Bengaluru | ಸುರಂಗ ಮಾರ್ಗಕ್ಕೆ ಶೀಘ್ರದಲ್ಲೇ ಟೆಂಡರ್: ಡಿಕೆಶಿ

Public TV
1 Min Read
DK Shivakumar 6

ಬೆಂಗಳೂರು: ಸಚಿವ ಸಂಪುಟ ಸಭೆಯಲ್ಲಿ ಬೆಂಗಳೂರಿನ ಎರಡು ಹಂತದ ಸುರಂಗ ರಸ್ತೆ (Tunnel Road) ನಿರ್ಮಾಣಕ್ಕೆ ಅನುಮೋದನೆ ದೊರೆತಿದ್ದು, ಮೊದಲ ಹಂತದ ಯೋಜನೆಗೆ ಶೀಘ್ರವೇ ಟೆಂಡರ್ ಕರೆಯಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ತಿಳಿಸಿದರು.

ಬೆಂಗಳೂರಲ್ಲಿ ಸುರಂಗ ರಸ್ತೆ ನಿರ್ಮಾಣ ಹಾಗೂ ಮಂಡ್ಯದ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ನಡೆಸುವ ಸಂಬಂಧ ಡಿಸಿಎಂ ಡಿಕೆ ಶಿವಕುಮಾರ್ ಅವರು ವಿಧಾನಸೌಧದಲ್ಲಿ ಸಭೆ ನಡೆಸಿದ ನಂತರ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದರು. ಬೆಂಗಳೂರಿನ ಸುರಂಗ ರಸ್ತೆಯ ಪ್ರವೇಶ ಹಾಗೂ ನಿರ್ಗಮನದ ಭಾಗದಲ್ಲಿ ಸಂಚಾರ ದಟ್ಟಣೆ ಆಗಬಾರದು ಎಂಬ ಉದ್ದೇಶದಿಂದ ಈ ಯೋಜನೆಗೆ ಟೆಂಡರ್ ಕರೆಯುವ ಮುನ್ನ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಅಧಿಕಾರಿಗಳು, ಪೊಲೀಸ್ ಇಲಾಖೆಯ ಡಿಜಿಪಿ, ಐಜಿಪಿ ಮತ್ತು ಸಂಚಾರಿ ಪೊಲೀಸ್ ಇಲಾಖೆ ಅಧಿಕಾರಿಗಳ ಜತೆ ಸಭೆ ನಡೆಸಲಾಗಿದೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಯಾದಗಿರಿ ಕಾಂಗ್ರೆಸ್ ಕಚೇರಿಗೆ ಬೆಂಕಿಯಿಟ್ಟ ಕಿಡಿಗೇಡಿಗಳು – ಸೋಫಾ, ಎಸಿ ಎಲ್ಲವೂ ಭಸ್ಮ

DK Shivakumar Tunnel Road

ವಿಧಾನಸೌಧದ ಒಂದು ಕಿ.ಮೀ ಸುತ್ತಮುತ್ತ ಎಲ್ಲೂ ನಿರ್ಗಮನಕ್ಕೆ ಅವಕಾಶ ಕಲ್ಪಿಸುವುದಿಲ್ಲ. ಇಲ್ಲಿ ಟ್ರಾಫಿಕ್ ಜಾಮ್ ಆದರೆ ಎಲ್ಲಾಕಡೆ ಆಗುತ್ತದೆ. ಹೀಗಾಗಿ ಇದನ್ನು ಪರಿಶೀಲಿಸಲು ಪೊಲೀಸ್ ಅಧಿಕಾರಿಗಳಿಗೆ ತಿಳಿಸಿದ್ದೇನೆ. ನಾನು, ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಜಿಬಿಎ ಮುಖ್ಯ ಆಡಳಿತಾಧಿಕಾರಿಗಳು ಈ ಸಭೆ ಮಾಡಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: Davanagere | ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಬಸ್ ಪಲ್ಟಿ – 40ಕ್ಕೂ ಹೆಚ್ಚು ಮಂದಿಗೆ ಗಾಯ

ಇನ್ನು ಬೆಂಗಳೂರಿನಲ್ಲಿ 114 ಕಿ.ಮೀ ಎಲಿವೆಟೆಡ್ ಕಾರಿಡಾರ್ ನಿರ್ಮಾಣಕ್ಕೆ ತೀರ್ಮಾನ ಮಾಡಿದ್ದು, ಈ ಯೋಜನೆ ಸಂಬಂಧ ಸಂಚಾರ ಪೊಲೀಸ್ ಅಧಿಕಾರಿಗಳ ಅಭಿಪ್ರಾಯ ಪಡೆಯಲಾಗಿದೆ ಎಂದರು. ಇದನ್ನೂ ಓದಿ: ಚಾ.ನಗರ| ಈ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ, ಜೂಜಾಟವಾಡಿದ್ರೆ 50,000 ದಂಡ – ಮಾಹಿತಿ ಕೊಟ್ಟವರಿಗೆ 10,000 ಬಹುಮಾನ

Share This Article