ಚಿಕ್ಕೋಡಿ: ರಿಕ್ಷಾ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಬೆಳಗಾವಿ (Belagavi) ಜಿಲ್ಲೆಯ ರಾಯಬಾಗ (Raibhag) ರೈಲು ನಿಲ್ದಾಣದ ಬಳಿ ನಡೆದಿದೆ.
ಮೃತರನ್ನು ರಾಯಬಾಗ ತಾಲೂಕಿನ ಬೊಮ್ಮನಾಳ ಗ್ರಾಮದ ನಿವಾಸಿಗಳಾದ ಬೈಕ್ ಸವಾರ ಮಹಾಂತೇಶ್ ಮಾನೆ, ಅವರ ಪತ್ನಿ ಸಾಕ್ಷಿ ಮಾನೆ ಹಾಗೂ 6 ತಿಂಗಳ ಮಗು ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಜನರಿಗೆ ಮತ್ತೆ ಶಾಕ್ ಶಾಕ್ – ಪೆಟ್ರೋಲ್, ಡೀಸೆಲ್ ಬಳಿಕ ಸಿಎನ್‌ಜಿ ದರ 2 ರೂ. ಏರಿಕೆ
ಪತಿ, ಪತ್ನಿ ಹಾಗೂ ಮಗು ಒಂದೇ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ರಿಕ್ಷಾ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದೆ. ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಈ ಸಂಬಂಧ ರಾಯಬಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: ಕ್ಲೈಮ್ಯಾಕ್ಸ್ ಹಂತಕ್ಕೆ ಕುರ್ಚಿ ಕದನ – ದೆಹಲಿ ಅಂಗಳಕ್ಕೆ ಸಿಎಂ, ಡಿಸಿಎಂ ಬಣ, ಇಂದು ಸಂಧಾನ ಫಿಕ್ಸ್?
