ಬೆಂಗಳೂರು: ಆಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರಿಗೆ ಬಿಗ್ ರಿಲೀಫ್ ಸಿಕ್ಕಿದ ಬೆನ್ನಲ್ಲೆ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅವರಿಗೂ ತಾತ್ಕಾಲಿಕವಾಗಿ ರಿಲೀಫ್ ಸಿಕ್ಕಿದೆ.
ಜಾರಿ ನಿರ್ದೇಶನಾಲಯ ಸಮನ್ಸ್ ರದ್ದು ಕೋರಿ ಡಿ.ಕೆ. ಶಿವಕುಮಾರ್ ಹೈಕೋರ್ಟ್ ಮೊರೆ ಹೋಗಿದ್ದರು. ಕೋರ್ಟ್ ನಲ್ಲಿ ಅವರ ಪರ ವಕೀಲ ಕಪಿಲ್ ಸಿಬಲ್ ವಾದ ಮಂಡಿಸಿ ವಿಚಾರಣೆಗೆ ಹಾಜರಾಗಲು ಇನ್ನು ಹೆಚ್ಚು ಕಾಲಾವಕಾಶ ಕೇಳಿದ್ದರು. ಈ ಹಿನ್ನೆಲೆಯಲ್ಲಿ ಮಾರ್ಚ್ 7ಕ್ಕೆ ವಿಚಾರಣೆ ಮುಂದೂಡಿ ಕೋರ್ಟ್ ಆದೇಶ ನೀಡಿದೆ. ಇದನ್ನೂ ಓದಿ: ಆಪರೇಷನ್ ಆಡಿಯೋ ಕೇಸ್: ಬಿ.ಎಸ್.ವೈಗೆ ರಿಲೀಫ್
ಇಡಿ ಸಮನ್ಸ್ ರದ್ದು ಕೋರಿ ಹೈಕೋರ್ಟ್ ಗೆ ಡಿ.ಕೆ.ಶಿವಕುಮಾರ್ ಬಂಧಿಸದಂತೆ ಕೋರ್ಟ್ ಗೆ ಮನವಿ ಸಲ್ಲಿಸಿದ್ದರು. ವಿಚಾರಣೆಗೆ ಹೊಸ ದಿನಾಂಕವನ್ನು ನೀಡುವಂತೆಯೂ ವಕೀಲ ಕಪಿಲ್ ಸಿಬಲ್ ಮನವಿ ಮಾಡಿಕೊಂಡಿದ್ದರು. ಒಂದು ವೇಳೆ ಇಡಿ ಏನಾದರೂ ವಿಚಾರಣೆಗೆ ಹಾಜರಾಗಲೇಬೇಕೆಂದು ಬಲವಂತ ಮಾಡಿದ್ದರೆ ಕೋರ್ಟ್ ಗೆ ಅರ್ಜಿ ಹಾಕಲು ಶಿವಕುಮಾರ್ ಪರ ವಕೀಲರಿಗೆ ಸೂಚನೆ ನೀಡಲಾಗಿತ್ತು. ಆದರೆ ಕೋರ್ಟ್ ವಿಚಾರಣೆಯನ್ನು ಮಾರ್ಚ್ 7ಕ್ಕೆ ಮುಂದೂಡಿದೆ. ಈ ಮೂಲಕ ಡಿಕೆಶಿಗೆ ತಾತ್ಕಾಲಿಕವಾಗಿ ರಿಲೀಫ್ ಸಿಕ್ಕಿದಂತಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv