ಸೆಡಾನ್ ನ 23 ವರ್ಷದ ಚಾಲಕನ ನಿರ್ಲಕ್ಷ್ಯದಿಂದಾಗಿ ಪಂಜಾಬಿಯ ಜನಪ್ರಿಯ ಗಾಯಕ ನಿರ್ವೈರ್ ಸಿಂಗ್ ರಸ್ತೆ ಅಪಘಾತದಲ್ಲಿ ನಿಧನ ಹೊಂದಿದ್ದಾರೆ. ಆಸ್ಟ್ರೇಲಿಯಾದ ಡಿಗ್ಗರ್ಸ್ ರೆಸ್ಟ್ ನಲ್ಲಿರುವ ಬುಲ್ಲಾ ಡಿಗ್ಗರ್ಸ್ ರೆಸ್ಟ್ ರಸ್ತೆಯಲ್ಲಿ ಈ ಭೀಕರ ಅಪಘಾತ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲಕನನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
Advertisement
ಮೆಲ್ಬೋರ್ನ್ ಬಳಿ ಒಟ್ಟು ಮೂರು ವಾಹನಗಳ ನಡುವೆ ಡಿಕ್ಕಿ ಸಂಭವಿಸಿದ್ದು, ಈ ಅಪಘಾತದಲ್ಲಿ ಎರಡು ಮಕ್ಕಳ ತಂದೆಯಾಗಿರುವ, 42ರ ವಯಸ್ಸಿನ ನಿರ್ವೈರ್ ಸಿಂಗ್ ಮೃತಪಟ್ಟಿದ್ದಾರೆ. ಮಹಿಳೆಯೊಬ್ಬರಿಗೆ ಗಾಯವಾಗಿದ್ದು, ಅವರನ್ನು ಸ್ಥಳಿಯ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ. ಪಂಜಾಬ್ ಸಂಗೀತ ಲೋಕದಲ್ಲಿ ತಮ್ಮನ್ನು ತಾವು ಗುರುತಿಸಿಕೊಂಡ ನಂತರ ಸಿಂಗ್, ಒಂಬತ್ತು ವರ್ಷಗಳ ಹಿಂದೆ ಆಸ್ಟ್ರೇಲಿಯಾಗೆ ಬಂದಿದ್ದರು ಎನ್ನಲಾಗುತ್ತಿದೆ. ಇದನ್ನೂ ಓದಿ:ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ‘ಗಂಡುಮಗ’ ಎಂದು ಹಾಡಿ ಹೊಗಳಿದ ಜಗ್ಗೇಶ್
Advertisement
Advertisement
ಪಂಜಾಬ್ ನ ಕುರಾಲಿ ಪ್ರದೇಶದ ಸಿಂಗ್, ಒಂಬತ್ತು ವರ್ಷಗಳ ಹಿಂದೆ ಆಸ್ಟ್ರೇಲಿಯಾದಲ್ಲಿ ನೆಲೆಯೂರಿದ್ದರು. ಒಂದಷ್ಟು ದಿನ ಟ್ಯಾಕ್ಸಿ ಚಾಲಕರಾಗಿಯೂ ಕೆಲಸ ಮಾಡಿದ್ದಾರೆ. ಅಲ್ಲದೇ, ಹಲವಾರು ಆಲ್ಬಂಗೂ ಇವರು ಹಾಡಿದ್ದರು. ಮೈ ಟರ್ನ್ ಎಂಬ ಆಲ್ಬಂಗೆ ಹಾಡಿದ ‘ತೆರೆ ಬಿನಾ’ ಹಾಡು ಇಂದಿಗೂ ಫೇಮಸ್.