Connect with us

Crime

ದೇವಾಲಯದ ಬಳಿ ಮಹಿಳೆ ಶವ ಪತ್ತೆ: ನಿಧಿಗಾಗಿ ಕೊಲೆ ಶಂಕೆ

Published

on

Share this

ತುಮಕೂರು: ಬೆಟ್ಟದ ಮೇಲಿನ ದೇವಾಲಯವೊಂದರ ಬಳಿ ಮಹಿಳೆ ಶವ ಪತ್ತೆಯಾಗಿದ್ದು, ನಿಧಿಗಾಗಿ ಮಹಿಳೆಯನ್ನು ಕೊಲೆ ಮಾಡಲಾಗಿದೆ ಎಂಬ ಶಂಕೆ ತುಮಕೂರಿನಲ್ಲಿ ವ್ಯಕ್ತವಾಗಿದೆ. ಇದನ್ನೂ ಓದಿ:  ಉತ್ತರ ಪ್ರದೇಶದ ಜಿಲ್ಲಾ ಪಂಚಾಯತ್‍ಗಳಲ್ಲಿ ಬಿಜೆಪಿ ಚಾರಿತ್ರಿಕ ಗೆಲುವು- ನಳಿನ್ ಕುಮಾರ್ ಕಟೀಲ್

ಕಳೆದ 15 ದಿನಗಳ ಹಿಂದೆಯೇ ಬೆಟ್ಟದ ಮೇಲಿನ ದೇವಾಲಯದ ಬಳಿ ಮಹಿಳೆ ಕೊಲೆಯಾಗಿರಬಹುದು ಎಂದು ಶಂಕಿಸಲಾಗಿದೆ. ತುಮಕೂರು ತಾಲ್ಲೂಕಿನ ಜಕ್ಕೇನಹಳ್ಳಿ ಬಳಿಯ ಎಂ. ಗೊಲ್ಲಹಳ್ಳಿ ಗ್ರಾಮದ ಹೊರವಲಯದಲ್ಲಿರುವ ಬೆಟ್ಟದ ಮೇಲಿನ ಆಂಜನೇಯಸ್ವಾಮಿ ದೇವಾಲಯದ ಬಳಿ ಘಟನೆ ನಡೆದಿದೆ.

ಈ ದೇವಾಲಯದ ಒಳಭಾಗದಲ್ಲಿರುವ ಆಂಜನೇಯ ವಿಗ್ರಹದ ಮುಂಭಾಗದಲ್ಲಿ ನಿಧಿಗಾಗಿ ಅಗೆದು ಪೂಜೆ ಸಲ್ಲಿಸಿರುವ ದೃಶ್ಯ ಕಂಡು ಬಂದಿವೆ. ಕುರಿಗಾಹಿಗಳು ಕುರಿ ಮೇಯಿಸಲು ಹೋದ ಸಂದರ್ಭದಲ್ಲಿ ದುರ್ವಾಸನೆ ಬಂದಿದ್ದು, ದೇವಾಲಯದ ಅಕ್ಕಪಕ್ಕ ಹುಡುಕಾಡಿ ನೋಡಿದಾಗ ಮಹಿಳೆಯ ಕೂದಲು ಕಂಡು ಬಂದಿದ್ದು, ಮೃತದೇಹ ಸಂಪೂರ್ಣ ಗುರುತು ಸಿಗದಂತಾಗಿದೆ.

ತಕ್ಷಣ ಕುರಿಗಾಹಿಗಳು ದೇವಾಲಯದ ಬಳಿ ಶವ ಬಿದ್ದಿರುವ ವಿಷಯವನ್ನು ಗ್ರಾಮಸ್ಥರಿಗೆ ತಿಳಿಸಿದ್ದಾರೆ. ಗಾಬರಿಗೊಂಡ ಗ್ರಾಮಸ್ಥರು ಸ್ಥಳಕ್ಕೆ ಧಾವಿಸಿ ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ.ಈ ಸುದ್ದಿ ತಿಳಿದ ತುಮಕೂರು ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ ಶವವನ್ನು ಮರಣೋತ್ತಪ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರವಷ್ಟೆ ಈ ಮಹಿಳೆಯ ಸಾವಿನ ರಹಸ್ಯ ಬಹಿರಂಗಗೊಳ್ಳಬೇಕಿದೆ. ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದು ಶವ ಪರೀಕ್ಷೆಯ ನಂತರ ತಿಳಿಯಲಿದೆ.

Click to comment

Leave a Reply

Your email address will not be published. Required fields are marked *

Advertisement