ಬಾಸ್(Boss) ಚಲನಚಿತ್ರಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆ ಇಂದು ಕರ್ನಾಟಕ ಹೈಕೋರ್ಟ್‌ನಲ್ಲಿ(High Court) ನಡೆಯಿತು. ವಿಚಾರಣೆ ವೇಳೆ ಅರ್ಜಿದಾರರಾದ ದರ್ಶನ್ ಹಾಗೂ ವಿಜಯಲಕ್ಷ್ಮೀ ದರ್ಶನ್(Vijayalakhsami Darshan) ಅವರ ಪರ ವಕೀಲರು, ‘ಬಾಸ್’ ಚಲನಚಿತ್ರವನ್ನು ಬಿಡುಗಡೆ ಮಾಡುವ ಸಿದ್ಧತೆಗಳು ನಡೆಯುತ್ತಿವೆ ಎಂದು ನ್ಯಾಯಾಲಯದ ಗಮನಕ್ಕೆ ತಂದರು. ಪ್ರಕರಣದ ಅಂತಿಮ ನಿರ್ಣಯವಾಗುವವರೆಗೆ ಚಿತ್ರವನ್ನು ಬಿಡುಗಡೆ ಮಾಡದಂತೆ ಮಧ್ಯಂತರ ನಿರ್ದೇಶನ ನೀಡುವಂತೆ ಮನವಿ ಮಾಡಿದರು.
ಮನವಿಯನ್ನು ಪರಿಗಣಿಸಿದ ನ್ಯಾಯಾಲಯವು, ಪ್ರತಿವಾದಿಗಳಾದ ಸಿರಿ ಪ್ರೊಡಕ್ಷನ್ಸ್ ಹಾಗೂ ಚಿತ್ರದ ನಿರ್ದೇಶಕರಾದ ಲವಾ.ವಿ ಅವರಿಗೆ ನೋಟಿಸ್ ಜಾರಿ ಮಾಡಿದ್ದು, ಮುಂದಿನ ಎರಡು ದಿನಗಳ ಕಾಲ ‘ಬಾಸ್’ ಚಲನಚಿತ್ರವನ್ನು ಬಿಡುಗಡೆ ಮಾಡದಂತೆ ತಾತ್ಕಾಲಿಕ ಮೌಖಿಕ ನಿರ್ದೇಶನ ನೀಡಿದೆ.ಇದನ್ನೂ ಓದಿ: ವಂದಿತಾ ಜೊತೆ ಹೆಜ್ಜೆ ಹಾಕಿದ `ಲಕ್ಷ್ಮೀಪುತ್ರ’ ಚಿಕ್ಕಣ್ಣ
ನ್ಯಾಯಾಲಯವು ಈ ಪ್ರಕರಣವನ್ನು 25ರಂದು ಮುಂದಿನ ವಿಚಾರಣೆಗೆ ನಿಗದಿಪಡಿಸಿದ್ದು, ಆ ದಿನಗಳಲ್ಲಿ ಉಭಯ ಪಕ್ಷಗಳ ವಾದಗಳನ್ನು ಆಲಿಸಿ ಮುಂದಿನ ಆದೇಶವನ್ನು ಪ್ರಕಟಿಸುವ ಸಾಧ್ಯತೆಯಿದೆ. ಹೀಗಾಗಿ, ಹೈಕೋರ್ಟ್‌ನ ಮುಂದಿನ ಆದೇಶದವರೆಗೆ ‘ಬಾಸ್’ ಚಲನಚಿತ್ರದ ಬಿಡುಗಡೆಗೆ ತಾತ್ಕಾಲಿಕ ತಡೆ ಮುಂದುವರಿಯಲಿದೆ.ಇದನ್ನೂ ಓದಿ: ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಅಶ್ಲೀಲ ಕಾಮೆಂಟ್ ಪ್ರಕರಣ – ಮೂವರು ಆರೋಪಿಗಳ ಜಾಮೀನು ಅರ್ಜಿ ವಜಾ
