ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗೊಳಸಂಗಿ ಗ್ರಾಮದಲ್ಲಿ ನಂದಿ ಮೂರ್ತಿಗೆ ಯಾರೋ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿದ್ದಾರೆ.
ಇಂದು ಬೆಳಗ್ಗಿನ ಜಾವ ಪೂಜಾ ವಿಧಿ-ವಿಧಾನದ ಮಾಡುವಾಗ ಚಪ್ಪಲಿ ಹಾರ ಹಾಕಿರುವ ವಿಚಾರ ಬೆಳಕಿಗೆ ಬಂದಿದೆ. ಶುಕ್ರವಾರ ರಾತ್ರಿ ಪೂಜೆ ಮಾಡಿದ ಬಳಿಕ ದೇವಸ್ಥಾನಕ್ಕೆ ಬಾಗಿಲು ಹಾಕಲಾಗಿತ್ತು. ಆದರೆ ಇಂದು ಬೆಳಗ್ಗೆ ಮತ್ತೆ ದೇವಾಲಯದ ಬಾಗಿಲು ತೆರೆದಾಗ ನಂದಿ ವಿಗ್ರಹಕ್ಕೆ ಚಪ್ಪಲಿ ಹಾರ ಹಾಕಿರುವುದು ಕಂಡು ಬಂದಿದೆ.
Advertisement
Advertisement
ರಾತ್ರಿ ದೇವಸ್ಥಾನದಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿದ ಕಿಡಿಗೇಡಿಗಳು ನಂದಿ ವಿಗ್ರಹಕ್ಕೆ ಚಪ್ಪಲಿ ಹಾರ ಹಾಕಿದ್ದಾರೆ ಎಂದು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ತಕ್ಷಣ ಪೊಲೀಸರಿಗೆ ಮಾಹಿತಿ ತಿಳಿಸಲಾಗಿದ್ದು, ಕೂಡಗಿ ಎನ್‍ಟಿಪಿಸಿ ಪೊಲೀಸ್ ಠಾಣೆಯ ಪಿಎಸ್‍ಐ ಬಸವರಾಜ್ ಅವರು ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Advertisement
ಬಸವ ಭಕ್ತರು ಶ್ವಾನದಳ ಬಂದು ಪರಿಶೀಲನೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಈ ಘಟನೆ ಕೂಡಗಿ ಎನ್‍ಟಿಪಿಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.