯುಲೆನ್ಸ್ ಗೆ ಕರೆ ಮಾಡಲು ಸಾಧ್ಯವಾಗದೇ ಪರದಾಡುವಂತ ಸ್ಥಿತಿ ನಿರ್ಮಾಣವಾಗಿತ್ತು. ನಂತರ ಜಾತ್ರೆಗೆ ಆಗಮಿಸಿದ ಭಕ್ತರು ಗಾಯಾಳುಗಳನ್ನು ಉಪಚಾರ ಮಾಡಿದ್ದಾರೆ. ಬಳಿಕ ಸಮೀಪದ ಗದಗ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
Advertisement
ಚಾಲಕನ ಅಜಾಗರೂಕತೆಯಿಂದ ನಿಯಂತ್ರಣ ತಪ್ಪಿ ಟಂಟಂ ಬೃಹತ್ ಕಂದಕಕ್ಕೆ ಉರುಳಿದೆ ಎನ್ನಲಾಗಿದೆ. ಈ ಕುರಿತು ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv