ರಾಜಮೌಳಿ ನಿರ್ದೇಶನದ ಆರ್.ಆರ್.ಆರ್ ಸಿನಿಮಾ ಥಿಯೇಟರ್ ಗೆ ಬರಲು ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಈ ನಡುವೆ ಸಿನಿಮಾ ತಂಡ ದೇವಸ್ಥಾನಗಳಿಗೆ ಭೇಟಿ ನೀಡಿ ಸಿನಿಮಾದ ಗೆಲುವಿನ ಬಗ್ಗೆ ಪ್ರಾರ್ಥಿಸುತ್ತಿದೆ. ಮೊನ್ನೆಯಷ್ಟೇ ಕರ್ನಾಟಕದಲ್ಲಿ ಪ್ರಿ ರಿಲೀಸ್ ಇವೆಂಟ್ ಮಾಡಿದ್ದ ರಾಜಮೌಳಿ ಅಂಡ್ ಟೀಮ್ ಇದೀಗ ಅಮೃತಸರದ ಗೋಲ್ಡನ್ ಟೆಂಪಲ್ ಗೆ ಭೇಟಿ ಕೊಟ್ಟಿದೆ.
ಈ ಅಮೃತಸರದ ಗೋಲ್ಡನ್ ಟೆಂಪಲ್ ದರ್ಶನ ಪಡೆದರೆ, ಅಂದುಕೊಂಡದ್ದು ಎಲ್ಲವೂ ನೆರವೇರುತ್ತದೆ ಎನ್ನುವ ನಂಬಿಕೆ ಇದೆ. ಹಾಗಾಗಿಯೇ ನಿರ್ದೇಶಕ ರಾಜಮೌಳಿ, ನಟರಾದ ರಾಮ್ ಚರಣ್ ತೇಜ್ ಮತ್ತು ಜ್ಯೂನಿಯರ್ ಎನ್.ಟಿ.ಆರ್ ಒಟ್ಟಾಗಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಇದನ್ನೂ ಓದಿ : ‘ದಿ ಕಾಶ್ಮೀರ್ ಫೈಲ್ಸ್’ ರಿಯಲ್ ಸ್ಟೋರಿ : ಅಕ್ಕಿ ಡ್ರಮ್ ನಲ್ಲಿ ಕೊಲ್ಲಲ್ಪಟ್ಟ ನಿಜವಾದ ಕಾಶ್ಮೀರಿ ಪಂಡಿತ ಇವರು
ಈಗಾಗಲೇ ಆರ್.ಆರ್.ಆರ್ ಸಿನಿಮಾ ಅತೀ ನಿರೀಕ್ಷೆಯನ್ನು ಮೂಡಿಸಿದೆ. ಹಲವು ಭಾಷೆಗಳಲ್ಲಿ ಸಿನಿಮಾ ರಿಲೀಸ್ ಆಗುತ್ತಿದ್ದು, ಈಗಾಗಲೇ ಬಿಡುಗಡೆಯಾಗಿರುವ ಹಾಡುಗಳು ಮತ್ತು ಟ್ರೇಲರ್ ಸಖತ್ ಕ್ರೇಜ್ ಕ್ರಿಯೇಟ್ ಮಾಡಿವೆ. ಹಾಗಾಗಿಯೇ ಈ ಚಿತ್ರಕ್ಕಾಗಿ ವಿಶ್ವದಾದ್ಯಂತ ನಿರೀಕ್ಷೆ ಹೆಚ್ಚಾಗಿದೆ. ಇದನ್ನೂ ಓದಿ: ಮೌಳಿಯ ರಂಗೀನ್ ಲೋಕದಲ್ಲಿ ಮಿಂದೆದ್ದ ಜನಸಾಗರ… ಒಂದೇ ವೇದಿಕೆಯಲ್ಲಿ ಸೌತ್ ಸ್ಟಾರ್ಸ್‍ಗಳ ಸಮಾಗಮ
ಇದೇ ಮೊದಲ ಬಾರಿಗೆ ಜೂನಿಯರ್ ಎನ್.ಟಿ.ಆರ್ ಮತ್ತು ರಾಮ್ ಚರಣ್ ತೇಜ ತೆರೆ ಹಂಚಿಕೊಂಡಿದ್ದಾರೆ. ಆಲಿಯಾ ಭಟ್ ಸೇರಿದಂತೆ ಹಲವು ತಾರೆಯರ ಬಳಗವೇ ಈ ಸಿನಿಮಾದಲ್ಲಿದೆ. ಎಂ.ಎಂ. ಕೀರವಾಣಿ ಸಂಗೀತ ಸಂಯೋಜನೆಯಲ್ಲಿ ಹಾಡುಗಳು ಮೂಡಿ ಬಂದಿದ್ದು, ಕನ್ನಡವೂ ಸೇರಿದಂತೆ ಹಲವು ಭಾಷೆಗಳಿಗೆ ಈ ಸಿನಿಮಾ ಡಬ್ ಆಗಿದೆ.