ಬೆಂಗಳೂರು: ಇಂದು ಮತ್ತೆ 10 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 207ಕ್ಕೆ ಏರಿಕೆಯಾಗಿದೆ. ಗುರುವಾರ ಒಟ್ಟು 16 ಮಂದಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 200ರ ಗಡಿ ದಾಟಿದೆ.
ಮೈಸೂರು 5, ಬೆಂಗಳೂರು 2, ಬೆಂಗಳೂರು 2 ಮತ್ತು ಕಲಬುರಗಿಯಲ್ಲಿ 1 ಕೊರೊನಾ ಪ್ರಕರಣ ಪತ್ತೆಯಾಗಿದೆ. ಮೈಸೂರಿನಲ್ಲಿ ತಂದೆಯಿಂದ 8 ವರ್ಷದ ಬಾಲಕನಿಗೆ ಕೊರೊನಾ ಸೋಂಕು ತಗುಲಿದೆ. ಬೆಂಗಳೂರು ಗ್ರಾಮಾಂತರದ 11 ವರ್ಷದ ಬಾಲಕಿಗೂ ಕೊರೊನಾ ತಗುಲಿದೆ. ಈಕೆ ರೋಗಿ ನಂಬರ್ 206ರ ಪುತ್ರಿಯಾಗಿದ್ದಾಳೆ. ಗುರುವಾರ ಬಾಗಲಕೋಟೆಯ ಮೂರು ಮಕ್ಕಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು.
Advertisement
10 new positive cases reported in Karnataka. Till now, there are 207 positive cases including 30 discharges and 6 deaths. #CoronaVirus #karnatakalockdown pic.twitter.com/fHqPm3C910
— PublicTV (@publictvnews) April 10, 2020
Advertisement
1. ರೋಗಿ ನಂಬರ್ 198: 48 ವರ್ಷದ ಪುರುಷನಾಗಿದ್ದು, ರೋಗಿ ನಂಬರ್ 167 ಮತ್ತು 168ರ ಜೊತೆ ಸಂಪರ್ಕದಲ್ಲಿದ್ದರು. ಬೆಂಗಳೂರಿನ ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಿ ಚಿಕಿತ್ಸೆ ನೀಡಲಾಗುತ್ತಿದೆ.
2. ರೋಗಿ ನಂಬರ್ 199: 57 ವರ್ಷದ ಪುರುಷನಾಗಿದ್ದು, ರೋಗಿ ನಂಬರ್ 167 ಮತ್ತು 168ರ ಜೊತೆ ಸಂಪರ್ಕದಲ್ಲಿದ್ದರು. ಬೆಂಗಳೂರಿನ ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಿ ಚಿಕಿತ್ಸೆ ನೀಡಲಾಗುತ್ತಿದೆ.
3. ರೋಗಿ ನಂಬರ್ 200: 8 ವರ್ಷದ ಬಾಲಕನಾಗಿದ್ದು, ರೋಗಿ ನಂಬರ್ 159 ಮತ್ತು 103(ತಂದೆ) ಸಂಪರ್ಕದಲ್ಲಿದ್ದನು. ಮೈಸೂರಿನ ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಿಚಿಕಿತ್ಸೆ ನೀಡಲಾಗುತ್ತಿದೆ.
4. ರೋಗಿ ನಂಬರ್ 201: 48 ವರ್ಷದ ಮಹಿಳೆಯಾಗಿದ್ದು, ರೋಗಿ ನಂಬರ್ 103(ಅತ್ತೆ) ಜೊತೆ ಸಂಪರ್ಕದಲ್ಲಿದ್ದರು. ಮೈಸೂರಿನ ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಿ ಚಿಕಿತ್ಸೆ ನೀಡಲಾಗುತ್ತಿದೆ.
5. ರೋಗಿ ನಂಬರ್ 202: 33 ವರ್ಷದ ಪುರುಷನಾಗಿದ್ದು, ರೋಗಿ ನಂಬರ್ 111ರ ಜೊತೆ ಸಂಪರ್ಕದಲ್ಲಿದ್ದರು. ಮೈಸೂರಿನ ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಿ ಚಿಕಿತ್ಸೆ ನೀಡಲಾಗುತ್ತಿದೆ.
Advertisement
ಕರ್ನಾಟಕದಲ್ಲಿ ನಿನ್ನೆಯಿಂದ ಇಂದು ಮಧ್ಯಾಹ್ನದವರೆಗೆ 10 ಹೊಸ #Covid19 ಪ್ರಕರಣಗಳು ಖಚಿತವಾಗಿತದ್ದು, ಒಟ್ಟಾರೆ ಸೊಂಕಿತರ ಸಂಖ್ಯೆ 207ಕ್ಕೆ ಏರಿದೆ. #IndiaFightsCornona pic.twitter.com/mnwU4cCKnO
— B Sriramulu (@sriramulubjp) April 10, 2020
Advertisement
6. ರೋಗಿ ನಂಬರ್ 203: 28 ವರ್ಷದ ಮಹಿಳೆಯಾಗಿದ್ದು, ಮೈಸೂರು ನಿವಾಸಿಯಾಗಿದ್ದಾರೆ. ಇವರು ರೋಗಿ ನಂಬರ್ 85ರ ಪತ್ನಿ. ಸದ್ಯಕ್ಕೆ ಮೈಸೂರಿನ ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಿ ಚಿಕಿತ್ಸೆ ನೀಡಲಾಗುತ್ತಿದೆ.
7. ರೋಗಿ ನಂಬರ್ 204: 48 ವರ್ಷದ ಮಹಿಳೆ, ಮೈಸೂರು ನಿವಾಸಿ, ರೋಗಿ ನಂಬರ್ 183 ರ ಪತ್ನಿ. ಮೈಸೂರಿನ ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಿ ಚಿಕಿತ್ಸೆ ನೀಡಲಾಗುತ್ತಿದೆ.
8. ರೋಗಿ ನಂಬರ್ 205: 55 ವರ್ಷದ ವ್ಯಕ್ತಿಯಾಗಿದ್ದು, ಕಲಬುರಗಿ ನಿವಾಸಿ, ದೆಹಲಿಯಿಂದ ಬಂದಿದ್ದ ನೆಗೆಟಿವ್ ವರದಿ ಬಂದಿದ್ದ ವ್ಯಕ್ತಿಯ ಜೊತೆ ಸಂಪರ್ಕದಲ್ಲಿದ್ದರು. ಕಲಬುರಗಿಯ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.
9. ರೋಗಿ ನಂಬರ್ 206 : 35 ವರ್ಷದ ವ್ಯಕ್ತಿಯಾಗಿದ್ದು, ಬೆಂಗಳೂರು ನಿವಾಸಿ, ರೋಗಿ ನಂಬರ್ 169ರ ಸಹೋದರನಾಗಿದ್ದು, ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
10. ರೋಗಿ ನಂಬರ್ 207: 11 ವರ್ಷದ ಬಾಲಕಿಯಾಗಿದ್ದು, ಬೆಂಗಳೂರು ನಿವಾಸಿ, ರೋಗಿ ನಂಬರ್ 206ರ ಮಗಳಾಗಿದ್ದಾಳೆ. ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಗುರುವಾರ ಬಾಗಲಕೋಟೆಯ ಮೂರು ಮಕ್ಕಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಆತಂಕಕ್ಕೆ ಕಾರಣವಾಗಿತ್ತು. ಕೊರೊನಾ ತಡೆಗಾಗಿ ಸರ್ಕಾರ ಸಹ ಸೀಲ್‍ಡೌನ್ ಗೆ ಮುಂದಾಗುತ್ತಿದ್ದು, ಸೋಂಕಿತ ಪ್ರದೇಶಗಳ ರಸ್ತೆಗಳನ್ನು ಬ್ಯಾರಿಕೇಡ್ ಮೂಲಕ ಬಂದ್ ಮಾಡಲಾಗುತ್ತಿದೆ.