ಮಂಗಳೂರು: ಬಪ್ಪನಾಡು ದೇವಸ್ಥಾನದ ಜಾತ್ರೋತ್ಸವದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧದ ವಿಚಾರವಾಗಿ ಕ್ಷೇತ್ರದ ಆಡಳಿತ ಮಂಡಳಿ ಸಾಮರಸ್ಯವನ್ನು ಎತ್ತಿ ಹಿಡಿದಿದೆ.
ಬಪ್ಪನಾಡು ಕ್ಷೇತ್ರದ ಹಿಂದೂ ಧಾರ್ಮಿಕ ಮುಖಂಡ, ಮಾಜಿ ಮೊಕ್ತೇಸರ ಹರಿಕೃಷ್ಣ ಪುನರೂರು ಮಾತನಾಡಿ, ಭಾರತದಲ್ಲಿ ಎಲ್ಲರಿಗೂ ಬದುಕುವ ಹಕ್ಕಿದೆ. ಕೆಲಸ ಮಾಡಿ ಬದುಕಲು ಜಾತಿಯನ್ನು ನೋಡಬಾರದು. ಮತಾಂತರ ಮಾಡಿದರೆ ಅವರನ್ನು ಪ್ರಶ್ನೆ ಮಾಡಬಹುದು. ಆದರೆ ಬದುಕಲು ಅಡ್ಡಗಾಲು ಹಾಕುವುದು ಸರಿಯಲ್ಲ ಎಂದು ತಿಳಿಸಿದರು.
ಯಾರೇ ಆಗಲಿ ಅವರ ವ್ಯಾಪಾರಕ್ಕೆ ಅಡ್ಡಿ ಮಾಡಬಾರದು. ನಾನು 11 ವರ್ಷಗಳ ಕಾಲ ಈ ಕ್ಷೇತ್ರದಲ್ಲಿ ಆಡಳಿತ ಮೊಕ್ತೇಸರನಾಗಿ ಕೆಲಸ ಮಾಡಿದ್ದೇನೆ. ಈ ದೇವಸ್ಥಾನಕ್ಕೆ ಕೈ ಮುಗಿಯಲು ಮುಸ್ಲಿಂ, ಕ್ರೈಸ್ತರು ಬರುತ್ತಾರೆ. ಈ ಪುಣ್ಯಕ್ಷೇತ್ರದಲ್ಲಿ ನಾವೇ ಜಗಳವನ್ನು ಎಳೆಯಬಾರದು ಎಂದು ಮನವಿ ಮಾಡಿದರು. ಬಪ್ಪನಾಡು ದೇವಸ್ಥಾನ ಹಾಗೂ ಮಾರಿಕಾಂಬಾ ದೇವಸ್ಥಾನ ಕಟ್ಟಿದವರು ಮುಸ್ಲಿಮರು: ರಿಜ್ವಾನ್
ಈ ಕ್ಷೇತ್ರ 32 ಗ್ರಾಮಗಳಿಗೆ ಸಂಬಂಧಪಟ್ಟ ದೇವಸ್ಥಾನವಾಗಿದೆ. ಮತಾಂತರ ಮಾಡಿದರೆ ಪ್ರತಿಭಟನೆ ಮಾಡಬಹುದು. ಆದರೆ ಸೌಹಾರ್ದಯುತವಾಗಿ ಬಾಳಲು ಅಡ್ಡಿ ಮಾಡಬಾರದು. ಬಪ್ಪ ಬ್ಯಾರಿ ಎಂಬ ಮುಸ್ಲಿಂ ಕ್ಷೇತ್ರವನ್ನು ಜಿರ್ಣೋದ್ಧಾರ ಮಾಡಿದ ಇತಿಹಾಸವಿದೆ ಎಂದರು.
ಭಕ್ತರು ಕ್ಷೇತ್ರದ ಸೌಹಾರ್ದತೆಗೆ, ಸಾಮರಸ್ಯಕ್ಕೆ ಪ್ರೋತ್ಸಾಹ ನೀಡಬೇಕು. ಈ ಕ್ಷೇತ್ರದಲ್ಲಿ ಎಲ್ಲರಿಗೂ ಅವಕಾಶ ನೀಡಬೇಕು. ಕೆಲವರು ಸೌಹಾರ್ದತೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಆದರೆ ಆಡಳಿತ ಮಂಡಳಿಗೆ ಆ ಉದ್ದೇಶ ಇಲ್ಲ ಎಂದು ಸ್ಪಷ್ಟ ಪಡಿಸಿದರು. ಮುಸ್ಲಿಮ್ ವ್ಯಾಪಾರಿಗಳಿಗೆ ನಿರ್ಬಂಧದ ಬ್ಯಾನರ್ ಹಾಕಿದವರು ಹೇಡಿಗಳು: ಖಾದರ್
ಘಟನೆ ಏನು?: ಹಿಜಬ್ ತೀರ್ಪು ವಿರೋಧಿಸಿ ಮುಸ್ಲಿಂ ಸಂಘಟನೆಗಳು ಕರ್ನಾಟಕ ಬಂದ್‍ಗೆ ಕರೆ ನೀಡಿತ್ತು. ಕೋರ್ಟ್ ತೀರ್ಪು ವಿರೋಧಿಸಿ ಬಂದ್ ಕರೆ ಕೊಟ್ಟಿದ್ದು ಹಿಂದೂ ಸಂಘಟನೆಗಳ ಅಸಮಾಧಾನಕ್ಕೆ ಕಾರಣವಾಗಿದೆ.
ಮಂಗಳೂರಿನ ಪ್ರತಿಷ್ಠಿತ ದೇವಸ್ಥಾನಗಳಾದ ಮಂಗಳಾದೇವಿ ದೇವಸ್ಥಾನ, ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನಗಳ ಜಾತ್ರೋತ್ಸವದಲ್ಲಿ ಹಿಂದೂಯೇತರರಿಗೆ ವ್ಯಾಪಾರಕ್ಕೆ ಅವಕಾಶ ಇಲ್ಲ ಎಂಬ ನಿರ್ಧಾರ ಕೈಗೊಳ್ಳಲಾಗಿದ್ದು, ಈ ಸಂಬಂಧ ದೇವಸ್ಥಾನಗಳ ಮುಂಭಾಗ ಬ್ಯಾನರ್ ಅಳವಡಿಕೆ ಮಾಡಲಾಗಿತ್ತು. ಜಾತ್ರೋತ್ಸವದಲ್ಲಿ ಹಿಂದೂಯೇತರರಿಗೆ ವ್ಯಾಪಾರಕ್ಕೆ ಅವಕಾಶ ಇಲ್ಲ. ಸಂವಿಧಾನಕ್ಕೆ ವಿರುದ್ಧವಾದವರಿಗೆ, ಗೋ ಕಟುಕರಿಗೆ ವ್ಯಾಪಾರಕ್ಕೆ ಅವಕಾಶ ಇಲ್ಲ ಎಂಬ ಬರಹದ ಬ್ಯಾನರ್ ದೇವಸ್ಥಾನದ ಮುಂಭಾಗ ಹಾಕಲಾಗಿದೆ.