ಮಂಡ್ಯ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ (Bengaluru-Mangaluru Highway) ಎರಡು ಕಾರುಗಳ (Car) ಮಧ್ಯೆ ಭೀಕರ ಅಪಘಾತ (Accident) ಸಂಭವಿಸಿ ನಾಲ್ವರು ಸಾವನ್ನಪ್ಪಿದ ಘಟನೆ ನಾಗಮಂಗಲ ತಾಲೂಕಿನ ನಾಗತೀಹಳ್ಳಿಯಲ್ಲಿ ನಡೆದಿದೆ.
ಸ್ವಿಫ್ಟ್ ಹಾಗೂ ಇನ್ನೋವಾ ಕಾರುಗಳ ನಡುವೆ ಇಂದು ರಾತ್ರಿ ಭೀಕರವಾದ ಅಪಘಾತ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಚಿಕ್ಕಬಳ್ಳಾಪುರ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ಸೋಮವಾರ ರಜೆ
ಘಟನೆಯಲ್ಲಿ ಸಾವನ್ನಪ್ಪಿರುವವರ ವಿವರ ಇನ್ನೂ ತಿಳಿದುಬಂದಿಲ್ಲ. ಘಟನೆ ಬಿಂಡಗನವಿಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.