ಬೆಂಗಳೂರು/ಧಾರವಾಡ: ತಮ್ಮ ವಿರುದ್ಧ ದಾಖಲಾಗಿದ್ದ ಪೋಕ್ಸೋ ಪ್ರಕರಣದಲ್ಲಿ ಬಿ.ಎಸ್ ಯಡಿಯೂರಪ್ಪಗೆ (BS Yediyurappa) ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಯಡಿಯೂರಪ್ಪ ವಿರುದ್ಧ ಸದ್ಯ ಯಾವುದೇ ಕ್ರಮ ಕೈಗೊಳ್ಳದಂತೆ ಧಾರವಾಡ ಹೈಕೋರ್ಟ್ (Dharwad High Court) ಆದೇಶಿಸಿದೆ.
ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಆದೇಶ ನೀಡಿದ್ದು, ಬಂಧನ ಭೀತಿಯಿಂದ ಬಿಎಸ್‌ವೈ ಪಾರಾಗಿದ್ದಾರೆ. ಇದನ್ನೂ ಓದಿ: ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ತಿರಸ್ಕರಿಸಿದ ರಾಜ್ಯಪಾಲರು – ಸರ್ಕಾರಕ್ಕೆ ಬಹುದೊಡ್ಡ ಹಿನ್ನಡೆ
ತಮ್ಮ ವಿರುದ್ಧ ದಾಖಲಾಗಿದ್ದ ಪೋಕ್ಸೋ ಪ್ರಕರಣವನ್ನು (POCSO Case) ರದ್ದು ಮಾಡುವಂತೆ ಕೋರಿ ಯಡಿಯೂರಪ್ಪ ಅವರು ಕೋರ್ಟ್ ಮೆಟ್ಟಿಲೇರಿದ್ದರು. ಜನವರಿ 17ರಂದು ವಿಚಾರಣೆ ಪೂರ್ಣಗೊಳಿಸಿದ್ದ ಕೋರ್ಟ್ ಇಂದು ತೀರ್ಪು ಕಾಯ್ದಿರಿಸಿತ್ತು.
ಈ ವೇಳೆ ಕೇಸ್ ರದ್ದುಗೊಳಿಸಲು ನಿರಾಕರಿಸಿದ ಹೈಕೋರ್ಟ್ ಯಡಿಯೂರಪ್ಪ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವಂತಿಲ್ಲ ಎಂದು ಸೂಚಿಸಿದೆ. ಇದನ್ನೂ ಓದಿ: Aeroindia 2025 | ಏರ್ ಶೋ ಹಿನ್ನೆಲೆ ಬೆಂಗಳೂರಿನ 21 ಕೆರೆಗಳಲ್ಲಿ ಮೀನುಗಾರಿಕೆಗೆ ನಿಷೇಧ