Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಟೆಂಡರ್‌ ಶ್ಯೂರ್‌ ಕಾಮಗಾರಿಯಲ್ಲಿ ಭಾರೀ ಅಕ್ರಮ – ಸಿದ್ದು ವಿರುದ್ಧ ಸಾಕ್ಷ್ಯಗಳೊಂದಿಗೆ ಲೋಕಾಗೆ ಬಿಜೆಪಿ ದೂರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಟೆಂಡರ್‌ ಶ್ಯೂರ್‌ ಕಾಮಗಾರಿಯಲ್ಲಿ ಭಾರೀ ಅಕ್ರಮ – ಸಿದ್ದು ವಿರುದ್ಧ ಸಾಕ್ಷ್ಯಗಳೊಂದಿಗೆ ಲೋಕಾಗೆ ಬಿಜೆಪಿ ದೂರು

Bengaluru City

ಟೆಂಡರ್‌ ಶ್ಯೂರ್‌ ಕಾಮಗಾರಿಯಲ್ಲಿ ಭಾರೀ ಅಕ್ರಮ – ಸಿದ್ದು ವಿರುದ್ಧ ಸಾಕ್ಷ್ಯಗಳೊಂದಿಗೆ ಲೋಕಾಗೆ ಬಿಜೆಪಿ ದೂರು

Public TV
Last updated: January 23, 2023 7:46 pm
Public TV
Share
3 Min Read
Chalavadi Narayanaswamy
SHARE

– ದಾಖಲೆಯೊಂದಿಗೆ ನಮ್ಮ ಸರ್ಕಾರದ ವಿರುದ್ಧ ದೂರು ನೀಡಿ
– ಕಾಂಗ್ರೆಸ್‌ ನಾಯಕರಿಗೆ ಚಲವಾದಿ ನಾರಾಯಣ ಸ್ವಾಮಿ ಸವಾಲ್‌

ಬೆಂಗಳೂರು: ಕಾಂಗ್ರೆಸ್ ಅವಧಿಯ ಟೆಂಡರ್ ಶ್ಯೂರ್ (Tendersure ) ಕಮೀಷನ್ ಆರೋಪದ ವಿರುದ್ಧ ಇಂದು ಲೋಕಾಯುಕ್ತಕ್ಕೆ (Lokayukta) ಬಿಜೆಪಿಯಿಂದ ದೂರು ಸಲ್ಲಿಸಲಾಗಿದೆ. ಬಿಜೆಪಿ ಪರಿಷತ್ ಸದಸ್ಯ ಚಲವಾದಿ ನಾರಾಯಣ ಸ್ವಾಮಿ (Chalavadi Narayanaswamy) ನೇತೃತ್ವದ ನಿಯೋಗ ಲೋಕಾಯುಕ್ತದಲ್ಲಿ ದೂರು ನೀಡಿದೆ.

ದೂರು ಸಲ್ಲಿಕೆ ಬಳಿಕ ಮಾತಾಡಿದ ಚಲವಾದಿ ನಾರಾಯಣ ಸ್ವಾಮಿ, ಕಾಂಗ್ರೆಸ್ (Congress) ಪಕ್ಷದವರು ಬಿಜೆಪಿ ಸರಕಾರದ ವಿರುದ್ಧ ಶೇ.40 ಕಮಿಷನ್‍ನ ಯಾವುದೇ ದಾಖಲೆಗಳಿಲ್ಲದೆ ಪೋಸ್ಟರ್ ಮಾಡಿ, ಚುನಾವಣೆ ಸಂದರ್ಭದಲ್ಲಿ ಅಪಪ್ರಚಾರ ಮಾಡಲು ಹೊರಟಿದ್ದಾರೆ. ಅದನ್ನು ಗಮನಿಸಿ ಬಿಜೆಪಿ ವತಿಯಿಂದ ನಾವು ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಮತ್ತು ಕಾಂಗ್ರೆಸ್ ವಿರುದ್ಧವಾಗಿ ಲೋಕಾಯುಕ್ತದಲ್ಲಿ ಇವತ್ತು ದೂರು ದಾಖಲಿಸಿದ್ದೇವೆ ಎಂದು ತಿಳಿಸಿದರು.

Siddaramaiah 1 3

ನಮ್ಮ ದೂರಿಗೆ ಪುರಾವೆ ಇದೆ. ಅವರ ಆಪಾದನೆಗೆ ಪುರಾವೆ ಇಲ್ಲ. ನಮ್ಮ ಮೇಲೆ ದಾಖಲೆ ಇಲ್ಲದೆ ಅಪಪ್ರಚಾರ ಮಾಡಿದ್ದಾರೆ. ಇವತ್ತಿಗೂ ದಾಖಲೆ ಕೊಡಲು ಅವರಿಗೆ ಸಾಧ್ಯವಾಗಿಲ್ಲ. ಈ ದೂರನ್ನು ಮಾನ್ಯ ಲೋಕಾಯುಕ್ತರು ಅಂಗೀಕರಿಸಿದ್ದಾರೆ. ಏನಾದರೂ ಹೆಚ್ಚಿನ ದಾಖಲೆ ಬೇಕಿದ್ದರೆ ದೂರವಾಣಿ ಕರೆ ಮಾಡಿ ಕರೆಸಿಕೊಂಡು ಪಡೆದುಕೊಳ್ಳುವುದಾಗಿ ತಿಳಿಸಿದ್ದಾರೆ. ದಾಖಲೆ ಸಾಕಿದ್ದರೆ ನೇರವಾಗಿ ಸಿದ್ದರಾಮಯ್ಯರಿಗೆ ನೋಟಿಸ್ ಜಾರಿ ಮಾಡುವುದಾಗಿ ಹೇಳಿದ್ದಾರೆ ಎಂದು ವಿವರಿಸಿದರು.

ದೂರಿನ ಜೊತೆಗೆ 2013-14ರಲ್ಲಿನಡೆದ ಟೆಂಡರ್ ಶ್ಯೂರ್‌ಗೆ ಸಂಬಂಧಿಸಿದ ಹಲವು ಕಾಮಗಾರಿಗಳಲ್ಲಿ ಟೆಂಡರ್ ಇಟ್ಟಿದ್ದ ಹಣಕ್ಕಿಂತ ಶೇ.53.86 ಹೆಚ್ಚುವರಿ ಹಣ ಬಿಡುಗಡೆ ಮಾಡಿದ 10-12 ದಾಖಲೆಗಳನ್ನು ಕೊಟ್ಟಿದ್ದೇವೆ. ನಮ್ಮ ಕಾಲದಲ್ಲಿ ಅಂಥದ್ದು ನಡೆದಿಲ್ಲ. ಇವತ್ತಿನವರೆಗೆ ಕಾಂಗ್ರೆಸ್ಸಿನವರು ತಮ್ಮ ಆಪಾದನೆಗೆ ಯಾವುದೇ ದಾಖಲೆ ನೀಡಿಲ್ಲ. ಬೀದಿಯಲ್ಲಿ ಅವರು ಆರೋಪಿಸುತ್ತಾರೆ. ಇದೇ ಕಾರಣಕ್ಕೆ ಒಂದೇ ಒಂದು ದೂರು ಕೊಡಲು ಅವರಿಗೆ ಸಾಧ್ಯವಾಗಿಲ್ಲ ಎಂದರು. ಇದನ್ನೂ ಓದಿ: ಸಿದ್ದರಾಮಯ್ಯರ ಆಡಳಿತಾವಧಿಯಲ್ಲಿ 35 ಸಾವಿರ ಕೋಟಿ ರೂ. ಅವ್ಯವಹಾರ: ಸುಧಾಕರ್

ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಲ್ಲಿ ನಿಜವಾಗಿಯೂ ತಾಕತ್ತಿದ್ದರೆ ತಮ್ಮ ಆಪಾದನೆಯನ್ನು ಸಾಬೀತುಪಡಿಸಲು ಸಾಕ್ಷ್ಯ ಇದ್ದರೆ ತಂದು ಕೊಡಲಿ. ದಾಖಲೆ ಕೊಡದಿದ್ದರೆ ನಿಮ್ಮ ಮುಖಕ್ಕೆ ಜನರೇ ಮಂಗಳಾರತಿ ಮಾಡುತ್ತಾರೆ. ಬೀದಿಯಲ್ಲಿ ಆಪಾದನೆ ಮಾಡುವುದಲ್ಲ. ತಾಕತ್ತಿದ್ದರೆ ಲೋಕಾಯುಕ್ತಕ್ಕೆ ಬನ್ನಿ ಎಂದು ಸವಾಲು ಎಸೆದರು.

Karnataka Lokayukta

 

ಸಿದ್ದರಾಮಯ್ಯ ವಿರುದ್ಧ 65 ಕೇಸುಗಳಿದ್ದವು. ಈ ಕಾರಣಕ್ಕೆ ಲೋಕಾಯುಕ್ತವನ್ನೇ ಮುಚ್ಚಿ ಬಿಟ್ಟರು. 10 ಕೇಸುಗಳನ್ನು ಎಸಿಬಿಗೆ ಕೊಟ್ಟು ಖುಲಾಸೆ ಮಾಡಿಸಿಕೊಂಡರು. ಇನ್ನೂ 50 ಕೇಸುಗಳಿವೆ. ಅವುಗಳ ತನಿಖೆ ಮಾಡಬೇಕೆಂದು ಮನವಿ ಮಾಡಲಾಗಿದೆ. ಆಲಿಬಾಬಾ 40 ಕಳ್ಳರ ಮಾದರಿಯಲ್ಲಿ ಸಿದ್ದರಾಮಯ್ಯರ ಸರ್ಕಾರವು ಸಿದ್ದರಾಮಯ್ಯ ಮತ್ತು 40 ಕಳ್ಳರ ಸರ್ಕಾರವಾಗಿತ್ತು.ಅಂಥವರು ಈಗ ಗಾಳಿಯಲ್ಲಿ ಗುಂಡು ಹಾರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ಸಿದ್ದರಾಮಯ್ಯ ಚಾಮುಂಡೇಶ್ವರಿಯಲ್ಲಿ ಯಾಕೆ ಸೋತರು? ಕರ್ನಾಟಕದಲ್ಲಿ 120ರಷ್ಟಿದ್ದ ಸ್ಥಾನ 80ಕ್ಕೆ ಯಾಕೆ ಬಂತು ಎಂದು ಪ್ರಶ್ನಿಸಿದ ಅವರು, ಸಿದ್ದರಾಮಯ್ಯ ಅವಧಿಯ ಕರ್ಮಕಾಂಡಗಳನ್ನು ಸಹಿಸಲಾರದೇ ಜನರು ಮನೆಗೆ ಕಳುಹಿಸಿದ್ದಾರೆ. 5 ವರ್ಷದಲ್ಲಿ ಜನರು ಎಲ್ಲ ಮರೆತಿದ್ದಾರೆ ಎಂದು ಭಾವಿಸಿ ನಮ್ಮ ಮೇಲೆ ಆಪಾದನೆ ಮಾಡುತ್ತಿದ್ದಾರೆ. ಸಿದ್ದರಾಮಯ್ಯರಿಗೆ ಮಾನ, ಮರ್ಯಾದೆ ಇದ್ದರೆ ಬಂದು ಇದನ್ನು ಎದುರಿಸಲಿ. ನೇರವಾಗಿ ದಾಖಲೆಗಳನ್ನು ಕೋರ್ಟಿಗಾದರೂ ನೀಡಲಿ ಎಂದು ಸವಾಲು ಹಾಕಿದರು.

ಕಾಂಗ್ರೆಸ್‌ನವರು ನಮ್ಮ ಮೇಲೆ ಬೆಂಗಳೂರು ನಗರದ ವಿಚಾರವಾಗಿ ಆರೋಪಿಸಿದ್ದಾರೆ. ನಾವು ಹೊರಗಡೆ ನಡೆದ ಕಾಂಗ್ರೆಸ್ ಭ್ರಷ್ಟಾಚಾರದ ಮಾಹಿತಿಯನ್ನೂ ಲೋಕಾಯುಕ್ತಕ್ಕೆ ಕೊಡಲಿದ್ದೇವೆ. ಬಾಕಿ ಇರುವ 50 ಕೇಸುಗಳ ಮರುತನಿಖೆಗೆ ನಡೆದರೆ ಇವರ ಕಳ್ಳತನ ಹೊರಗೆ ಬರಲಿದೆ. ಈ ಕಳ್ಳ ಖರೀಮರು ಹೊರಗೆ ಬರಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಕಾನೂನು ಪ್ರಕೋಷ್ಠದ ರಾಜ್ಯ ಸಂಚಾಲಕ ಯೋಗೇಂದ್ರ ಹೂಡಘಟ್ಟ ಅವರು ಈ ಸಂದರ್ಭದಲ್ಲಿ ಹಾಜರಿದ್ದರು.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:congresscorruptionlokayuktaroadsiddaramaiahTendersureಕಾಂಗ್ರೆಸ್ಭ್ರಷ್ಟಾಚಾರಲೋಕಾಯುಕ್ತಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories
Rajath Kishan
ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR
Bengaluru City Cinema Districts Karnataka Latest Sandalwood Top Stories
colors kannada New serial rani
ರಾಣಿ – ಅಮ್ಮ ಮಗಳ ಭಾವುಕ ಪಯಣ..!
Cinema Latest Sandalwood Top Stories
Vijay trisha
ಡಿವೋರ್ಸ್ ಕೇಸ್ ಮಧ್ಯೆ ಒಂದೇ ಬಣ್ಣದ ಉಡುಗೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡ ವಿಜಯ್-ತ್ರಿಶಾ
Cinema Latest National Top Stories

You Might Also Like

Mamata Bbanerjee and Droupadi Murmu
Latest

ಅಂತಾರಾಷ್ಟ್ರೀಯ ಆದಿವಾಸಿ ಸಮಾವೇಶಕ್ಕೆ ಅನುಮತಿ ವಿಳಂಬ – ಮಮತಾ ಬ್ಯಾನರ್ಜಿ ವಿರುದ್ಧ ಮುರ್ಮು ಗರಂ

Public TV
By Public TV
54 minutes ago
TVK Vijay and sangeeta
Latest

ದಳಪತಿ ವಿಜಯ್‌ಗೆ ದಿನಕ್ಕೊಂದು ಶಾಕ್ – ವಸತಿ ರಕ್ಷಣೆ ಕೋರಿ ಪತ್ನಿ ಸಂಗೀತಾ ಅರ್ಜಿ

Public TV
By Public TV
1 hour ago
BDA Officers
Bengaluru City

4 ಪ್ರತ್ಯೇಕ ಕೇಸ್‌ಗಳಲ್ಲಿ ಬಿಡಿಎ ಅಧಿಕಾರಿಗೆ 1 ಲಕ್ಷ, ಮತ್ತೊಬ್ಬ ಅಧಿಕಾರಿಗೆ 25 ಸಾವಿರ ರೂ. ದಂಡ

Public TV
By Public TV
2 hours ago
Ukraines Kharkiv missile hits
Latest

ಉಕ್ರೇನ್‌ನ ಖಾರ್ಕಿವ್ ಮೇಲೆ ರಷ್ಯಾ ಮಿಸೈಲ್ ದಾಳಿ – ಇಬ್ಬರು ಮಕ್ಕಳು ಸೇರಿ 8 ಮಂದಿ ಸಾವು

Public TV
By Public TV
2 hours ago
Vaibhav Sooryavanshi Uncle Abhishek Chauhan
Cricket

UPSC ಪರೀಕ್ಷೆಯಲ್ಲಿ ಕ್ರಿಕೆಟಿಗ ವೈಭವ್ ಸೂರ್ಯವಂಶಿ ಅಂಕಲ್ ಪಾಸ್

Public TV
By Public TV
2 hours ago
Raichuru Crime
Court

ಕಲ್ಲಿನಿಂದ ಜಜ್ಜಿ ಮಹಿಳೆ ಕೊಲೆ ಕೇಸ್‌ – ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?