ನವದೆಹಲಿ: ಭಯೋತ್ಪಾದಕರಿಗೆ ಹಣಕಾಸು ನೆರವು ನೀಡಿದ್ದ ಪ್ರಕರಣದಲ್ಲಿ (Terror Funding Case) ಪ್ರತ್ಯೇಕತಾವಾದಿ ನಾಯಕ ಶಬ್ಬೀರ್ ಶಾಗೆ (Shabir Shah) ಸುಪ್ರೀಂ ಕೋರ್ಟ್ (Supreme Court) ಜಾಮೀನು ಮಂಜೂರು ಮಾಡಿದೆ.
ಭಯೋತ್ಪಾದನೆಗೆ ಹಣಕಾಸು ನೆರವು ಮತ್ತು ಕಣಿವೆಯಲ್ಲಿನ ಪ್ರತ್ಯೇಕತಾವಾದಿ ಚಟುವಟಿಕೆಗಳಿಗೆ ಹಣಕಾಸಿನ ನೆರವು ನೀಡಿದ ಆರೋಪಗಳನ್ನು ಶಬ್ಬೀರ್ ಎದುರಿಸುತ್ತಿದ್ದ. 2017 ರಲ್ಲಿ ಕಲ್ಲು ತೂರಾಟ, ಸಾರ್ವಜನಿಕ ಆಸ್ತಿಗೆ ಹಾನಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಧಂಗೆ ನಡೆಸಲು ಸಂಚು ರೂಪಿಸುವ ಮೂಲಕ ಶಾಂತಿಯನ್ನು ಭಂಗಗೊಳಿಸಲು ನಿಧಿ ಸಂಗ್ರಹಿಸುವ ಪಿತೂರಿ ನಡೆಸಿದ ಆರೋಪ ಎದುರಿಸುತ್ತಿದ್ದ. ಇದನ್ನೂ ಓದಿ: ಹೆಚ್‌ಡಿಕೆ ವಿರುದ್ಧ ಲೋಕಾಯುಕ್ತ ಎಡಿಜಿಪಿ ಎಫ್‌ಐಆರ್ – ಸಮಸ್ಯೆ ಇತ್ಯರ್ಥಕ್ಕೆ ಮಧ್ಯಸ್ಥಿಕೆದಾರರ ನೇಮಕಕ್ಕೆ ಹೈಕೋರ್ಟ್ ಸೂಚನೆ
ಈ ಎಲ್ಲಾ ಆರೋಪಗಳ ಮೇಲೆ ಎನ್‍ಐಎ (NIA) 12 ಜನರ ವಿರುದ್ಧ ಪ್ರಕರಣ ದಾಖಲಿಸಿತ್ತು. ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಚಳವಳಿಗೆ ಅನುಕೂಲ ಮಾಡಿಕೊಡುವಲ್ಲಿ ಶಾ ಪ್ರಮುಖ ಪಾತ್ರ ವಹಿಸಿದ್ದ ಎನ್ನಲಾಗಿದೆ.
ಸುಮಾರು ಏಳು ವರ್ಷಗಳ ಕಾಲ ಜೈಲುವಾಸ ಅನುಭವಿಸಿರುವ ಶಾ, ಕಾಶ್ಮೀರದ ಪ್ರತ್ಯೇಕತಾವಾದಿಯಾಗಿ ಹಿಂದಿನಿಂದಲೂ ಗುರುತಿಸಿಕೊಂಡಿದ್ದಾನೆ. ವಿಚಾರಣೆ ವಿಳಂಬವಾದ ಹಿನ್ನೆಲೆ ನ್ಯಾಯಾಲಯ ಆತನಿಗೆ ಜಾಮೀನು ನೀಡಿದೆ. ಇವನ ಪ್ರಕರಣ ಜಮ್ಮು ಮತ್ತು ಕಾಶ್ಮೀರದಲ್ಲಿ ವರ್ಷಗಳಿಂದ ರಾಜಕೀಯ ಚರ್ಚೆಗೂ ಕಾರಣವಾಗಿತ್ತು. ಇದನ್ನೂ ಓದಿ: ಬಿಕ್ಲು ಶಿವ ಕೊಲೆ ಕೇಸ್ – ಬೈರತಿ ಬಸವರಾಜ್‌ಗೆ ಜಾಮೀನು

