ಶಿವಮೊಗ್ಗ: ನಗರದ ಸಾಯಿಬಾಬಾ ದೇವಸ್ಥಾನದ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಪ್ರಸಾದ ಸೇವನೆ ಮಾಡಿದ 25 ರಿಂದ 30 ಮಂದಿ ಭಕ್ತರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಜಿಲ್ಲೆಯ ಸಾಗರದಲ್ಲಿ ನಡೆದಿದೆ.
ಸಾಗರ ನಗರಸಭೆ ವ್ಯಾಪ್ತಿಯ ವಿನೋಬನಗರದ ಸಾಯಿಬಾಬಾ ದೇವಸ್ಥಾನದಲ್ಲಿ ಶುಕ್ರವಾರ ರಾತ್ರಿ ವಾರ್ಷಿಕೋತ್ಸವ ಸಮಾರಂಭ ಏರ್ಪಡಿಸಲಾಗಿತ್ತು. ಸಮಾರಂಭದಲ್ಲಿ ಭಾಗವಹಿಸಿದ್ದ ಭಕ್ತರು ಪ್ರಸಾದ ಸೇವಿಸಿದ್ದರು. ಆದರೆ ಪ್ರಸಾದ ಸೇವಿಸಿದ ಹಲವು ಮಂದಿಗೆ ಶನಿವಾರ ಸಂಜೆ ಸುಮಾರಿಗೆ ವಾಂತಿ ಭೇದಿ ಆಗಿ ಆರೋಗ್ಯದಲ್ಲಿ ಏರುಪೇರು ಕಂಡು ಬಂದು ಅಸ್ವಸ್ಥಗೊಂಡಿದ್ದರು. ಅಸ್ವಸ್ಥರಾದವರನ್ನು ಸಾಗರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಕುತೂಹಲ ಮೂಡಿಸಿದ ರಮೇಶ್ ಜಾರಕಿಹೊಳಿ, ಯತ್ನಾಳ್ ರಹಸ್ಯ ಸಮಾಲೋಚನೆ!
ಸದ್ಯ ವೈದ್ಯರು ಅಸ್ವಸ್ಥಗೊಂಡವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಯಾವ ಕಾರಣಕ್ಕಾಗಿ ಈ ರೀತಿಯಾಗಿದೆ ಎಂದು ತಿಳಿದು ಬಂದಿಲ್ಲ. ಸುದ್ದಿ ತಿಳಿಯುತ್ತಿದ್ದಂತೆ ಸಾಗರ ಶಾಸಕ ಹರತಾಳು ಹಾಲಪ್ಪ ಆಸ್ಪತ್ರೆಗೆ ಭೇಟಿ ನೀಡಿ ಅಸ್ವಸ್ಥಗೊಂಡವರ ಆರೋಗ್ಯ ವಿಚಾರಿಸಿದರು. ಅಲ್ಲದೇ ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚಿಸಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಅವ್ರು ಒಂದೇ ಕಲ್ಲಿನಲ್ಲಿ ಹಲವು ಹಕ್ಕಿ ಹೊಡೆದಿದ್ದಾರೆ: ಕುಟುಕಿದ ಬಿಜೆಪಿ