– 10,000 ಹೊಲಿಗೆ ಮಷಿನ್ 17,000 ರೂ. ನಿಗದಿ ಆರೋಪ
– ಕಾಂಗ್ರೆಸ್ ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರಕ್ಕೆ ನಿದರ್ಶನ ಎಂದ ಅಶೋಕ್
ಬೆಂಗಳೂರು: ವಾಲ್ಮೀಕಿ ನಿಗಮದ ಬಳಿಕ ಇದೀಗ ರಾಜ್ಯದ ಮತ್ತೊಂದು ನಿಗಮದ ವಿರುದ್ಧ ಭಾರೀ ಭ್ರಷ್ಟಾಚಾರ ಆರೋಪ ಕೇಳಿಬಂದಿದೆ. ದೇವರಾಜ ಅರಸು ನಿಗಮದಲ್ಲಿ (Devaraja Urs Development Corporation) ಭಾರೀ ಗೋಲ್ಮಾಲ್ ನಡೆದಿರುವುದಾಗಿ ವ್ಯಕ್ತಿಯೊಬ್ಬರು ದೂರು ನೀಡಿದ್ದಾರೆ.
ಹೊಲಿಗೆ ಯಂತ್ರ ಖರೀದಿ ಟೆಂಡರ್‌ನಲ್ಲಿ (Tender) ಕಿಕ್‌ಬ್ಯಾಕ್ ಪಡೆದಿರುವ ಆರೋಪ ಕೇಳಿಬಂದಿದೆ. ರಾಜ್ಯದ ವ್ಯಕ್ತಿಯೊಬ್ಬರಿಗೆ ನೀಡಿದ ಟೆಂಡರ್‌ನಲ್ಲಿ ಅಕ್ರಮ ಆಗಿದೆ ಎನ್ನಲಾಗ್ತಿದೆ. ಇದನ್ನೂ ಓದಿ: ಪಿಡಿಒ ಕಿರುಕುಳ ಆರೋಪ – ಡೆತ್ ನೋಟ್ ಬರೆದಿಟ್ಟು ಬಿಲ್ ಕಲೆಕ್ಟರ್ ಆತ್ಮಹತ್ಯೆ
ವಾಲ್ಮೀಕಿ ನಿಗಮದ ಬಳಿಕ ಇದೀಗ ದೇವರಾಜ ಅರಸು ನಿಗಮದಲ್ಲೂ ಕೇಳಿಬರುತ್ತಿರುವ ಅಕ್ರಮದ ಆರೋಪಗಳು ರಾಜ್ಯ ಕಾಂಗ್ರೆಸ್ ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರಕ್ಕೆ ಮತ್ತೊಂದು ನಿದರ್ಶನವಾಗಿದೆ.
ಹಿಂದುಳಿದ ಸಮುದಾಯಗಳ ಕಲ್ಯಾಣಕ್ಕಾಗಿ ಬಡ ಮಹಿಳೆಯರಿಗೆ ತಲುಪಬೇಕಿದ್ದ ಹೊಲಿಗೆ ಯಂತ್ರ ಖರೀದಿಯ ಮೇಲೆಯೂ ಭ್ರಷ್ಟಾಚಾರದ ಆರೋಪಗಳು ಕೇಳಿಬರುತ್ತಿರುವುದು ಅತ್ಯಂತ… pic.twitter.com/b54FAzNeuQ
— R. Ashoka (@RAshokaBJP) July 7, 2026
10,000 ರೂ. ಮೌಲ್ಯದ ಹೊಲಿಗೆ ಮಿಷಿನ್‌ಗೆ 17,000 ರೂ. ನಿಗದಿ ಪಡಿಸಲಾಗಿದೆ. ಟೆಂಡರ್ ಪ್ರಕ್ರಿಯೆ ಪಾರದರ್ಶಕವಾಗಿ ನಡೆದಿಲ್ಲ. ಸುಮಾರು 5-6 ಕೋಟಿ ರೂ. ಹಗರಣ ಆಗಿದೆ ಎಂದು ಪರಮೇಶ್ ಎಂಬುವವರು ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ದೂರು ನೀಡಿದ್ದು, ತನಿಖೆಗೆ ಆಗ್ರಹಿಸಿದ್ದಾರೆ.
ಇನ್ನೂ ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ವಿಪಕ್ಷ ನಾಯಕ ಆರ್. ಅಶೋಕ್ (R Ashok), ವಾಲ್ಮೀಕಿ ನಿಗಮದ ಬಳಿಕ ಇದೀಗ ದೇವರಾಜ ಅರಸು ನಿಗಮದಲ್ಲೂ ಕೇಳಿಬರುತ್ತಿರುವ ಅಕ್ರಮದ ಆರೋಪಗಳು ರಾಜ್ಯ ಕಾಂಗ್ರೆಸ್ ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರಕ್ಕೆ ಮತ್ತೊಂದು ನಿದರ್ಶನವಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಪಶ್ಚಿಮ ಘಟ್ಟದಲ್ಲಿ ಮಳೆಯಬ್ಬರ – 4 ದಿನಗಳಿಂದ ಖಾನಾಪುರದ 25 ಕಾಡಂಚಿನ ಗ್ರಾಮಗಳಿಗಿಲ್ಲ ವಿದ್ಯುತ್ ಸಂಪರ್ಕ
ಹಿಂದುಳಿದ ಸಮುದಾಯಗಳ ಕಲ್ಯಾಣಕ್ಕಾಗಿ ಬಡ ಮಹಿಳೆಯರಿಗೆ ತಲುಪಬೇಕಿದ್ದ ಹೊಲಿಗೆ ಯಂತ್ರ ಖರೀದಿಯ ಮೇಲೆಯೂ ಭ್ರಷ್ಟಾಚಾರದ ಆರೋಪಗಳು ಕೇಳಿಬರುತ್ತಿರುವುದು ಅತ್ಯಂತ ಖಂಡನೀಯ. ಜನರ ಕಲ್ಯಾಣಕ್ಕಾಗಿ ರೂಪಿಸಲಾದ ಯೋಜನೆಗಳಲ್ಲೇ ಗೋಲ್ ಮಾಲ್ ನಡೆದಿರುವ ಆರೋಪಗಳಿಗೆ ರಾಜ್ಯ ಸರ್ಕಾರ ಉತ್ತರಿಸಲೇಬೇಕು. ಸತ್ಯಾಂಶವನ್ನು ಬಹಿರಂಗಪಡಿಸಿ, ತಪ್ಪಿತಸ್ಥರ ವಿರುದ್ಧ ನಿಷ್ಪಕ್ಷಪಾತ ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

