CrimeDakshina KannadaDistrictsKarnatakaLatestMain Post

ಸ್ಕೂಟಿ, ಕಾರಿನ ಮಧ್ಯೆ ಭೀಕರ ಅಪಘಾತ – ಅಣ್ಣ, ತಂಗಿ ದಾರುಣ ಸಾವು

ಮಂಗಳೂರು: ಸ್ಕೂಟಿ ಹಾಗೂ ಕಾರಿನ ನಡುವೆ ಭೀಕರ ಅಪಘಾತ (Accident) ಸಂಭವಿಸಿ, ಸ್ಕೂಟಿಯಲ್ಲಿ ಹೋಗುತ್ತಿದ್ದ ಅಣ್ಣ ಹಾಗೂ ತಂಗಿ (Brother and Sister) ದಾರುಣವಾಗಿ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ (ಜಿಲ್ಲೆ ಸುಳ್ಯ (Sulia) ತಾಲೂಕಿನ ಎಲಿಮಲೆ ಬಳಿ ನಡೆದಿದೆ.

ಇಂದು ಮಧ್ಯಾಹ್ನ ಸಂಭವಿಸಿದ ಅಪಘಾತದಲ್ಲಿ ಕಡಪಾಲ ಬಾಜಿನಡ್ಕ ಗ್ರಾಮದ ದೇವಿದಾಸ್ ಅವರ ಮಕ್ಕಳಾದ ನಿಶಾಂತ್ ಹಾಗೂ ಮೋಕ್ಷಾ ತೀವ್ರವಾಗಿ ಗಾಯಗೊಂಡಿದ್ದರು. ಅವರಿಬ್ಬರನ್ನು ಸ್ಥಳೀಯರು ತಕ್ಷಣವೇ ಸುಳ್ಯ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ನಿಶಾಂತ್ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾನೆ. ಮೋಕ್ಷಾಳನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಆಕೆಯೂ ಸಾವನ್ನಪ್ಪಿದ್ದಾಳೆ. ಇದನ್ನೂ ಓದಿ: 873 ಪೊಲೀಸ್‌ ಅಧಿಕಾರಿಗಳಿಗೆ PFI ಜೊತೆ ನಂಟು: NIA

ಮೃತ ನಿಶಾಂತ್ ಸುಳ್ಯ ಜೂನಿಯರ್ ಕಾಲೇಜಿನ ವಿದ್ಯಾರ್ಥಿಯಾಗಿದ್ದು, ಮೋಕ್ಷಾ ದೇವಚಳ್ಳ ಸರ್ಕಾರಿ ಶಾಲೆಯಲ್ಲಿ 5ನೇ ತರಗತಿಯಲ್ಲಿ ಓದುತ್ತಿದ್ದಳು ಎಂಬುದು ತಿಳಿದುಬಂದಿದೆ. ಘಟನೆ ಬಗ್ಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ (Sulya Police Station) ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಹಣ ಕೊಡದಿದ್ರೆ ಅಶ್ಲೀಲ ಫೋಟೋ ರಿಲೀಸ್ ಮಾಡೋ ಬೆದರಿಕೆ- ಮನನೊಂದ ಟೆಕ್ಕಿ ಆತ್ಮಹತ್ಯೆ

Live Tv

Leave a Reply

Your email address will not be published. Required fields are marked *

Back to top button