ಬಳ್ಳಾರಿ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಒಂದೇ ಕುಟುಂಬದ ಮೂವರು ಮೃತಪಟ್ಟ ಘಟನೆ ಬಳ್ಳಾರಿ – ಸಿರುಗುಪ್ಪ ರಾಜ್ಯ ಹೆದ್ದಾರಿಯ (Ballari – Siruguppa State Highway) ದೇವಿನಗರ ಕ್ಯಾಂಪ್ ಬಳಿ ನಡೆದಿದೆ.
ನಿಟ್ಟೂರು ಗ್ರಾಮದ ಒಂದೇ ಕುಟುಂಬದ 5 ಜನರು ತಮಿಳುನಾಡಿನ (Tamil Nadu) ದೇವಸ್ಥಾನಕ್ಕೆ ತೆರಳಿ ಮರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಇದನ್ನೂ ಓದಿ: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯ ಫಲಿತಾಂಶ ಪ್ರಕಟ
ನಿಟ್ಟೂರು ಗ್ರಾಮದ ಪ್ರಸಾದ್ ರಾವ್ ಹಾಗೂ ಇಬ್ಬರು ಮಹಿಳೆಯರು ಸೇರಿ 3 ಜನ ಸ್ಥಳದಲ್ಲೇ ಮೃತಪಟ್ಟರೆ ಇಬ್ಬರು ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬೆಳಗಿನ ಜಾವ ನಿದ್ದೆಯ ಮಂಪರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಸಿರುಗುಪ್ಪ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

